Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ವೈರಸ್ ನಿಯಂತ್ರಣದಲ್ಲಿ ಕಾರ್ಮಿಕರ...

ಕೊರೋನ ವೈರಸ್ ನಿಯಂತ್ರಣದಲ್ಲಿ ಕಾರ್ಮಿಕರ ಸಹಕಾರ ಅಪಾರ: ಯು.ಟಿ.ಖಾದರ್

ಫರಂಗಿಪೇಟೆಯಲ್ಲಿ ಆಟೋ ರಿಕ್ಷಾ, ಗೂಡ್ಸ್ ವಾಹನ, ಪ್ರವಾಸಿ ಕಾರುಗಳ ಚಾಲಕರಿಗೆ ದಿನಸಿ, ತರಕಾರಿ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ1 May 2020 3:19 PM IST
share
ಕೊರೋನ ವೈರಸ್ ನಿಯಂತ್ರಣದಲ್ಲಿ ಕಾರ್ಮಿಕರ ಸಹಕಾರ ಅಪಾರ: ಯು.ಟಿ.ಖಾದರ್

ಬಂಟ್ವಾಳ, ಮೇ.1: ಲಾಕ್‍ಡೌನ್‍ನಿಂದಾಗಿ ಒಂದೂವರೆ ತಿಂಗಳಿನಿಂದ ಕೆಲಸವಿಲ್ಲದೆ ಕುಟುಂಬದ ನಿರ್ವಾಹಣೆ ಹಾಗೂ ಊಟಕ್ಕೆ ಕಷ್ಟವಾದರೂ ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸಲು ಆಟೋ ರಿಕ್ಷಾ, ಗೂಡ್ಸ್ ವಾಹನ, ಪ್ರವಾಸಿ ಕಾರುಗಳ ಚಾಲಕರು ಹಾಗೂ ಕಾರ್ಮಿಕ ವರ್ಗ ಸಂಪೂರ್ಣ ಸಹಕಾರ ನೀಡಿದೆ. ಇದಕ್ಕಾಗಿ ಇಡೀ ಸಮಾಜ ಅವರಿಗೆ ವಿಶೇಷವಾಗಿ ಕೃತಜ್ಞತೆ ಸಲ್ಲಿಸಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ಕಾರ್ಮಿಕರ ದಿನದ ಅಂಗವಾಗಿ ಫರಂಗಿಪೇಟೆ ಮತ್ತು ಮೇರಮಜಲು ಗ್ರಾಮದ 280 ಆಟೋ ರಿಕ್ಷಾ, ಗೂಡ್ಸ್ ವಾಹನ ಹಾಗೂ ಪ್ರವಾಸಿ ಕಾರುಗಳ ಚಾಲಕರಿಗೆ ವೈಯಕ್ತಿಕ ಖರ್ಚಿನಲ್ಲಿ ಶುಕ್ರವಾರ ಫರಂಗಿಪೇಟೆಯಲ್ಲಿ ಆಹಾರ ಸಮಾಗ್ರಿ ಹಾಗೂ ತರಕಾರಿ ಕಿಟ್‍ಗಳನ್ನು ವಿತರಿಸಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರು, ಆಟೋ ರಿಕ್ಷಾ, ಗೂಡ್ಸ್ ವಾಹನ, ಪ್ರವಾಸಿ ಕಾರುಗಳ ಚಾಲಕರ ಕೊಡುಗೆ ಅಪಾರವಾಗಿದೆ. ವರ್ಷ ಪೂರ್ತಿ ಬೆವರು ಸುರಿಸಿ ಅವರು ಪಡುವ ಶ್ರಮದಿಂದ ದೇಶ ಅಭಿವೃದ್ಧಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಸಮಾಜಕ್ಕೆ ಕಾಣುತ್ತಿಲ್ಲ. ಎಲ್ಲಾ ಕಾರ್ಮಿಕ ವರ್ಗದವರಿಗೆ ಕಾರ್ಮಿಕ ದಿನದ ಶುಭಾಷಯಗಳು ಎಂದು ಹೇಳಿದರು.

ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಸರಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಆದರೆ ಸರಕಾರದ ಯಾವುದೇ ಕಾರ್ಯಕ್ರಮ ಗಳು ಕಾರ್ಮಿಕರಿಗೆ ತಲುಪುತ್ತಿಲ್ಲ. ಇಂದು ಕಾರ್ಮಿಕರು ಭಾರೀ ಸಂಕಷ್ಟದಲ್ಲಿ ಇದ್ದು ಕಾರ್ಮಿಕರ ಎಲ್ಲಾ ಸವಲತ್ತುಗಳನ್ನು ಕಾರ್ಮಿಕರಿಗೆ ತಲುಪಿ ಸುವ ಕೆಲಸವನ್ನು ಸರಕಾರ ಕೂಡಲೇ ಮಾಡಬೇಕು. ಕಾರ್ಮಿಕರ ಕುಟುಂಬಗಳು ಸ್ವಾಭಿಮಾನದಿಂದ ಜೀವನ ನಡೆಸಲು ಸರಕಾರ ಅನುವು ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸರಕಾರ ಸ್ಪಂದಿಸಬೇಕು. ಕರ್ನಾಟಕ ಸರಕಾರ ಕಾರ್ಮಿಕರು, ಆಟೋ ರಿಕ್ಷಾ, ಗೂಡ್ಸ್ ವಾಹನ, ಪ್ರವಾಸಿ ಕಾರುಗಳ ಚಾಲಕರಿಗೆ ಕೇರಳ ಸರಕಾರದ ಮಾದರಿಯಲ್ಲಿ ಭತ್ಯೆ ನೀಡಬೇಕು. ಕಾರ್ಮಿಕರಿಗೆ ಭತ್ಯೆ ನೀಡುವುದು ಕೇರಳದಲ್ಲಿ ಸಾಧ್ಯವಾಗುವುದಾದರೆ ನಮ್ಮ ರಾಜ್ಯದಲ್ಲಿ ಯಾಕೆ ಸಾಧ್ಯವಾಗುವುದಿಲ್ಲ ಎಂದು ಪ್ರಶ್ನಿಸಿದ ಯು.ಟಿ.ಖಾದರ್, ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿ ಸುವ ಮೂಲಕ ಸರಕಾರ ಕಾರ್ಮಿಕ ದಿನಾಚರಣೆಯನ್ನು ಆಚರಿಸಬೇಕು ಎಂದರು.

ಈ ಸಂದರ್ಭದಲ್ಲಿ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಲ್ಲ, ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಆಸೀಫ್ ಇಕ್ಬಾಲ್, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್ ಸುಜೀರ್, ರಂದ ಪೂಜಾರಿ, ಮುಹಮ್ಮದ್ ಮೋನು, ಭಾಸ್ಕರ್ ರೈ, ಝಾಹಿರ್, ಮೇರ ಮಜಲು ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಪೇರಿಮಾರ್, ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಮಜೀದ್ ಫರಂಗಿಪೇಟೆ, ಮಾರಿಪಲ್ಲ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಜಾಫರ್ ಸುಜೀರ್, ಉಪಾಧ್ಯಕ್ಷ ಇಂಶಾದ್ ಮಾರಿಪಲ್ಲ, ಮೇರಮಜಲು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಮುಹಮ್ಮದ್ ಮೋನು, ಪ್ರವಾಸಿ ಕಾರು ಚಾಲಕ ಮಾಲಕರ ಸಂಘದ ಅಧ್ಯಕ್ಷ ಇಮ್ರಾನ್, ಗೂಡ್ಸ್ ಟೆಂಪೊ ಚಾಲಕ ಮಾಲಕರ ಸಂಘದ ಅಧ್ಯಕ್ಷ ಇಸ್ಮಾಯೀಲ್ ಹತ್ತನೇಮೈಲುಗಲ್ಲು ಸಹಿತ ಪ್ರಮುಖರಾದ ಎಂ.ಕೆ.ಮುಹಮ್ಮದ್, ಇಮ್ತಿಯಾಝ್ ಆಲ್ಫಾ ತುಂಬೆ, ಇಬ್ರಾಹೀಂ ವಲವೂರು, ಹುಸೈನ್ ಪಡಿ, ಸಲಾಂ ಮಲ್ಲಿ, ಮಜೀದ್ ಪೇರಿಮಾರ್, ಇಸ್ಮಾಯೀಲ್ ಹತ್ತನೇಮೈಲುಗಲ್ಲು, ಗಫೂರ್ ಫರಂಗಿಪೇಟೆ, ಹಕೀಂ ಮಾರಿಪಲ್ಲ, ಹಾಶಿಂ ಮಾರಿಪಲ್ಲ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X