Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನಾ ವಿರುದ್ಧ ಸಮರದಲ್ಲಿ ಮೇ ತಿಂಗಳು...

ಕೊರೋನಾ ವಿರುದ್ಧ ಸಮರದಲ್ಲಿ ಮೇ ತಿಂಗಳು ನಿರ್ಣಾಯಕ: ಲಾಕ್‌ಡೌನ್ ವಿಸ್ತರಣೆಗೆ ಆರೋಗ್ಯ ತಜ್ಞರ ಸಲಹೆ

ವಾರ್ತಾಭಾರತಿವಾರ್ತಾಭಾರತಿ30 April 2020 9:25 PM IST
share
ಕೊರೋನಾ ವಿರುದ್ಧ ಸಮರದಲ್ಲಿ ಮೇ ತಿಂಗಳು ನಿರ್ಣಾಯಕ: ಲಾಕ್‌ಡೌನ್ ವಿಸ್ತರಣೆಗೆ ಆರೋಗ್ಯ ತಜ್ಞರ ಸಲಹೆ

ಹೊಸದಿಲ್ಲಿ, ಎ.20: ದೇಶವನ್ನೇ ತತ್ತರಗೊಳಿಸಿರುವ ಕೊರೋನಾ ವೈರಸ್ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಹೇರಲಾದ ಲಾಕ್‌ಡೌನ್‌ನ ಮೇ 3ರ ಗಡುವು ಸಮೀಪಿಸುತ್ತಿರುವಂತೆಯೇ, ಈ ಮಹಾಮಾರಿಯ ವಿರುದ್ಧದ ಹೋರಾಟದಲ್ಲಿ ಮೇ ತಿಂಗಳು ನಿರ್ಣಾಯಕವಾಗಲಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಿಸಿದ್ದಾರೆ.

ಕೊರೋನ ವೈರಸ್ ವ್ಯಾಪಕವಾಗಿರುವ ಕೆಂಪು ವಲಯಗಳಲ್ಲಿ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸುವ ಕಾರ್ಯತಂತ್ರದ ಜೊತೆಜೊತೆಗೆ ಸೋಂಕಿನ ಹಾವಳಿ ಇಲ್ಲದ ಹಸಿರುವಲಯಳಲ್ಲಿ ಕೆಲವು ಲಾಕ್‌ಡೌನ್ ಸಡಿಲಿಕೆಗಳನ್ನು ಮಾಡಲು ಕೇಂದ್ರ ಸರಕಾರ ಚಿಂತಿಸುತ್ತಿದೆ.

ರೈಲ್ವೆ,ವಾಯುಯಾನ, ಅಂತರ್‌ರಾಜ್ಯ ಬಸ್ ಸೇವೆ, ಮಾಲ್‌ಗಳು, ಶಾಪ್ಪಿಂಗ್ ಸಂಕೀರ್ಣಗಳು, ಧಾರ್ಮಿಕ ಸ್ಥಳಗಳನ್ನು ಕನಿಷ್ಠ ಪಕ್ಷ ಮೇ ತಿಂಗಳಿಡೀ ಮುಚ್ಚುಗಡೆಯಲ್ಲಿಡಬೇಕೆಂದು ತಜ್ಞರು ಶಿಫಾರಸು ಮಾಡಿದ್ದಾರೆ.

ಈಗ ನಡೆಯುತ್ತಿರುವ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ್ನು ಮೇ 3ರ ಆನಂತರವೂ ವಿಸ್ತರಿಸಲಾಗುವ ಬಗ್ಗೆ ಕೇಂದ್ರ ಸರಕಾರವು ಈಗಾಗಲೇ ಸ್ಪಷ್ಟ ಸೂಚನೆಯನ್ನು ನೀಡಿದೆ. ಆದರೆ ಕೊರೋನ ಹಾವಳಿ ನಿಯಂತ್ರಣದಲ್ಲಿರುವ ‘ಅನೇಕ ಜಿಲ್ಲೆಗಳಲ್ಲಿ’ ಜನರು ಹಾಗೂ ಸೇವೆಗಳಿಗೆ ಗಣನೀಯ ರಿಯಾಯಿತಿಗಳನ್ನು ನೀಡುವುದಾಗಿ ಅದು ಸುಳಿವು ನೀಡಿದೆ.

