Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಂಟೈನ್ಮೆಂಟ್ ಝೋನ್ ಅಲ್ಲದ ಕಡೆ ಮೇ 4ರಿಂದ...

ಕಂಟೈನ್ಮೆಂಟ್ ಝೋನ್ ಅಲ್ಲದ ಕಡೆ ಮೇ 4ರಿಂದ ಕೈಗಾರಿಕೆ, ವಾಣಿಜ್ಯ ಚಟುವಟಿಕೆಗೆ ಅವಕಾಶ: ಬಿಎಸ್‌ವೈ

ಚಿತ್ರಮಂದಿರ, ಮಾಲ್‍ ಗಳು ತೆರೆಯುವ ಬಗ್ಗೆ ಸಿಎಂ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ30 April 2020 7:50 PM IST
share
ಕಂಟೈನ್ಮೆಂಟ್ ಝೋನ್ ಅಲ್ಲದ ಕಡೆ ಮೇ 4ರಿಂದ ಕೈಗಾರಿಕೆ, ವಾಣಿಜ್ಯ ಚಟುವಟಿಕೆಗೆ ಅವಕಾಶ: ಬಿಎಸ್‌ವೈ

ಬೆಂಗಳೂರು, ಎ. 30: ರಾಜ್ಯದಲ್ಲಿನ ಕೊರೋನ ವೈರಸ್ ಸೋಂಕು ಪೀಡಿತ 'ಕಂಟೈನ್ಮೆಂಟ್ ಝೋನ್'(ಕೆಂಪು ವಲಯ)ಗಳನ್ನು ಹೊರತುಪಡಿಸಿ ಉಳಿದೆಡೆಗಳಲ್ಲಿ ಮೇ 4ರ ಬಳಿಕ ಕೈಗಾರಿಕೆಗಳು ಸೇರಿ ವಾಣಿಜ್ಯ ಚಟುವಟಿಕೆಗಳನ್ನು ಆರಂಭ ಮಾಡಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಪ್ರಕಟಿಸಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಕೊರೋನ ವೈರಸ್ ಸೋಂಕು ಇನ್ನೂ ಎರಡು ಅಥವಾ ಮೂರು ತಿಂಗಳುಗಳ ಕಾಲ ಮುಂದುವರಿದರೂ ಆಶ್ಚರ್ಯಪಡಬೇಕಿಲ್ಲ. ಸೋಂಕು ನಿಯಂತ್ರಣದ ಮಧ್ಯೆ ಆರ್ಥಿಕ ಚಟುವಟಿಕೆಗಳನ್ನು ನಡೆಸಬೇಕೆಂಬುದು ಪ್ರಧಾನಿ ಮೋದಿಯವರ ಅಪೇಕ್ಷೆಯಾಗಿದೆ. ಹೀಗಾಗಿ ಕೈಗಾರಿಕಾ ಚಟುವಟಿಕೆಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಆತಂಕ ಸೃಷ್ಟಿಸುವ ಸುದ್ದಿಗಳಿಗೆ ಆದ್ಯತೆ ನೀಡಬೇಡಿ: ಸಾರ್ವಜನಿಕರಲ್ಲಿ ಕೊರೋನ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಸುದ್ದಿಗಳನ್ನು ಹೆಚ್ಚೆಚ್ಚು ಬಿತ್ತರ ಮಾಡಬೇಕೇ ಹೊರತು, ಸೋಂಕಿನ ಬಗ್ಗೆ ಅನಗತ್ಯ ಆತಂಕ ಸೃಷ್ಟಿಸುವ ಸುದ್ದಿಗಳಿಗೆ ಆದ್ಯತೆ ನೀಡಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ ಯಡಿಯೂರಪ್ಪ, ಹೊಟೇಲ್‍ಗಳಲ್ಲಿ ಪಾರ್ಸೆಲ್ ಕೊಡಬಹುದು. ಆದರೆ, ಯಾವುದೇ ಹೊಟೇಲ್, ಮಾಲ್‍ಗಳು, ಚಿತ್ರಮಂದಿರಗಳ ಆರಂಭ ಮಾಡುವ ಸಂಬಂಧ ಮೇ 3ರ ಬಳಿಕ ಪ್ರಧಾನಿಯ ಮುಂದಿನ ಸೂಚನೆ ಆಧರಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕೊರೋನ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಸಾರ್ವಜನಿಕರು ಲಾಕ್‍ಡೌನ್ ಪಾಲನೆ ಮಾಡಿದ್ದಾರೆ. ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಂಡಿದ್ದಾರೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವುದು ಬೇಡ ಎಂದ ಯಡಿಯೂರಪ್ಪ, ಸೋಂಕು ನಿಯಂತ್ರಣಕ್ಕೆ ವೈದ್ಯರು ಸೇರಿ ಎಲ್ಲರೂ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದರು.

