Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂತರ್ ರಾಜ್ಯ, ಜಿಲ್ಲಾ ಪ್ರಯಾಣಿಕರಿಗೆ...

ಅಂತರ್ ರಾಜ್ಯ, ಜಿಲ್ಲಾ ಪ್ರಯಾಣಿಕರಿಗೆ ಪಾಸ್ ವಿತರಣೆಗೆ ಕ್ರಮ: ಚಿಕ್ಕಮಗಳೂರು ಜಿಲ್ಲಾಧಿಕಾರಿ

ಹಸಿರು ವಲಯ ಜಿಲ್ಲೆಗಳ ಪ್ರಯಾಣಕ್ಕೆ ಟು ವೇ ಪಾಸ್

ವಾರ್ತಾಭಾರತಿವಾರ್ತಾಭಾರತಿ4 May 2020 5:21 PM IST
share
ಅಂತರ್ ರಾಜ್ಯ, ಜಿಲ್ಲಾ ಪ್ರಯಾಣಿಕರಿಗೆ ಪಾಸ್ ವಿತರಣೆಗೆ ಕ್ರಮ: ಚಿಕ್ಕಮಗಳೂರು ಜಿಲ್ಲಾಧಿಕಾರಿ

ಚಿಕ್ಕಮಗಳೂರು, ಮೇ 4: ರಾಜ್ಯಾದ್ಯಂತ ಲಾಕ್‍ಡೌನ್ ಸಿಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯಗಳ ವಲಸೆ ಕಾರ್ಮಿಕರು, ಪ್ರವಾಸಿಗಳು, ಯಾತ್ರಾರ್ಥಿಗಳು, ವಿದ್ಯಾರ್ಥಿಗಳೂ ಸೇರಿದಂತೆ ಎಲ್ಲರಿಗೂ ತಮ್ಮ ರಾಜ್ಯಗಳಿಗೆ ಹೋಗಲು ಕೇಂದ್ರ, ರಾಜ್ಯ ಸರಕಾರಗಳು ಅವಕಾಶ ಕಲ್ಪಿಸಿದ್ದು, ಇಂತವರು sevasindu.karnataka.govt.in ವೆಬ್‍ಸೈಟ್ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿಸಲ್ಲಿಸಿದವರ ಮೊಬೈಲ್ ಸಂಖ್ಯೆಗೆ ಪಾಸ್‍ಗಳನ್ನು ರಾಜ್ಯ ಸರಕಾರ ರವಾನಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಈ ವೆಬ್‍ಸೈಟ್‍ನಲ್ಲಿ ತಮ್ಮ ರಾಜ್ಯಗಳಿಗೆ ಹೋಗಬಯಸುವವರು ಹೆಸರು ನೋಂದಾಯಿಸಿಕೊಳ್ಳುವುದರೊಂದಿಗೆ ಅಗತ್ಯವಾಗಿರುವ ಎಲ್ಲ ದಾಖಲೆ, ಮಾಹಿತಿಯನ್ನೂ ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದ ಅವರು, ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವವರೂ ಕೂಡ ಇದೇ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿದಲ್ಲಿ ಇಂತಹ ಅರ್ಜಿಗಳನ್ನು ಸರಕಾರ ಪರಿಶೀಲನೆ ನಡೆಸಿ ಪಾಸ್ ನೀಡಲು ಅಗತ್ಯ ಕ್ರಮಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ 217 ಮಂದಿ ಜನರು ಈಗಾಗಲೇ ಆನ್‍ಲೈನ್ ಅರ್ಜಿಸಲ್ಲಿಸಿದ್ದಾರೆ. ಹೊರ ರಾಜ್ಯಗಳಿಂದ ಜಿಲ್ಲೆಗೆ ಬರಲು 291 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ರಾಜ್ಯ ಮಟ್ಟದ ನೋಡಲ್ ಅಧಿಕಾರಿ ಪರಿಶೀಲನೆ ನಡೆಸುತ್ತಿದ್ದು, ಶೀಘ್ರ ಪಾಸ್‍ಗಳನ್ನು ಅವರವರ ಮೊಬೈಲ್ ಸಂಖ್ಯೆಗಳಿಗೆ ಕಳುಹಿಸಲಾಗುತ್ತಿದೆ. ಅರ್ಜಿ ಸಲ್ಲಿಸಿದವರು ಕನಿಷ್ಠ 1-2 ದಿನಗಳ ಕಾಲ ಪಾಸ್‍ಗಳಿಗಾಗಿ ಕಾಯಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಅಂತರ್ ಜಿಲ್ಲಾ ಪ್ರಯಾಣಿಕರಿಗೆ ಒನ್ ವೇ, ಒನ್ ಡೇ ಪಾಸ್: 
ಇನ್ನು ಅಂತರ್ ಜಿಲ್ಲಾ ಪ್ರಯಾಣಕ್ಕೂ ಸರಕಾರಗಳು ಅವಕಾಶ ಕಲ್ಪಿಸಿದ್ದು, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರಯಾಣ ಬೆಳೆಸಲು ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು, ಯಾವುದೋ ಕೆಲಸಕ್ಕೆ ಬಂದು ಲಾಕ್ ಡೌನ್‍ನಿಂದಾಗಿ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವವರು, ಪ್ರವಾಸಿಗರು, ಸರಕಾರಿ/ಖಾಸಗಿ ಕ್ಷೇತ್ರದಲ್ಲಿನ ಉದ್ಯೋಗಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇಂತವರಿಗೆ ಒಮ್ಮುಖ(ಒನ್‍ವೇ)ಪಾಸ್‍ಗಳನ್ನು ವಿತರಿಸಲಾಗುತ್ತಿದೆ. 

