ಕೊರೋನ ವೈರಸ್ : ದ.ಕ.ಜಿಲ್ಲೆಯಲ್ಲಿ 234 ವರದಿ ನೆಗೆಟಿವ್, 2 ಪಾಸಿಟಿವ್
ಇನ್ನೂ 662 ವರದಿ ಬರಲು ಬಾಕಿ

ಮಂಗಳೂರು, ಮೇ 1: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಶುಕ್ರವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 236 ವರದಿಗಳ ಪೈಕಿ 234 ವರದಿ ನೆಗೆಟಿವ್ ಮತ್ತು 2 ಪಾಸಿಟಿವ್ ಬಂದಿದೆ. ಇನ್ನೂ 662 ಮಂದಿಯ ವರದಿ ಬರಲು ಬಾಕಿ ಇದೆ.
ಶುಕ್ರವಾರ 135 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಇದರೊಂದಿಗೆ ಈವರೆಗೆ 39,909 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಅಲ್ಲದೆ ಶುಕ್ರವಾರ 351 ಮಂದಿಯ ಗಂಟಲಿನ ದ್ರವದ ಮಾದರಿಯನ್ನು ವೆನ್ಲಾಕ್ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜ್ವರ ಕ್ಲಿನಿಕ್‌ಗಳಲ್ಲಿ ಈವರೆಗೆ 3039 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ.
ಎನ್‌ಐಟಿಕೆಯಲ್ಲಿ 59 ಮತ್ತು ಇಎಸ್‌ಐ ಆಸ್ಪತ್ರೆಯಲ್ಲಿ 40 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. ಉಳಿದಂತೆ 8 ಮಂದಿಯ ಮೇಲೆ ವಿಶೇಷ ನಿಗಾ ಇಡಲಾಗಿದೆ. ಈವರೆಗೆ 3471 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 2,809 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 2785 ಮಂದಿಯ ವರದಿಯು ನೆಗೆಟಿವ್ ಮತ್ತು 24 ಮಂದಿಯ ವರದಿಯು ಪಾಸಿಟಿವ್ ಬಂದಿದೆ. ಪಾಸಿಟಿವ್ ಪೈಕಿ 18 ದ.ಕ.ಜಿಲ್ಲೆಯ ನಿವಾಸಿಗಳು, ಕೇರಳದ 4, ಉಡುಪಿಯ 1 ಮತ್ತು ಭಟ್ಕಳದ 1 ಪ್ರಕರಣ ಸೇರಿವೆ. ಪಾಸಿಟಿವ್‌ಗಳ ಪೈಕಿ 12 ಮಂದಿ ಗುಣ ಮುಖರಾಗಿ ಆಸ್ಪತ್ರೆಯಿಂದ ಈಗಾಗಲೆ ಬಿಡುಗಡೆಗೊಂಡಿದ್ದರೆ, ದಂಪತಿ ಸಹಿತ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎ.19ರಂದು ಮಹಿಳೆ ಮತ್ತು ಎ.24 ಹಾಗೂ ಎ. 30ರಂದು ಇಬ್ಬರು ವೃದ್ಧೆಯರು ಮೃತಪಟ್ಟಿದ್ದಾರೆ.







