Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಶಲಕರ್ಮಿ ಸಮುದಾಯಗಳಿಗೆ ವಿಶೇಷ...

ಕುಶಲಕರ್ಮಿ ಸಮುದಾಯಗಳಿಗೆ ವಿಶೇಷ ಪ್ಯಾಕೇಜ್ ರೂಪಿಸಲು ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 May 2020 11:11 PM IST
share
ಕುಶಲಕರ್ಮಿ ಸಮುದಾಯಗಳಿಗೆ ವಿಶೇಷ ಪ್ಯಾಕೇಜ್ ರೂಪಿಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಮೇ 4: 'ಕುಶಲಕರ್ಮಿ ಸಮುದಾಯಗಳು, ಬೀದಿಬದಿ ವ್ಯಾಪಾರಿಗಳು, ಅಲೆಮಾರಿ ಸಮುದಾಯಗಳು, ವಾಹನ ಚಾಲಕರು, ಕ್ಲೀನರ್‍ಗಳು, ಅಡುಗೆ ಕೆಲಸದವರು, ಹಮಾಲಿಗಳು, ಪೌರಕಾರ್ಮಿಕರು, ಅರ್ಚಕರು, ಕಟ್ಟಡ-ಗಾಮೆಂಟ್ಸ್ ಕಾರ್ಮಿಕರು, ಮನೆ ಕೆಲಸದವರು, ನರೇಗಾ, ಕೃಷಿ ಕೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ರೂಪಿಸಿ ಪ್ರತಿ ತಿಂಗಳು ಕನಿಷ್ಟ 10ಸಾವಿರ ರೂ.ನೀಡಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಸೋಮವಾರ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿರುವ ಅವರು, ರಾಜ್ಯದ ಕುಶಲಕರ್ಮಿ ಸಮುದಾಯಗಳು ಮತ್ತು ಅಲೆಮಾರಿ ಸಮುದಾಯಗಳ ಮುಖಂಡರು, ವಾಹನ ಚಾಲಕರು ಸೇರಿದಂತೆ ಇನ್ನಿತರ ಸಂಘಟನೆಗಳ ಮುಖಂಡರ ಸಭೆ ನಡೆಸಿ ಚರ್ಚಿಸಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ.

'ಕುಶಲಕರ್ಮಿಗಳು, ಕಟ್ಟಡ ಕಾರ್ಮಿಕರು ಸೇರಿದಂತೆ ಮುಂತಾದ ಕಾರ್ಮಿಕರುಗಳಿಗೆ ತಲಾ 10ಕೆ.ಜಿ. ಅಕ್ಕಿ, ಹಾಲು, 2 ಲೀಟರ್ ಅಡುಗೆ ಎಣ್ಣೆ, ತರಕಾರಿ ಮುಂದಾದ 16 ಜೀವನಾವಶ್ಯಕ ವಸ್ತುಗಳನ್ನೊಳಗೊಂಡ ಕಿಟ್‍ಗಳನ್ನು ನೀಡಬೇಕು. ಇದನ್ನು ಬಿಪಿಎಲ್ ಕಾರ್ಡ್ ಇಲ್ಲದ ಕುಟುಂಬಗಳಿಗೂ ವಿಸ್ತರಿಸಬೇಕು' ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

`ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‍ಡೌನ್ ಅವಧಿ ಇರುವವರೆಗೆ ಇಂದಿರಾ ಕ್ಯಾಂಟಿನ್‍ಗಳನ್ನು ಸಮರ್ಥವಾಗಿ ಬಳಸಿಕೊಂಡು, ಅಗತ್ಯವಿರುವ ಕಡೆ ಮೊಬೈಲ್ ಕ್ಯಾಂಟಿನ್‍ಗಳ ವ್ಯವಸ್ಥೆ ಮಾಡಿ ಉಚಿತವಾಗಿ ಪ್ರತಿನಿತ್ಯ ಹಸಿದು ಬಂದವರಿಗೆಲ್ಲರಿಗೂ ಮೂರು ಹೊತ್ತು ಆಹಾರ ಪೂರೈಸಬೇಕು' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

`ಲಾಕ್‍ಡೌನ್ ಅವಧಿ ಮುಕ್ತಾಯಗೊಳ್ಳುವವರೆಗೆ ಮನೆ ಬಾಡಿಗೆಗೆ ಒತ್ತಾಯಿಸದಂತೆ ಹಾಗೂ ವಾಣಿಜ್ಯ ಮತ್ತು ಖಾಸಗಿ ಬ್ಯಾಂಕುಗಳು, ಫೈನಾನ್ಸ್ ಸಂಸ್ಥೆಗಳು ಕನಿಷ್ಟ ಒಂದು ವರ್ಷ ಕಾಲ ಬಡ್ಡಿ, ಇಎಂಐ ಕಟ್ಟುವಂತೆ ಒತ್ತಾಯಿಸಬಾರದೆಂದು ರಾಜ್ಯ ಸರಕಾರ ಸೂಚನೆ ನೀಡಬೇಕು' ಎಂದು ಸಿದ್ದರಾಮಯ್ಯ ಇದೇ ವೇಳೆ ಸಲಹೆ ನೀಡಿದ್ದಾರೆ.

