ಇ-ಪಾಸ್ ಮೂಲಕ ಮಾತ್ರ ಪಾಸ್‌ಗಳ ವಿತರಣೆ: ಡಿಸಿ ಜಗದೀಶ್
ಉಡುಪಿ, ಮೇ 3: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಸ್ತುತ ನಿಬರ್ಂಧಾಜ್ಞೆ ಜಾರಿಯಲ್ಲಿರುವುದರಿಂದ ನಾಗರಿಕರ ಓಡಾಟವನ್ನು ನಿಬರ್ಂಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪಾಸ್ ಪಡೆಯಲು ಜಿಲ್ಲಾಧಿಕಾರಿ ಕಛೇರಿಗೆ ಗುಂಪು ಗುಂಪು ಆಗಿ ಬರುವುದು ನಿಬರ್ಂಧಾಜ್ಞೆ ಆದೇಶವನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಪ್ರಸ್ತುತ ಉಡುಪಿ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಆಥವಾ ಹೊರಜಿಲ್ಲೆಗಳಿಂದ ಉಡುಪಿ ಜಿಲ್ಲೆಗೆ ಬರುವುದಕ್ಕೆ ನಿಬರ್ಂಧಗಳಿವೆ. ಕೇವಲ ತುರ್ತು ವೈದ್ಯಕೀಯ ಕಾರಣ ಗಳಿಂದಾಗಿ ಹೋಗ ಬೇಕಾದಲ್ಲಿ ಆಥವಾ ವೈದ್ಯಕೀಯ ಉಪಕರಣಗಳ ಉತ್ಪಾದನಾ ಘಟಕ, ಅಗತ್ಯ ಕರ್ತವ್ಯಕ್ಕೆ ಹಾಜರಾಗಲು ಅಂತರ್ ಜಿಲ್ಲೆಗಳಿಗೆ ಹೋಗಲು ಅನುಮತಿಗಾಗಿ ಅರ್ಜಿಯನ್ನು ವೈದ್ಯಕೀಯ ಪ್ರಮಾಣ ಪತ್ರ, ಅಗತ್ಯ ಸೇವೆಗಳಾದಲ್ಲಿ ಐಡಿ ಕಾರ್ಡ್, ಸಂಸ್ಥೆಯು ಕಳುಹಿಸಿರುವ ಪತ್ರ ಮುಂತಾದ ದಾಖಲೆಗಳೊಂದಿಗೆ ತಹಶೀಲ್ದಾರರ ಮೂಲಕ ಸಲ್ಲಿಸಲು ಅವಾಶವನ್ನು ಈಗಾಗಲೇ ಕಲ್ಪಿಸಲಾಗಿದೆ.
ಹೀಗೆ ಸಲ್ಲಿಸಲಾದ ಕೋರಿಕೆಗಳನ್ನು ಅನ್‌ಲೈನ್ ಮೂಲಕ ತಹಶೀಲ್ದಾರು ಪರಿಶೀಲಿಸಿ ಅನುಮೋದನೆಗಾಗಿ ಅಪರ ಜಿಲ್ಲಾಧಿಕಾರಿಗೆ ಸಲ್ಲಿಸುತ್ತಾರೆ. ಅವರು ಆನ್‌ಲೈನ್ ಕೋರಿಕೆಗಳನ್ನು ಪರಿಶೀಲಿಸಿ ಅನುಮೋದನೆ ನೀಡುತ್ತಾರೆ. ಆದರೂ ಕೂಡ ಸಾರ್ವಜನಿಕರು ಅನುಮತಿಗಾಗಿ ಜಿಲ್ಲಾಧಿಕಾರಿಯವರ ಕಛೇರಿಗೆ ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ.
ಆದುದರಿಂದ ಈ ಉದ್ದೇಶಗಳಿಗೆ ಪ್ರಯಾಣಿಸಬೇಕಾದ ಸಾರ್ವಜನಿಕರು ಇನ್ನು ಮುಂದೆ ಜಿಲ್ಲಾಧಿಕಾರಿಯವರ ಕಛೇರಿಗೆ ಅಲೆದಾಡದೆ ನೇರವಾಗಿ ಸಂಬಂಧಪಟ್ಟ ತಾಲೂಕು ತಹಶೀಲ್ದಾರರ ಮೂಲಕ ಅರ್ಜಿಯನ್ನು ಸಲ್ಲಿಸಿ ಅನುಮತಿಯನ್ನು ಆನ್‌ಲೈನ್ ಮೂಲಕ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







