Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು...

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರುವ ಬಗ್ಗೆ ಕೇಂದ್ರಕ್ಕೆ ಮನವಿ: ಡಿಸಿಎಂ ಡಾ.ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ3 May 2020 8:52 PM IST
share
ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರುವ ಬಗ್ಗೆ ಕೇಂದ್ರಕ್ಕೆ ಮನವಿ: ಡಿಸಿಎಂ ಡಾ.ಅಶ್ವಥ್ ನಾರಾಯಣ

ಬೆಂಗಳೂರು, ಮೇ. 3: ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು ದೇಶಕ್ಕೆ ಹಿಂದಿರುಗಲು ವಿಮಾನಯಾನ ಸೌಕರ್ಯ ಕಲ್ಪಿಸುವ ಸಂಬಂಧ ಕೇಂದ್ರಕ್ಕೆ ಮನವಿ ಮಾಡಲಾಗುವುದು. ಅಲ್ಲದೆ, ವಾಪಸ್ ಬಂದವರಿಗೆ ಸೂಕ್ತ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ.

ರವಿವಾರ ದುಬೈ ಕನ್ನಡಿಗರ ಜತೆ ವಿಡಿಯೋ ಸಂವಾದ ನಡೆಸಿದ ಅವರು, ದುಬೈ ಕನ್ನಡಿಗರ ಸಮಸ್ಯೆಯನ್ನು ಆಲಿಸಿದರು. ಅಲ್ಲದೆ, ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸರಕಾರದ ಕಡೆಯಿಂದ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು. ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ಆಹಾರ, ಆರೋಗ್ಯ ಹಾಗೂ ಕಾನೂನು ಸೇವೆ ಒದಗಿಸಲು ಅಲ್ಲಿನ ಅನಿವಾಸಿ ಉದ್ಯಮಿಗಳು, ವೃತ್ತಿಪರರು ವೆಬ್‍ಸೈಟ್ ಆರಂಭಿಸಿ ನೆರವು ಒದಗಿಸುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದೇಶಗಳಿಂದ ಬರುವ 10-12 ಸಾವಿರ ಜನರಿಗೆ ಕ್ವಾರಂಟೈನ್ ವ್ಯವಸ್ಥೆಯನ್ನೂ ರಾಜ್ಯ ಸರಕಾರದ ಕಡೆಯಿಂದ ಮಾಡಲಾಗುತ್ತದೆ. ವಿದೇಶದಲ್ಲಿ ಉದ್ಯೋಗ ಕಳೆದುಕೊಂಡು ಭಾರತಕ್ಕೆ ಹಿಂದಿರುಗಿದವರ ಪೈಕಿ ಅಗತ್ಯ ಇರುವವರಿಗೆ ವೃತ್ತಿಪರ ಕೌಶಲ್ಯ ತೆರಬೇತಿ ವ್ಯವಸ್ಥೆ ಮಾಡಲಾಗುವುದು. ಮುದ್ರಾ ಯೋಜನೆಯಡಿ ಉದ್ದಿಮೆ ಆರಂಭಿಸಲು ಅಗತ್ಯ ಹಣಕಾಸು ನೆರವು ಪಡೆಯಬಹುದು. ಜತೆಗೆ ಕೋರಿಕೆ ಮೇರೆಗೆ ನಿರ್ದಿಷ್ಟ ಸಿಬಿಎಸ್ಸಿ ಶಾಲೆಗಳಲ್ಲಿ ಅನಿವಾಸಿ ಭಾರತೀಯರ ಮಕ್ಕಳ ಪ್ರವೇಶಕ್ಕೆ ಸಹಕರಿಸಲಾಗುವುದು. ದುಬೈನಲ್ಲಿ 10-15 ಕಾರ್ಮಿಕರು ಒಂದೇ ಕೊಠಡಿಯಲ್ಲಿ ಇರುತ್ತಾರೆ. ಆ ಪೈಕಿ ಒಬ್ಬರಿಗೆ ಸೋಂಕಿದ್ದರೂ ಉಳಿದವರಿಗೂ ಅಪಾಯ ತಪ್ಪಿದಲ್ಲ. ಹೀಗಾಗಿ ಅಂತವರ ಕ್ವಾರಂಟೈನ್ ವ್ಯವಸ್ಥೆಗೆ ನೆರವಾಗಬೇಕು ಎಂಬ ಮನವಿಗೆ ಸ್ಪಂದಿಸಿದ ಅವರು, ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ನೆರವು ಒದಗಿಸಲು ಒತ್ತಾಯಿಸಲಾಗುತ್ತದೆ. ವಿದೇಶಗಳಿಂದ ಬರುವವರನ್ನು ಹೊಟೇಲ್‍ಗಳಲ್ಲಿ ಪ್ರತ್ಯೇಕವಾಗಿ ಇರಿಸಿ, ಅಗತ್ಯ ಸೌಕರ್ಯ ಒದಗಿಸಲಾಗುತ್ತದೆ ಎಂದರು.