`ವಾಹನಗಳ ಮಾಲಕರುಗಳಿಂದ ರಸ್ತೆ ತೆರಿಗೆ, ವಾಹನ ವಿಮೆ ಕಟ್ಟಿಸಿಕೊಳ್ಳಬಾರದು ಮತ್ತು ವಾಹನ ಸ್ಥಗಿತಗೊಂಡ ಈ ಅವಧಿಗೆ ಕಟ್ಟಿರುವ ವಿಮೆಯ ಹಣವನ್ನು ಸದರಿ ವಾಹನಗಳ ಮಾಲಕರಿಗೆ ಹಿಂದಿರುಗಿಸಬೇಕು. ಕಷ್ಟದಲ್ಲಿರುವ ಚಾಲಕರು ಮತ್ತು ಮಾಲಕರುಗಳಿಗೆ ಸಾಲದ ರೂಪದಲ್ಲಿ ಅಗತ್ಯವಿದಷ್ಟು ಸಾಲವನ್ನು ನೀಡಲು ಕ್ರಮ ಕೈಗೊಳ್ಳಬೇಕು' ಎಂದು ಸಿದ್ದರಾಮಯ್ಯ ಕೋರಿದ್ದಾರೆ.

`ಕಾರ್ಮಿಕರು. ಚಾಲಕರು, ವೃತ್ತಿ ಸಮುದಾಯದ ಮಕ್ಕಳು ವಿದ್ಯಾಭ್ಯಾಸಕ್ಕೆ ಶಿಕ್ಷಣ ಸಂಸ್ಥೆಗಳು ವಿಧಿಸುತ್ತಿದ್ದ ಶುಲ್ಕವನ್ನು ಮುಂದಿನ ಒಂದು ವರ್ಷದ ಅವಧಿಯವರೆಗೆ ಕಡಿತಗೊಳಿಸಿ ಉಚಿತವಾಗಿ ಶಿಕ್ಷಣ ನೀಡುವಂತೆ ಸರಕಾರ ಕ್ರಮ ಕೈಗೊಳ್ಳಬೇಕು. ಇದನ್ನು ವಿಶೇಷ ಸಂದರ್ಭವೆಂದು ಭಾವಿಸಿ ಕಡ್ಡಾಯ ಶಿಕ್ಷಣ ಕಾಯಿದೆ ಅನ್ವಯ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಬೇಕು' ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

`ಕೇಂದ್ರ ಸರಕಾರ ಘೋಷಿಸಿರುವ ವಿಮಾ ರಕ್ಷಣೆಯನ್ನು ಎಲ್ಲ ವೈದ್ಯಕೀಯೇತರ ಸಿಬ್ಬಂದಿ, ಪೊಲೀಸ್, ಹೋಂ ಗಾರ್ಡ್, ಆಶಾ ಕಾರ್ಯಕರ್ತರು, ಅಂಗನವಾಡಿ, ಪೌರ ಕಾರ್ಮಿಕರು, ಕಂದಾಯ ಸಿಬ್ಬಂದಿ, ಎಂಪಿಎಂಸಿ ಸಿಬ್ಬಂದಿ, ಆಟೋ ಚಾಲಕರು, ಕ್ಷೌರಿಕರು, ದೋಬಿಗಳು, ಚಮ್ಮಾರರು ಮತ್ತು ಬೀದಿಬದಿ ವ್ಯಾಪಾರಿಗಳಿಗೂ ವಿಸ್ತರಿಸಬೇಕು' ಎಂದು ಒತ್ತಾಯಿಸಿದ್ದಾರೆ.

`ಅಲೆಮಾರಿ ಸಮುದಾಯಗಳು ನಿರಂತರವಾಗಿ ಊರಿಂದ ಊರಿಗೆ ವಲಸೆ ಹೋಗುತ್ತಿರುತ್ತಾರೆ. ಆ ಸಮುದಾಯದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಹಾರ ಧಾನ್ಯಗಳು ಸೇರಿದಂತೆ ನೀಡುವ ಎಲ್ಲ ಸವಲತ್ತುಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ನೇಕಾರರು ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆಯಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ. ಹಾಗಾಗಿ ಕೆಎಚ್‍ಡಿಸಿ ಮುಂತಾದ ಸರಕಾರಿ ಸಂಸ್ಥೆಗಳ ಮೂಲಕ ನೇಕಾರರು ನೇಯ್ದ ಬಟ್ಟೆಗಳನ್ನು ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಬೇಕು' ಎಂದು ಮನವಿ ಮಾಡಿದ್ದಾರೆ.

`ಫೋಟೋಗ್ರಾಫರ್‍ಗಳು ಉದ್ಯೋಗವಿಲ್ಲದೆ ಉಳಿದ ಸಮುದಾಯಗಳಂತೆಯೇ ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಆದುದರಿಂದ ಅವರಿಗೆ ಮನೆ ಬಾಡಿಗೆ, ಸಾಲದ ಮೇಲಿನ ಬಡ್ಡಿ, ಇಎಂಐ ಮುಂತಾದವುಗಳನ್ನು ಕನಿಷ್ಟ ಆರು ತಿಂಗಳವರೆಗೆ ವಸೂಲಿ ಮಾಡಬಾರದೆಂದು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು' ಎಂದು ಸಿದ್ದರಾಮಯ್ಯ ಕೋರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಯು.ಟಿ.ಖಾದರ್. ಎನ್.ಚೆಲುವರಾಯಸ್ವಾಮಿ, ವಿಪಕ್ಷಗಳ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

`ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮತ್ತು ಸಚಿವರು ದುಡಿಯುವ ಸಮುದಾಯಗಳ ಮತ್ತು ವಿವಿಧ ಕಾರ್ಮಿಕ ಮುಖಂಡರುಗಳ ಸಭೆಯನ್ನು ತುರ್ತಾಗಿ ಕರೆದು ಅವರ ಸಮಸ್ಯೆಗಳನ್ನು ಈಡೇರಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು'
-ಸಿದ್ಧರಾಮಯ್ಯ ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X