ಕಳೆದ ಹದಿನೈದು ದಿನಗಳ ಅವಧಿಯಲ್ಲಿ ದೇಶದಲ್ಲಿ ಕೊರೋನ ಸೋಂಕಿನ ಹಾಟ್‌ಸ್ಪಾಟ್ ಜಿಲ್ಲೆಗಳ ಸಂಖ್ಯೆ170ರಿಂದ 129ಕ್ಕೆ ಇಳಿದಿದೆ. ಇದೇ ಅವಧಿಯಲ್ಲಿ ಹಸಿರು ವಲಯಗಳಲ್ಲಿರುವ ಸೋಂಕು ಮುಕ್ತ ಜಿಲ್ಲೆಗಳ ಸಂಖ್ಯೆ ಕೂಡಾ325ರಿಂದ 307ಕ್ಕೆ ಕುಸಿದಿದೆಯೆಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿದ್ದವು.

ಆದರೆ ಹಾಟ್‌ಸ್ಪಾಟ್ ಅಲ್ಲದಿದ್ದರೂ ಸೋಂಕಿನ ಪ್ರಕರಣಗಳು ವರದಿಯಾಗಿರುವ ‘ ಕಿತ್ತಳೆ ವಲಯ’ದ ಜಿಲ್ಲೆಗಳ ಸಂಖ್ಯೆ 207ರಿಂದ 297ಕ್ಕೇರಿದೆ.

ಲಾಕ್‌ಡೌನ್‌ನಿಂದಾಗಿ ವೈರಸ್ ನಾಶವಾಗುವುದಿಲ್ಲ, ಆದರೆ ಅದು ರೋಗ ಹರಡುವುದನ್ನು ನಿಧಾನಗೊಳಿಸುತ್ತದೆ ಎಂದು ಫಾರ್ಟಿಸ್ ನೊಯ್ಡ ಆಸ್ಪತ್ರೆಯ ಶ್ವಾಸಾಂಗ ಹಾಗೂ ತೀವ್ರ ನಿಗಾ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ. ರಾಜೇಶ್ ಕುಮಾರ್ ಗುಪ್ತಾ ಹೇಳುತ್ತಾರೆ. ಲಾಕ್‌ಡೌನ್ ಅನ್ನು ಕನಿಷ್ಠ ಪಕ್ಷ ಇನ್ನೂ ಎರಡು ವಾರಗಳವರೆಗಾದರೂ ವಿಸ್ತರಿಸೇಕೆಂದು ಅವರು ಸಲಹೆ ನೀಡಿದ್ದಾರೆ.

ಹಸಿರುಜಿಲ್ಲೆಗಳಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ಅವುಗಳ ಗಡಿಗಳನ್ನು ಸೀಲ್‌ಡೌನ್ ಮಾಡಬೇಕು ಹಾಗೂ ಅಲ್ಲಿ ಸೀಮಿತ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ದಿಲ್ಲಿಯ ‘ಸರ್ ಗಂಗಾರಾಮ್ ಆಸ್ಪತ್ರೆ’ಯ ಶ್ವಾಸಕೋಶ ತಜ್ಞ ಡಾ. ಅರವಿಂದ ಕುಮಾರ್ ಸಲಹೆ ನೀಡಿದ್ದಾರೆ. ಕೈಗಳನ್ನು ಆಗಾಗ್ಗೆ ಸ್ವಚ್ಚಗೊಳಿಸುವುದು ಹಾಗೂ ಮಾಸ್ಕ್ ಧರಿಸುವುದು ಜನತೆಯ ಜೀವನಶೈಲಿಯ ಭಾಗವಾಗಬೇಕೆಂದು ಅವರು ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X