Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ಎಫೆಕ್ಟ್: ಆತ್ಮಹತ್ಯೆ,...

ಲಾಕ್‌ಡೌನ್ ಎಫೆಕ್ಟ್: ಆತ್ಮಹತ್ಯೆ, ಹಸಿವಿನಿಂದ 300ಕ್ಕೂ ಅಧಿಕ ಸಾವು; ಅಧ್ಯಯನ ವರದಿ

ಹಸಿವಿನಿಂದ ಕನಿಷ್ಠ 40 ವಲಸೆ ಕಾರ್ಮಿಕರ ಸಾವು

ವಾರ್ತಾಭಾರತಿವಾರ್ತಾಭಾರತಿ3 May 2020 10:57 PM IST
share
ಲಾಕ್‌ಡೌನ್ ಎಫೆಕ್ಟ್: ಆತ್ಮಹತ್ಯೆ, ಹಸಿವಿನಿಂದ 300ಕ್ಕೂ ಅಧಿಕ ಸಾವು; ಅಧ್ಯಯನ ವರದಿ

ಹೊಸದಿಲ್ಲಿ, ಎ.21: ಕೊರೋನ ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಮಾರ್ಚ್ 19ರಿಂದ ಲಾಕ್‌ಡೌನ್ ಹೇರಿಕೆಯಾದ ಆನಂತರ ಹಸಿವು, ಆರ್ಥಿಕ ಮುಗ್ಗಟ್ಟು, ಬಳಲಿಕೆ, ಸಕಾಲದಲ್ಲಿ ಲಭ್ಯವಾಗದ ವೈದ್ಯಕೀಯ ಚಿಕಿತ್ಸೆ ಮತ್ತು ಲಾಕ್‌ಡೌನ್ ಉಲ್ಲಂಘನೆಗಾಗಿ ನಡೆದ ಪೊಲೀಸ್‌ ದೌರ್ಜನ್ಯ ಮತ್ತಿತರ ಕಾರಣಗಳಿಂದಾಗಿ 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇಂಗ್ಲೀಷ್, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯ ಸುದ್ದಿಪತ್ರಿಕೆಗಳು ಹಾಗೂ ಸುದ್ದಿಜಾಲತಾಣಗಳಲ್ಲಿ ಪ್ರಕಟವಾದ ವರದಿಗಳನ್ನು ಆಧರಿಸಿ ಸಾಮಾಜಿಕ ಹೋರಾಟಗಾರರು ಹಾಗೂ ವಿದ್ವಾಂಸರ ತಂಡವೊಂದು ತಯಾರಿಸಿದ ವರದಿಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಈ ಗುಂಪು ಪರಿಶೀಲಿಸಿದ 310 ಸಾವುಗಳ ಪೈಕಿ 73 ಆತ್ಮಹತ್ಯೆ ಪ್ರಕರಣಗಳಾಗಿವೆ. ‘‘ಲಾಕ್‌ಡೌನ್ ಸಂದರ್ಭ ಸೋಂಕಿನ ಭೀತಿ, ಒಬ್ಬಂಟಿತನ, ಸಂಚಾರದ ಸ್ವಾತಂತ್ರ್ಯಕ್ಕೆ ನಿರ್ಬಂಧ ಹಾಗೂ ಮದ್ಯದ ಅಲಭ್ಯತೆ ಕಾರಣಗಳಿಂದಾಗಿ ಗಣನೀಯ ಸಂಖ್ಯೆಯ ಸಾವುಗಳು ಸಂಭವಿಸಿವೆ’’ ಸಂಘಟನೆಯು ಪತ್ರಿಕಾ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ಮೃತಪಟ್ಟ 310 ಮಂದಿಯ ಪೈಕಿ ಮದ್ಯ ಸೇವನೆ ಲಭ್ಯವಾಗದೆ ಅಸ್ವಸ್ಥರಾಗಿ 45 ಮಂದಿ ಅಸುನೀಗಿದ್ದಾರೆ. ಕೇರಳ, ಕರ್ನಾಟಕ ಮತ್ತಿತರ ರಾಜ್ಯಗಳಲ್ಲಿ ಹಲವಾರು ಮದ್ಯವ್ಯಸನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಾಕ್‌ಡೌನ್ ಬಳಿಕ ದುಡಿಮೆ ಕಳೆದುಕೊಂ ಸುಮಾರು 40 ಮಂದಿ ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಹಸಿವು, ಬಳಲಿಕೆ ಹಾಗೂ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