ಒಂದು ಅವಧಿಗೆ ಅವಕಾಶ: ಕೊರೋನ ಸೋಂಕು ತಡೆಗಟ್ಟಲು ಹೇರಿದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಂತರಾಜ್ಯ ಮತ್ತು ಅಂತರ್ ಜಿಲ್ಲೆಗಳಲ್ಲಿ ಸಿಲುಕಿದವರಿಗೆ ಒಂದು ಅವಧಿಗೆ ತಮ್ಮ ಸ್ವಂತ ಊರುಗಳಿಗೆ ತೆರಳಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ. ಅವರದ್ದೇ ಸ್ವಂತ ಖರ್ಚಿನಲ್ಲಿ ತಮ್ಮ ಸ್ಥಳಗಳಿಗೆ ತೆರಳಬಹುದಾಗಿದ್ದು, ಕೆಎಸ್ಸಾರ್ಟಿಸಿಯಿಂದ ಒಂದು ಅವಧಿಗೆ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಕೈಗಾರಿಕೆಗಳ ಆಡಳಿತ ಮಂಡಳಿಯವರ ಸಂಚಾರಕ್ಕೆ ಅವಕಾಶವಿದ್ದು, ಸ್ಥಳೀಯಾಡಳಿತದಿಂದ ನಿಗದಿತ ಅನುಮತಿ ಪಡೆಯಬೇಕು. ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಲಿದ್ದಾರೆ. ಕೂಲಿ ಕಾರ್ಮಿಕರಿದ್ದರೆ ಅವರಿಗೆ ಒಂದು ಬಾರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಯಾವುದೇ ಕಾರಣಕ್ಕೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಕ್ಷೌರದ ಅಂಗಡಿ(ಹೇರ್ ಕಟಿಂಗ್ ಸೆಲೂನ್)ಗಳನ್ನು ಮೇ 3ರ ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೂ ತೆರೆಯಲು ಅವಕಾಶವಿಲ್ಲ. ಇಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದ್ದು, ಮೇ 3ರ ಬಳಿಕ ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಸೆಲೂನ್‍ಗಳನ್ನು ತೆರೆಯಲು ಕ್ರಮ ವಹಿಸಲಾಗುವುದು ಎಂದರು.

ಮೇ 3ರ ಬಳಿಕ ಮದ್ಯ ಮಾರಾಟ

ರಾಜ್ಯದಲ್ಲಿನ ಮದ್ಯ ಪ್ರಿಯರಿಗೆ ಶೀಘ್ರದಲ್ಲೆ ಶುಭ ಸುದ್ದಿ ಸಿಗುವ ಸಾಧ್ಯತೆಗಳಿದ್ದು, ಮೇ 3ರ ಲಾಕ್‍ಡೌನ್ ಅವಧಿ ಮುಕ್ತಾಯಗೊಂಡ ಬಳಿಕ ಮೇ 4ರಿಂದ ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮದ್ಯ ಮಾರಾಟ ಆರಂಭಿಸಲು ಸರಕಾರ ತೀರ್ಮಾನ ಮಾಡಲಿದೆ

-ಜೆ.ಸಿ.ಮಾಧುಸ್ವಾಮಿ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X