Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊರ ರಾಜ್ಯದಿಂದ ಬಂದಲ್ಲಿ ಕಡ್ಡಾಯ ಸರಕಾರಿ...

ಹೊರ ರಾಜ್ಯದಿಂದ ಬಂದಲ್ಲಿ ಕಡ್ಡಾಯ ಸರಕಾರಿ ಕ್ವಾರಂಟೈನ್ : ಜಿಲ್ಲಾಧಿಕಾರಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ2 May 2020 8:36 PM IST
share
ಹೊರ ರಾಜ್ಯದಿಂದ ಬಂದಲ್ಲಿ ಕಡ್ಡಾಯ ಸರಕಾರಿ ಕ್ವಾರಂಟೈನ್ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಮೇ 2: ಹೊರರಾಜ್ಯದಿಂದ ಜಿಲ್ಲೆಗೆ ಆಗುಮಿಸುವವರು ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್‌ಗೆ ಒಳಪಡುವ ಷರತ್ತಿನೊಂದಿಗೆ, ಉಡುಪಿ ಜಿಲ್ಲೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಗೆ ಅಂತರ್ ಜಿಲ್ಲೆ/ ರಾಜ್ಯದಿಂದ ಜನರನ್ನು ಕರೆತರುವ ಮತ್ತು ಕಳುಹಿಸಿಕೊಡುವಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ನಾಗರಿಕರ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಹೊರರಾಜ್ಯದಿಂದ ಬರುವವರು ಮತ್ತು ಹೊರ ಜಿಲ್ಲೆ ಗಳಿಂದ ಬರುವವರು ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್‌ಗೆ ಒಳಪಡ ಬೇಕಾಗುತ್ತದೆ. ಜಿಲ್ಲಾಧಿಕಾರಿಗಳು ಒಪ್ಪಿಗೆ ಸೂಚಿಸುವ ವರೆಗೂ ಜಿಲ್ಲೆಯ ಗಡಿ ಯಲ್ಲಿ, ಹೊರ ರಾಜ್ಯದಿಂದ ಆಗುಮಿಸುವ ಯಾವುದೇ ವಾಹನಗಳಿಗೆ ಪ್ರವೇಶ ನೀಡದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಹೊರ ರಾಜ್ಯಗಳಿಂದ ಆಗಮಿಸುವವರನ್ನು ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ವ್ಯೆದ್ಯಕೀಯ ಪರೀಕ್ಷೆಗೆ ಒಳಪಡಿಸಿ ಸಂಬಂದಪಟ್ಟ ತಾಲೂಕು ಕೇಂದ್ರಗಳಿಗೆ ಕಳುಹಿಸಲಾಗುವುದು. ಅಲ್ಲಿ ಸರಕಾರಿ ಕ್ವಾರಂಟೈನ್‌ಗಾಗಿ ವಿವಿಧ ಹಾಸ್ಟಲ್ ಹಾಗೂ ಹೊಟೇಲ್‌ಗಳನ್ನು ನಿಗದಿಗೊಳಿ ಸಲಾಗಿದೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆಗುವವರು ಹೋಟೆಲ್ ವೆಚ್ಚವನ್ನು ಸ್ವತಹ ಭರಿಸಬೇಕು. ಇದಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕು ಗಳಲ್ಲಿ ಹಾಸ್ಟೆಲ್‌ಗಳು ಮತ್ತು ಹೋಟೆಲ್ ಗಳನ್ನು ಗುರುತಿಸುವಂತೆ ಎಲ್ಲಾ ತಹಶೀಲ್ಧಾರ್‌ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ಪ್ರತೀ ಗ್ರಾಮಪಂಚಾಯತ್‌ಗಳಲ್ಲಿ ಹೊರರಾಜ್ಯದಿಂದ ಬರುವ ಕನಿಷ್ಠ 25 ಜನರನ್ನು ಕ್ವಾರಂಟೈನ್ ಮಾಡಲು ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಎಲ್ಲಾ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಜಿ.ಜಗದೀಶ್ ಸೂಚಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ ದಿನಬಳಕೆ ವಸ್ತು ಖರೀದಿಗೆ ನೀಡಿರುವ ಸಮಯವನ್ನು ಬೆಳಗ್ಗೆ 7ರಿಂದ ಅಪರಾಹ್ನ 1:00ರವರೆಗೆ ವಿಸ್ತರಿಸಲಾಗಿದ್ದು, ಸಂಜೆ 5ರಿಂದ 7 ರವರೆಗೆ ಅಂಗಡಿಗಳಲ್ಲಿ ಕೆಲಸ ಮಾಡುವ ನೌಕರರು ಮನೆಗೆ ತೆರಳಲು ಅವಕಾಶ ನೀಡಲಾಗುವುದು. ಜಿಲ್ಲೆಯೊಳಗಿನ ಬಸ್ ಸಂಚಾರವನ್ನು ಇನ್ನೂ ಒಂದು ವಾರ ಕಾಲ ಆರಂಭಿಸುವುದಿಲ್ಲ. ಅದೇ ರೀತಿ ಸಲೂನ್, ಸ್ಪಾಗಳನ್ನೂ ಸಹ ಇನ್ನೂ ಒಂದು ವಾರ ತೆರೆಯಲು ಅವಕಾಶವಿಲ್ಲ. ರಿಕ್ಷಾಗಳಲ್ಲಿ ಒಬ್ಬ ಗ್ರಾಹಕರನ್ನು ಮಾತ್ರ ಕರೆದೊಯ್ಯಲು ಅವಕಾಶದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಅಂತರ ಜಿಲ್ಲಾ ಪ್ರವಾಸಕ್ಕೆ ಅನುಮತಿ ಇಲ್ಲವಾಗಿದ್ದು, ವೈದ್ಯಕೀಯ ಕಾರಣ ಹೊರತುಪಡಿಸಿ ಇತರೆ ಕಾರಣಕ್ಕೆ ಪಾಸ್‌ಗಳನ್ನು ನೀಡುವುದಿಲ್ಲ. ಪಾಸ್ ಇಲ್ಲದೇ ಅಕ್ರಮ ಪ್ರವೇಶಿಸವವರನ್ನು ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್‌ಗೆ ಒಳಪಡಿಸ ಲಾಗುವುದು ಎಂದು ಹೇಳಿದರು.

ಹೊರರಾಜ್ಯಗಳಿಗೆ ತೆರಳಬೇಕಾದವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಹೊರರಾಜ್ಯ ಗಳಿಗೆ ತೆರಳುವವರನ್ನು ಬೀಡಿನಗುಡ್ಡೆ ಮೈದಾನದಲ್ಲಿ ಪರೀಕ್ಷಿಸಿ, ಅನುಮತಿ ಬಂದ ನಂತರ ಕಳುಹಿಸುವ ವ್ಯವಸ್ಥೆ ಮಾಡಲಾಗು ವುದು. ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರನ್ನು ನಾಳೆ ರಾತ್ರಿಯೊಳಗೆ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಅವರು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್ ಉಪಸ್ಥಿತರಿದ್ದರು. ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ಧಾರ್‌ಗಳು, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X