ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಪಾಸಿಟಿವ್ ಪ್ರಕರಣ ಪತ್ತೆ

ಮಂಗಳೂರು, ಎ.30: ದ.ಕ. ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರಿನ ಸುಮಾರು 58 ವರ್ಷ ಪ್ರಾಯದ ಮಹಿಳೆಯಲ್ಲಿ ಕೊರೋನ ಸೋಂಕು ದೃಢಗೊಂಡಿದೆ ಎಂದು ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟ್‌ನಲ್ಲಿ ತಿಳಿಸಲಾಗಿದೆ.
ಈ ಮಹಿಳೆಯು ಪಡೀಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆಸ್ಪತ್ರೆಯ ಆಯಾ ಕೆಲಸ ಮಾಡುತ್ತಿದ್ದ ಸಿಬ್ಬಂದಿಯು ಈ ಮಹಿಳೆಯನ್ನು ಉಪಚರಿಸುತ್ತಿದ್ದರು ಎನ್ನಲಾಗಿದೆ. ಪಿ.501 (ಆಯಾ)ರ ಸಂಪರ್ಕದಿಂದ ರೋಗ ತಗುಲಿದೆ. ಮಹಿಳೆಯಲ್ಲಿ ಸೋಂಕು ದೃಢಗೊಂಡ ಹಿನ್ನೆಲೆಯಲ್ಲಿ ಬೋಳೂರು ಪರಿಸರದಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಬುಧವಾರ ರಾತ್ರಿಯಿಂದಲೇ ಇಲ್ಲಿ ಪೊಲೀಸರು ಬ್ಯಾರಿಕೇಡ ಅಳವಡಿಸಿ ಮುನ್ನೆಚ್ಚರಿಕೆ ವಹಿಸಿದ್ದರು.
ಇದು ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಪತ್ತೆಯಾದ ಮೂರನೇ ಮತ್ತು ದ.ಕ. ಜಿಲ್ಲೆಯಲ್ಲಿ ಪತ್ತೆಯಾದ 16ನೇ ಪಾಸಿಟಿವ್ ಪ್ರಕರಣವಾಗಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.











