ಮೈಸೂರಿನಲ್ಲಿ ಇದುವರೆಗೆ 90 ಕೊರೋನ ಸೋಂಕಿತರ ಪೈಕಿ 66 ಮಂದಿ ಗುಣಮುಖ

ಸಾಂದರ್ಭಿಕ ಚಿತ್ರ
ಮೈಸೂರು,ಮೇ.1: ಮೈಸೂರಿನಲ್ಲಿ ಮತ್ತೋರ್ವ ಕೊರೋನ ಸೋಂಕಿತ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಇಂದು ಸಹ ಓರ್ವ ವ್ಯಕ್ತಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 24 ಕೊರೋನ ಸೋಂಕಿತ ವ್ಯಕ್ತಿಗಳು ಚಿಕಿತ್ಸೆ ಪಡೆಯುತ್ತಿದ್ದು,
ಇದುವರೆಗೆ ಒಟ್ಟು 66 ಮಂದಿ ಕೊರೋನ ಸೋಂಕಿತ ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 90 ಮಂದಿಗೆ ಕೊರೋನ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಅವರು ತಿಳಿಸಿದರು.
Next Story





