Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೌಕ್‌ಡೌನ್ ಬಳಿಕ ದೇಶದ ಶೇ.73 ವಲಸೆ...

ಲೌಕ್‌ಡೌನ್ ಬಳಿಕ ದೇಶದ ಶೇ.73 ವಲಸೆ ಕಾರ್ಮಿಕರಿಗೆ ಸಂಪಾದನೆಯೇ ಇಲ್ಲ!

ಅಸಂಘಟಿತ ಕಾರ್ಮಿಕರು, ದಿನಗೂಲಿ ಕಾರ್ಮಿಕರ ಸ್ಥಿತಿ ಶೋಚನೀಯ ► ಸಮೀಕ್ಷಾ ವರದಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ2 May 2020 10:26 PM IST
share
ಲೌಕ್‌ಡೌನ್ ಬಳಿಕ ದೇಶದ ಶೇ.73 ವಲಸೆ ಕಾರ್ಮಿಕರಿಗೆ ಸಂಪಾದನೆಯೇ ಇಲ್ಲ!

ಹೊಸದಿಲ್ಲಿ,ಮೇ 2: ಕೊರೋನ ವೈರಸ್ ಹರಡುವುದನ್ನು ತಡೆಯಲು ದೇಶದ್ಯಾಂತ ಲಾಕ್‌ಡೌನ್ ಹೇರಿರುವುದರಿಂದ ಉದ್ಯೋಗವಿಲ್ಲದೆ ಅತಂತ್ರರಾಗಿರುವ ವಲಸೆ ಕಾರ್ಮಿಕರ ಪೈಕಿ ಕೇವಲ ಶೇ.6 ಮಂದಿಗೆ ಮಾತ್ರವೇ ಎಪ್ರಿಲ್ 26ರವರೆಗೆ ಪೂರ್ಣ ವೇತನ ದೊರೆತಿದೆಯೆಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.

 ‘ಸಂಕಷ್ಟದಲ್ಲಿರುವ ಕಾರ್ಮಿಕರ ಕ್ರಿಯಾ ಜಾಲ’ ಎಂಬ ಸಂಘಟನೆ ಈ ಸಮೀಕ್ಷಾ ವರದಿಯನ್ನು ತಯಾರಿಸಿದೆ. ಸಮೀಕ್ಷೆಗಾಗಿ ಸಂಪರ್ಕಿಸಿದ ಶೇ.78 ಮಂದಿಗೆ ಎಪ್ರಿಲ್ 26ರ ಬಳಿಕ ವೇತನವೇ ದೊರೆತಿಲ್ಲವೆಂದು ವರದಿ ಹೇಳಿದೆ. 73 ಮಂದಿ ಕಾರ್ಯಕರ್ತರ ತಂಡವೊಂದು ಈ ಸಮೀಕ್ಷೆಯನ್ನು ನಡೆಸಿತ್ತು. ಸುಮಾರು 19,929 ವಲಸೆ ಕಾರ್ಮಿಕರು ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.

 ಲಾಕ್‌ಡೌನ್ ಹೇರಿಕೆಯ ಆನಂತರದ 32 ದಿನಗಳಲ್ಲಿ ಬೀದಿ ವ್ಯಾಪಾರಿಗಳು ಹಾಗೂ ಸೈಕಲ್‌ರಿಕ್ಷಾ ಚಾಲಕರಂತಹ ಸ್ವ ಉದ್ಯೋಗಿಗಳ ಪೈಕಿಶೇ.99ಕ್ಕೂ ಅಧಿಕ ಮಂದಿಗೆ ಯಾವುದೇ ಹಣ ಸಂಪಾದನೆಯಾಗಿಲ್ಲವೆಂದು ಸಮೀಕ್ಷೆ ಹೇಳಿದೆ.

 ಈ ಸ್ವಯಂಸೇವಾ ಸಂಘಟನೆಯು ಸಮೀಕ್ಷೆಗಾಗಿ ಸಂಪರ್ಕಿಸಿದ 16,863 ಕಾರ್ಮಿಕರ ಪೈಕಿ ಶೇ.59 ಮಂದಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ದಿನಗೂಲಿಗಳು ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದಾರೆ. ಶೇ.11 ಮಂದಿ ಚಾಲಕರು ಹಾಗೂ ಮನೆಕೆಲಸದಾಳುಗಳಂತಹ ಅಸಂಘಟಿತ ದಿನಗೂಲಿ ಕಾರ್ಮಿಕರು ಹಾಗೂ ಶೇ.16 ಮಂದಿ ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ಈ ವಲಸೆ ಕಾರ್ಮಿಕರು ಸರಾಸರಿ ದೈನಂದಿನ ಆದಾಯವು 380 ರೂ. ಆಗಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಸಂಘಟನೆಯು ಸಂಪರ್ಕಿಸಿದ ಶೇ.87ರಷ್ಟು ಕಾರ್ಮಿಕರಿಗೆ ಎಪ್ರೀಲ್ 14ರವರೆಗೆ ಅವರ ಮಾಲಕರು ಯಾವುದೇ ವೇತನವನ್ನು ಪಾವತಿಸಿಲ್ಲವಾದರೆ, ಶೇ.13 ಮಂದಿಗೆ ಭಾಗಶಃ ವೇತನ ದೊರೆತಿದೆ. ಎಪ್ರಿಲ್ 26ರವರೆಗೆ ಅವರಲ್ಲಿ ಶೇ.6ರಷ್ಟು ಮಂದಿ ಪೂರ್ಣವೇತನವನ್ನು ಮಾತ್ರವೇ ಪಡೆಯಲು ಸಾಧ್ಯವಾಗಿದ್ದರೆ, ಶೇ.16ರಷ್ಟು ಮಂದಿಗೆ ಭಾಗಶಃ ವೇತನ ದೊರೆತಿದೆ.

ತಮಗೆ ಹಿಂದಿನ ತಿಂಗಳ ವೇತನ ಕೂಡಾ ದೊರೆತಿಲ್ಲವೆಂದು ಸಮೀಕ್ಷೆಯಲ್ಲಿ ಪಾಲ್ಗೊಂಡ ಹೆಚ್ಚಿನ ಕಾರ್ಖಾನೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ. ಇವರಲ್ಲಿ ಹೆಚ್ಚಿನವರು ಲಾಕ್‌ಡೌನ್ ಬಳಿಕ ಊಟ ಹಾಗೂ ವಸತಿಗೆ , ಕಳಪೆ ವ್ಯವಸ್ಥೆಯ ತಾತ್ಕಾಲಿಕ ಶಿಬಿರಗಳಲ್ಲಿ ಉಳಿದುಕೊಳ್ಳಬೇಕಾಗಿದೆ. ಈಗಲೇ ತಮ್ಮ ಊರುಗಳಿಗೆ ತೆರಳಿದಲ್ಲಿ ತಮಗೆ ಬರಬೇಕಾದ ಬಾಕಿ ವೇತನವೂ ಸಿಗದೆಂಬ ಆತಂಕದಿಂದಾಗಿ ಅವರು ನಗರ ಕೇಂದ್ರಗಳಲ್ಲೇ ಉಳಿದುಕೊಂಡಿದ್ದಾರೆಂದು ಸಮೀಕ್ಷಾ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X