ಒನ್ ವೇ ಪಾಸ್‍ಗಳನ್ನು ಪಡೆದವರು ಒಂದು ದಿನ ಮಾತ್ರ ಪ್ರಯಾಣಿಸಲು ಅವಕಾಶವಿದೆ. ಅಂತರ್ ಜಿಲ್ಲಾ ಪ್ರಯಾಣಿಕರ ಪಾಸ್‍ಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದ ವಿತರಿಸಲಾಗುತ್ತಿದ್ದು, ಈ ಪಾಸ್‍ಗಳ ಅಗತ್ಯ ಇದ್ದವರು ಸಂಬಂಧಿಸಿದ ತಾಲೂಕು ಕೇಂದ್ರಗಳಲ್ಲಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ತಾಲೂಕು ಕಚೇರಿಗಳಲ್ಲಿ ವೆಬ್‍ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗಿದೆ. ಈ ಪಾಸ್ ಪಡೆದು ಚಿಕ್ಕಮಗಳೂರು ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ಹೋಗುವ ಪ್ರಯಾಣಿಕರು  ಲಾಕ್‍ಡೌನ್ ಅವಧಿ ಸಂಪೂರ್ಣವಾಗಿ ಪೂರ್ಣಗೊಳ್ಳುವವರೆಗೆ ಹಿಂದಿರುಗಿ ಬರುವಂತಿಲ್ಲ ಎಂದರು.

ಹಸಿರು ವಲಯದಲ್ಲಿರುವ ಜಿಲ್ಲೆಗಳ ಪ್ರಯಾಣಕ್ಕೆ ಷರತ್ತು ಬದ್ಧ ಟು ವೇ ಪಾಸ್:
ಚಿಕ್ಕಮಗಳೂರು ಜಿಲ್ಲೆಯು ಹಸಿರು ವಲಯದಲ್ಲಿರುವ ಜಿಲ್ಲೆಯಾಗಿದ್ದು, ಈ ಜಿಲ್ಲೆಯಿಂದ ನೆರೆಯ ಹಸಿರು ವಲಯದ ಜಿಲ್ಲೆಗಳಿಗೆ ಪ್ರಯಾಣ ಬೆಳೆಸಲೂ ಟು ವೇ ಪಾಸ್ ನೀಡಲಾಗುವುದು. ಆದರೆ ಈ ಪಾಸ್‍ಗಳನ್ನು ಪಡೆದವರು ಬೆಳಗ್ಗೆ 7ರಿಂದ ಸಂಜೆ 7ರವರೆಗಿನ ಅವಧಿಯಲ್ಲಿ ಮಾತ್ರ ಪ್ರಯಾಣ ಬೆಳೆಸಬೇಕಿದ್ದು, ಚಿಕ್ಕಮಗಳೂರು ಜಿಲ್ಲೆಯಿಂದ ಇಂತಹ ಪಾಸ್‍ನಡಿಯಲ್ಲಿ ನೆರೆಯ ಹಾಸನ, ಶಿವಮೊಗ್ಗ ಅಥವಾ ಉಡುಪಿ ಜಿಲ್ಲೆಗಳಿಗೆ ಪ್ರಯಾಣ ಬೆಳೆಸಬೇಕಿದ್ದಲ್ಲಿ ಬೆಳಗ್ಗೆ 7ಗಂಟೆಗೆ ಹೊರಟು ಸಂಜೆ 7 ಗಂಟೆಯೊಳಗೆ ಹಿಂದಿರುಗಬೇಕು. ಇಂತಹ ಪಾಸ್‍ಗಳನ್ನು ಅಗತ್ಯ ಸೇವೆಗಳನ್ನು ಪಡೆದುಕೊಳ್ಳಲು ಮಾತ್ರ ವಿತರಣೆ ಮಾಡಲಾಗುವುದು. ಈ ಪಾಸ್‍ಗಳನ್ನು ಎಸ್ಪಿ ಕಚೇರಿಯಿಂದ ವಿತರಣೆ ಮಾಡಲಾಗುವುದು.