ಹೆಲ್ಪ್ ಲೈನ್: ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ನೆರವಿಗೆ ಅನಿವಾಸಿ ಭಾರತೀಯ ಉದ್ಯಮಿಗಳು ಹಾಗೂ ವೃತ್ತಿಪರರನ್ನೊಳಗೊಂಡ 20 ಜನರ ಸಮಾನ ಮನಸ್ಕರ ತಂಡ ಕನ್ನಡಿಗ ಹೆಲ್ಪ್ ಲೈನ್-ವೆಬ್‍ಸೈಟ್ ಆರಂಭಿಸಿದೆ. ವೆಬ್‍ಸೈಟ್‍ನಲ್ಲಿ ನೋಂದಾಯಿಸಿಕೊಂಡು ಸಹಾಯ ಕೋರಿದವರಿಗೆ ಆಹಾರದ ಕಿಟ್‍ಗಳನ್ನು ಒದಗಿಸಲಾಗುತ್ತಿದೆ.

ದುಬೈನಲ್ಲಿ ಒಂದು ಲಕ್ಷ ಕನ್ನಡಿಗರು ಇದ್ದು, ಸುಮಾರು 20 ಸಾವಿರ ಮಂದಿಗೆ ತೊಂದರೆ ಆಗಿದೆ. ಕನ್ನಡಿಗ ಹೆಲ್ಪ್ ಲೈನ್ ಮೂಲಕ ಇಪ್ಪತ್ತು ದಿನಗಳಿಂದ ಅಸಹಾಯಕರಿಗೆ ನೆರವು ನೀಡಲಾಗುತ್ತಿದೆ. ಭಾರತಕ್ಕೆ ವಾಪಸಾಗಲು ಬಯಸುವವರಿಗೆ ಸರಕಾರದ ನೆರವು ಬೇಕು. ಪ್ರವಾಸಿ ವೀಸಾದಲ್ಲಿ ಬಂದಿರುವ 270 ಮಂದಿಗೆ ಉದ್ಯೋಗ, ಆಶ್ರಯ ಇಲ್ಲ. ಅವರ ಕಷ್ಟಗಳಿಗೆ ಸರಕಾರ ಸ್ಪಂದಿಸಬೇಕು ಎಂದು ಉದ್ಯಮಿ ಪ್ರವೀಣ್ ಶೆಟ್ಟಿ ಮನವಿ ಮಾಡಿದರು.

ಕೇರಳ ರಾಜ್ಯದ ಮಾದರಿಯಲ್ಲೆ ಎನ್‍ಆರ್‍ಐಗಳಿಗೆ ಹಣ ಪಡೆದು ಕ್ವಾರಂಟೈನ್ ವ್ಯವಸ್ಥೆ ಮಾಡಬಹುದು. ವೃದ್ದರು, ಗರ್ಭಿಣಿಯರು ಹಾಗೂ ಆಸ್ಪತ್ರೆಯಲ್ಲಿ ಎಲ್ಲರ ಜತೆ ಇರಲು ಬಯಸದವರು ಪ್ರತ್ಯೇಕ ವ್ಯವಸ್ಥೆ ಮಾಡಲು ಇಚ್ಚಿಸಿದವರಿಗೆ ಅಂತಹವರಿಂದ ಹಣ ಪಡೆದು ಸೂಕ್ತ ಸೌಕರ್ಯ ಕಲ್ಪಿಸಬಹುದು ಎಂದು ಅನಿವಾಸಿ ಕನ್ನಡಿಗರು ಸಲಹೆ ನೀಡಿದರು.

ಸಂವಾದದಲ್ಲಿ ಕೆಎನ್‍ಆರ್‍ಐ ಅಧ್ಯಕ್ಷರೂ ಆಗಿರುವ ಉದ್ಯಮಿ ಪ್ರವೀಣ್ ಶೆಟ್ಟಿ, ಅನಿವಾಸಿ ಕನ್ನಡಿಗರು ದುಬೈನ ಅಧ್ಯಕ್ಷ ಮುಹಮ್ಮದ್ ನವೀದ್, ಹರೀಶ್ ಶೇರಿಗಾರ್, ತುಳು ರಕ್ಷಣಾ ವೇದಿಕೆ ಹಿದಾಯತ್ ಅಡ್ಡೂರು, ಸುನೀಲ್ ಅಂಬಳತರೆ, ಮೀಡಿಯಾ ಫೋರಂನ ಇಮ್ರಾನ್ ಖಾನ್, ದುಬೈ ಕರ್ನಾಟಕ ಸಂಘದ ದಯಾ ಕಿರೋಡಿಯನ್, ಅಶ್ವಕ್ ಸದ, ಯೂಸುಫ್ ಬೆರ್ಮವೆರ್, ಅಫ್ಜಲ್ ಎಸ್.ಎಂ. ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X