ಕೊರೋನ: ರಾಜ್ಯದಲ್ಲಿ ಮತ್ತೆ 22 ಮಂದಿಯಲ್ಲಿ ಸೋಂಕು ಪತ್ತೆ
ಒಟ್ಟು ಸೋಂಕಿತರ ಸಂಖ್ಯೆ 557ಕ್ಕೇರಿಕೆ

ಬೆಂಗಳೂರು, ಎ.30: ರಾಜ್ಯದಲ್ಲಿ ಇಂದು ಮತ್ತೆ 22 ಮಂದಿಯಲ್ಲಿ ಹೊಸದಾಗಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟ್‌ನಲ್ಲಿ ಬುಧವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯೊಳಗೆ ಹೊಸದಾಗಿ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದನ್ನು ಉಲ್ಲೇಖಿಸಲಾಗಿದೆ.
ಇಂದು ಅತೀಹೆಚ್ಚುವ ಸೋಂಕು ಪ್ರಕರಣಗಳು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಇಲ್ಲಿ 8 ವರ್ಷದ ಬಾಲಕಿ, 9 ವರ್ಷದ ಬಾಲಕನೋರ್ವನ ಸಹಿತ 14 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ ಬೆಂಗಳೂರು ನಗರ 3, ವಿಜಯಪುರ 2, ದಕ್ಷಿಣ ಕನ್ನಡ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ ಎಂದು ಬುಲೆಟಿನ್ ತಿಳಿಸಿದೆ.
ಸೋಂಕಿತ 557 ಪ್ರಕರಣಗಳಲ್ಲಿ 223 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 21 ಮಂದಿ ಮೃತಪಟ್ಟಿದ್ದಾರೆ.
Next Story