ಪಾಸ್ ಅಗತ್ಯವಿದ್ದವರು ಎಸ್ಪಿ ಕಚೇರಿಗೆ ಅಲೆಯದೇ ಸ್ಥಳೀಯ ಪೊಲೀಸ್ ಠಾಣೆಗಳ ಮೂಲಕ ಅರ್ಜಿ ಸಲ್ಲಿಸಬೇಕು ಎಂದ ಅವರು, ಈ ಪಾಸ್ ಮೂಲಕ ನೆರೆಯ ಹಸಿರು ವಲಯದ ಜಿಲ್ಲೆಗಳಿಗೆ ಹೋಗಿ ಬಂದವರು ಕಡ್ಡಾಯವಾಗಿ 28 ದಿನಗಳ ಕಾಲ ಕ್ವಾರಂಟೈನ್‍ನಲ್ಲಿರಬೇಕಿದೆ ಎಂದರು.

ಇದರ ಹೊರತಾಗಿ ಮಾನವೀಯ ನೆಲೆಗಟ್ಟಿನಲ್ಲಿ ಸಾವು, ವೈದ್ಯಕೀಯ ತುರ್ತು ಪರಿಸ್ಥಿತಿ, ಮದುವೆಯಂತಹ ಸಮಾರಂಭಗಳಿಗೆ ಹೋಗಲು 5 ಮಂದಿಗೆ ಪಾಸ್‍ಗಳನ್ನು ಎಸ್ಪಿ ಕಚೇರಿಯಿಂದಲೇ ನೀಡಲಾಗುವುದು. ಈ ಪಾಸ್‍ಗಳಿಗೂ ಸ್ಥಳೀಯ ಪೊಲೀಸ್ ಠಾಣೆಗಳಿಂದಲೇ ಅರ್ಜಿಸಲ್ಲಿಸಬೇಕೆಂದು ತಿಳಿಸಿದ ಅವರು, ಅಂತರ್‍ಜಿಲ್ಲಾ ಪ್ರಯಾಣಿಕರು ಹಾಗೂ ಹಸಿರು ವಲಯದ ಜಿಲ್ಲೆಗಳ ಪ್ರಯಾಣಿಕರಿಗೆ ಜಿಲ್ಲಾಡಳಿತದ ವತಿಯಿಂದ ಬೇಡಿಕೆಗನುಗುಣವಾಗಿ ಸಾರಿಗೆ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಪಾಸ್‍ಗಳನ್ನು ಪಡೆಯುವವರು ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಿಕೊಳ್ಳಬಾರದೆಂದು ಇದೇ ವೇಳೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಜಿಲ್ಲಾದ್ಯಂತ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಭಾಗದಲ್ಲಿ ಚೆಕ್‍ಪೋಸ್ಟ್ ಪ್ರತಿದಿನ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಈ ವೇಳೆ ಅಗತ್ಯ ವಸ್ತುಗಳ ಸಾಗಣೆ ವಾಹನಗಳ ತಪಾಸಣೆ ಮಾಡಿ ಬಿಡಲಾಗುತ್ತದೆ. ತುರ್ತು ಸೇವೆಗಳ ವಾಹನಗಳಿಗೆ ಜಿಲ್ಲಾ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಗಡಿ ಭಾಗದ ಚೆಕ್‍ಪೋಸ್ಟ್ ಗಳಲ್ಲಿ ವಾಹನ ಚಾಲಕರು ಆರೋಗ್ಯ ತಪಾಸಗೊಳಪಡಿಸಲಾಗುವುದು. ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಚೆಕ್‍ಪೋಸ್ಟ್‍ಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ತಪಾಸಣೆಯನ್ನು ಸಡಿಲಗೊಳಿಸಲಾಗಿದೆ. ಸಂಜೆ 7ರಿಂದ ಬೆಳಗಿನ ಜಾವ 7ರವರೆಗೆ ಈ ಚೆಕ್‍ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಯಾಗಿರಲಿದೆ. ಸಂಜೆ 7ರಿಂದ ಬೆಳಗ್ಗೆ ಮುಂಜಾನೆ 7ರವರೆಗೆ ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಸೀಝ್ ಮಾಡಲಾಗುವುದು.
- ಹರೀಶ್ ಪಾಂಡೆ, ಎಸ್ಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X