 ಲಾಕ್‌ಜೌನ್ ಹೇರಿಕೆಯಾದ ಬೆನ್ನಲ್ಲೇ ಉದ್ಯಮಸಂಸ್ಥೆಗಳು, ಕಾರ್ಖಾನೆಗಳು ಮುಚ್ಚುಗಡೆಗೊಂಡಾಗ, ಭಾರೀ ಸಂಖ್ಯೆಯ ದಿನಗೂಲಿ ಕಾರ್ಮಿಕರು ದಿಢೀರನೇ ತಮ್ಮ ಜೀವನೋಪಾಯದ ಮಾರ್ಗವನ್ನು ಕಳೆದುಕೊಳ್ಳುವಂತಾಯಿತು. ಬರಿಗೈಯಲ್ಲಿ ನಗರದಲ್ಲಿ ಬದುಕು ಸಾಗಿಸಲು ಸಾಧ್ಯವಾಗದೆ ಕುಟುಂಬದೊಂದಿಗೆ ಹಳ್ಳಿಗಳಿಗ ವಲಸೆ ಹೋಗುವಂತಾಯಿತು. ದಿಲ್ಲಿ, ನೋಯ್ಡಾ, ಸೇರಿದಂತೆ ವಿವಿಧ ನಗರಗಳಿಂದ ಸಾವಿರಾರು ಮಂದಿ ವಲಸೆ ಕಾರ್ಮಿಕರು ಹೆದ್ದಾರಿಗಳಲ್ಲಿ ಕಾಲ್ನಡಿಗೆಯಲ್ಲಿ ನೂರಾರು ಮೈಲು ದೂರು ನಡೆದುಕೊಂಡೇ ತಮ್ಮ ಹಳ್ಳಿಗಳಿಗೆ ಪ್ರಯಾಣಿಸಿದ್ದರು.

ಸುಮಾರು 38 ಮಂದಿ ವಲಸೆ ಕಾರ್ಮಿಕರು ಸಕಾಲದಲ್ಲಿ ವೈದ್ಯಕೀಯ ನೆರವು ಲಭಿಸದೆ ಕೊನೆಯುಸಿರೆಳೆದಿದ್ದಾರೆ. ಕನಿಷ್ಠ 40 ಮಂದಿ ಹಸಿವು ಹಾಗೂ ಆರ್ಥಿಕ ಮುಗ್ಗಟ್ಟಿನಿಂದ ಸಾವನ್ನಪ್ಪಿದ್ದಾರೆ. 20 ಮಂದಿ, ಹಳ್ಳಿಗಳಲ್ಲಿರುವ ತಮ್ಮ ಮನೆಗಳಿಗೆ ವಾಪಸಾಗಲು ಕಾಲ್ನಡಿಗೆಯಲ್ಲಿ ದೀರ್ಘ ದೂರ ಸಾಗಿದ್ದರಿಂದ ಅಥವಾ ಪಡಿತರ ಆಹಾರಕ್ಕಾಗಿ ಅಥವಾ ಹಣ ಪಡೆಯಲು ತಾಸುಗಟ್ಟಲೆ ಸರತಿ ಸಾಲುಗಳಲ್ಲಿ ನಿಂತಿದ್ದಾಗ ಪ್ರಾಣಕಳೆದುಕೊಂಡಿದ್ದಾರೆ.

ಲಾಕ್‌ಡೌನ್‌ನ ನಿಯಮಗಳನ್ನು ಉಲ್ಲಂಘಿಸಿದ್ದರೆಂಬ ಕಾರಣಗಳಿಗಾಗಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ 11 ಮಂದಿ ಸಾವಿಗೀಡಾಗಿದ್ದಾರೆಂದು ವರದಿ ಹೇಳಿದೆ.

 ಜಿಂದಾಲ್ ಗ್ಲೋಬಲ್ ಸ್ಕೂಲ್ ಆಫ್ ಲಾದ ಸಹಾಯಕ ಕಾನೂನು ಪ್ರೊಫೆಸರ್‌ಅಮಾನ್, ಸಂಶೋಧಕಿ ಹಾಗೂ ಪಿಎಚ್‌ಡಿ ಪದವೀಧರೆ ಕನಿಕಾ ಮತ್ತು ಬೆಂಗಳೂರು ಮೂಲದ ಎಂಜಿನಿಯರ್ ತೇಜೇಶ್ ಜಿ.ಎನ್. ಅವರನ್ನೊಳಗೊಂಡ ತಂಡವು ಈ ದತ್ದಾಂಶಗಳನ್ನು ಸಂಗ್ರಹಿಸಿ ವರದಿ ತಯಾರಿಸಿದೆ.

ಲಾಕ್‌ಡೌನ್‌ನ ಯಶಸ್ಸು ಹಾಗೂ ವೈಫಲ್ಯಗಳನ್ನು ಅಂದಾಜಿಸುವ ಈ ಸಾವಿನ ಪ್ರಕರಣಗಳನ್ನು ಕೂಡಾ ಗಣನೆಗೆ ತೆಗೆದುಕೊಳ್ಳಬೇಕೆಂದು ಅಮಾನ್ ತಿಳಿಸಿದ್ದಾರೆ. ಕೋವಿಡ್-19ಗೆ ಸಂಬಂಧಿಸಿದ ಸಾವಿನ ಪ್ರಕರಣಗಳ ಬಗ್ಗೆಯೇ ಈಗ ಗಮನಹರಿಸುತ್ತಿರುವಾಗ, ಇತರ ಕಾರಣಗಳಿಂದ ಸಂಭವಿಸಿದ ಸಾವಿನ ಘಟನೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X