Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಸ್ಕ್ ಧರಿಸದಿದ್ದರೆ ದಂಡ: ಡಿಸಿಎಂ...

ಮಾಸ್ಕ್ ಧರಿಸದಿದ್ದರೆ ದಂಡ: ಡಿಸಿಎಂ ಗೋವಿಂದ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ3 May 2020 9:47 PM IST
share
ಮಾಸ್ಕ್ ಧರಿಸದಿದ್ದರೆ ದಂಡ: ಡಿಸಿಎಂ ಗೋವಿಂದ ಕಾರಜೋಳ

ಬಾಗಲಕೋಟೆ, ಮೇ.3: ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈಗಿದ್ದ ನಿಯಮವನ್ನೇ ಮೇ 17 ವರೆಗೆ ಲಾಕ್‍ಡೌನ್‍ನ್ನು ಮುಂದುವರೆಸಲಾಗಿದ್ದು, ಮಾಸ್ಕ್ ಧರಿಸದಿದ್ದರೆ 100 ರಿಂದ 500 ರೂ.ಗಳ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ರವಿವಾರ ನಗರದ ನ್ಯೂ ಸರ್ಕ್ಯೂಟ್ ಹೌಸ್‍ನಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಧರಿಸದೇ ಇದ್ದಲ್ಲಿ 100 ರೂ.ಗಳ ದಂಡ ವಿಧಿಸಲಾಗುವುದು. 2ನೇ ಬಾರಿ ಮಾಸ್ಕ್ ಧರಿಸದೇ ಇರುವುದು ಕಂಡುಬಂದಲ್ಲಿ 500 ರೂ. ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದರು. 

ಕಳೆದ ಮಾರ್ಚ್ 24 ರಿಂದ ಕೇಂದ್ರ ಮತ್ತು ರಾಜ್ಯ ಸರಕಾರ ಕೆಲವು ಕಠಿಣ ಕ್ರಮಕೈಗೊಂಡಿದೆ. ಕೋವಿಡ್ ಸೋಂಕನ್ನು ಇನ್ನಷ್ಟು ನಿಯಂತ್ರಣದಲ್ಲಿಡಲು ಕೆಂಪು, ನೆರಳೆ ಹಾಗೂ ಹಸಿರು ಎಂಬ ಮೂರು ವಲಯಗಳನ್ನಾಗಿ ಮಾಡಿ ಕೆಲವೊಂದು ಸಡಿಲಿಕೆ ಮಾಡುವ ಮೂಲಕ ಮೇ 17 ವರೆಗೆ ಲಾಕ್‍ಡೌನ್ ಮುಂದುವರಿಸಲಾಗಿದೆ. ಕರ್ನಾಟಕ ರಾಜ್ಯವು ನೇರಳೆ ವಲಯದಲ್ಲಿದ್ದು, ಲಾಕ್‍ಡೌನ್‍ದಲ್ಲಿ ಕೆಲವು ಸಡಿಲಿಕೆ ನೀಡಲಾಗಿದ್ದು, ಜಿಲ್ಲೆಯ ಗಡಿಭಾಗಗಳನ್ನು ಸೀಲ್ ಮಾಡಲಾಗಿದೆ ಎಂದರು. 

ಕೇಂದ್ರ ಸರಕಾರದ ಆದೇಶದನ್ವಯ ಜಿಲ್ಲೆಯಾದ್ಯಂತ ಮೇ 4 ರಿಂದ 17 ವರೆಗೆ ಮದ್ಯರಾತ್ರಿವರೆಗೆ ಲಾಕ್‍ಡೌನ್ ಮುಂದುವರೆಯಲಿದ್ದು, ರಾತ್ರಿ 7 ರಿಂದ ಬೆಳಿಗ್ಗೆ 7 ವರೆಗೆ ಸಿ.ಆರ್.ಪಿ.ಸಿ ಕಲಂ 144 ವಿಧಿಸಲಾಗಿದೆ. ಜಿಲ್ಲೆಯಲ್ಲಿ ಜರಗುವ ಸಂಜೆ, ಜಾತ್ರೆ ಹಾಗೂ ಸಮಾರಂಭಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕೃಷಿ ಚಟುವಟಿಕೆಗಳು ನಡೆಯಲಿದ್ದು, ಬೀಜ ಮತ್ತು ರಸಗೊಬ್ಬರಗಳ ಕೊರತೆ ಇರುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯ ಕಾಮಗಾರಿಗಳು ಚಾಲ್ತಿಯಲ್ಲಿರುತ್ತವೆ. ಅವಶ್ಯಕ ಹಿಟ್ಟಿನ ಗಿರಣಿ, ಖಾರಾ ಕುಟ್ಟುವ ಯಂತ್ರ, ಅಗತ್ಯ ವಸ್ತುಗಳ ಘಟಕಗಳು, ಬೀಜೋತ್ಪಾದನಾ ಕೇಂದ್ರಗಳು, ಕೈಗಾರಿಕೆಗಳು ನಡೆಯಲಿವೆ ಎಂದರು. 

ಜಿಲ್ಲೆಯ ಕಾರ್ಮಿಕರು, ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ಇತರೆ ವ್ಯಕ್ತಿಗಳು ಬೇರೆ ರಾಜ್ಯಕ್ಕೆ ತೆರಳಬೇಕಾದಲ್ಲಿ ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದಾಗಿದೆ. ಜಿಲ್ಲೆಯಿಂದ ರಾಜ್ಯದ ಬೇರೆ ಜಿಲ್ಲೆಗೆ ಸ್ವಂತ ವಾಹನಗಳಲ್ಲಿ ಪ್ರಯಾಣಿಸುವವರು ಜಿಲ್ಲೆಯಲ್ಲಿ ಪ್ರಾರಂಭಿಸಿದ ತಂತ್ರಾಂಶದ ಮೂಲಕ ಒನ್-ಟೈಮ್, ಒನ್-ಡೇ, ಒನ್-ವೇ ಗೆ ಮಾತ್ರ ಪಾಸನ್ನು ಅರ್ಜಿ ಸಲ್ಲಿಸಿ ಸಂಬಂಧಿಸಿದ ತಹಶೀಲ್ದಾರರ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದರು.

ಸರಕಾರದ ಆದೇಶದಂತೆ ಎಲ್ಲ ಕುಟುಂಬಗಳ 60 ವರ್ಷ ಮೇಲ್ಪಟ್ಟ ಬಿಪಿ, ಸಕ್ಕರೆ ಕಾಯಿಲೆ, ಹೃದಯ ರೋಗ, ಗರ್ಭೀಣಿ ಸ್ತ್ರೀಯರ ಆರೋಗ್ಯ ಮಾಹಿತಿ ಸಂಗ್ರಹಿಸಲು ಬಿ.ಎಲ್.ಓ ಹಾಗೂ ಒಬ್ಬ ಹೆಚ್ಚುವರಿ ಶಿಕ್ಷಕರ ತಂಡ ರಚಿಸಿ ಸಮೀಕ್ಷೆ ಕಾರ್ಯ ಪ್ರಾರಂಭಿಸಲಾಗುತ್ತದೆ. ಎಂದಿನಂತೆ ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಶಾಪ್ ತೆರೆದಿರುತ್ತವೆ. ಸಾರ್ವಜನಿಕರು ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಧರಿಸದೇ ಇದ್ದಲ್ಲಿ 100 ರೂ.ಗಳ ದಂಡ ವಿಧಿಸಲಾಗುವುದು. 2ನೇ ಬಾರಿ ಮಾಸ್ಕ ಧರಿಸದೇ ಇರುವುದು ಕಂಡುಬಂದಲ್ಲಿ 500 ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು. 

ಸಾರ್ವಜನಿಕ ಸ್ಥಳಗಳಲ್ಲಿ ಸುಮಾರು 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಲ್ಲಂದರಲ್ಲಿ ಗುಟ್ಕಾ, ಎಲೆ ಅಡಿಕೆ ತಿಂದು ಉಗುಳಬಾರದು. ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ಪಡೆಯಲು ಬ್ಯಾಂಕ್‍ಗಳಿಗೆ ತೆರಳುವ ಬದಲು ಅಂಚೇ ಕಚೇರಿಗೆ ದೂರವಾಣಿ ಮೂಲಕ ಕರೆ ಮಾಡಿದಲ್ಲಿ ಅಂಚೆ ಇಲಾಖೆಯವರು ಮನೆ ಬಾಗಿಲಿಗೆ ಬಂದು ಹಣ ಸಂದಾಯ ಮಾಡಲಿದ್ದಾರೆ. ಇದರ ಪ್ರಯೋಜ ಸಾರ್ವಜನಿಕರು ಪಡೆದುಕೊಳ್ಳಬಹುದಾಗಿದೆ ಎಂದರು.

ಜಿಲ್ಲೆಯ ಬಾಗಲಕೋಟೆ, ಮುಧೋಳ, ಜಮಖಂಡಿ ನಗರ ಮತ್ತು ಮುಗಳಖೋಡ ಗ್ರಾಮದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಅಲ್ಲಿ ಈಗಾಗಲೇ ಕಂಟೈನ್‍ಮೆಂಟ್ ಝೋನ್‍ನಲ್ಲಿ ನಿರ್ಬಂಧ ಹೇರಲಾಗಿದೆ. ಪ್ರತಿಯೊಂದು ಝೋನ್‍ಗಳಿಗೆ ಇನ್ಸಿಡೆಂಟ್ ಕಮಾಂಡರನ್ನು ನೇಮಿಸಲಾಗಿದೆ. ಕಂಟೈನ್‍ಮೆಂಟ್ ಝೋನ್ ನಿರ್ಬಂಧ ಹಿಂಪಡೆಯಲು ಆ ಪ್ರದೇಶದ ಕೊನೆಯ ಪ್ರಕರಣ ದಾಖಲಾದ ದಿನಾಂಕದಿಂದ 28 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ದಾಖಲಾಗದಿದ್ದಲ್ಲಿ ಅವಕಾಶವಿರುತ್ತದೆ. ಬಾಗಲಕೋಟೆ ನಗರದಲ್ಲಿ ಎ.15, ಮುಗಳಖೋಡದಲ್ಲಿ ಎ.12, ಜಮಖಂಡಿ ನಗರದಲ್ಲಿ ಮೇ 2 ಹಾಗೂ ಮುಧೋಳದಲ್ಲಿ ಮೇ.3 ರಂದು ಪ್ರಕರಣಗಳು ದಾಖಲಾಗಿರುತ್ತವೆ ಎಂದರು. ಇದೇ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X