Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್ ಡೌನ್ ಎಫೆಕ್ಟ್: ದೇಶದ ರಿಟೇಲ್...

ಲಾಕ್ ಡೌನ್ ಎಫೆಕ್ಟ್: ದೇಶದ ರಿಟೇಲ್ ಕ್ಷೇತ್ರಕ್ಕೆ 5.50 ಲಕ್ಷ ಕೋಟಿ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ6 May 2020 4:32 PM IST
share
ಲಾಕ್ ಡೌನ್ ಎಫೆಕ್ಟ್: ದೇಶದ ರಿಟೇಲ್ ಕ್ಷೇತ್ರಕ್ಕೆ 5.50 ಲಕ್ಷ ಕೋಟಿ ರೂ. ನಷ್ಟ

ಮುಂಬೈ: ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ಮಹತ್ವದ ಕ್ರಮವಾಗಿ ದೇಶಾದ್ಯಂತ ಹೇರಲಾದ ಲಾಕ್‍ಡೌನ್‍ನಿಂದಾಗಿ ಸುಮಾರು 7 ಕೋಟಿ ವರ್ತಕರನ್ನು ಹೊಂದಿರುವ ದೇಶದ ರಿಟೇಲ್ ಕ್ಷೇತ್ರ 5.50 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ವರ್ತಕರ ಸಂಘಟನೆಯಾದ ಕಾನ್ಫೆಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಹೇಳಿದೆ.

ಮುಂದಿನ ಕೆಲ ತಿಂಗಳುಗಳಲ್ಲಿ ಕನಿಷ್ಠ ಶೇ 20ರಷ್ಟು ಭಾರತೀಯ ರಿಟೇಲರ್‍ಗಳು ತಮ್ಮ ಉದ್ಯಮವನ್ನು ಮುಚ್ಚಬಹುದು ಎಂದೂ ಸಂಘಟನೆ ಅಂದಾಜಿಸಿದೆ.

ಈ ಹಿನ್ನೆಲೆಯಲ್ಲಿ ಸಾಕಷ್ಟು ನಷ್ಟ ಅನುಭವಿಸಿರುವ ವರ್ತಕರಿಗೆ ಸಹಕಾರಿಯಾಗುವಂತಹ ಹಾಗೂ ಮುಂದೆಯೂ ತಮ್ಮ ವ್ಯಾಪಾರವನ್ನು ನಡೆಸಿಕೊಂಡು ಹೋಗಲು ಅನುವಾಗುವಂತಹ ಪ್ಯಾಕೇಜ್ ಘೋಷಿಸಬೇಕೆಂದೂ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಸರಕಾರವನ್ನು ಆಗ್ರಹಿಸಿದ್ದಾರೆ. ರಿಟೇಲ್ ಕ್ಷೇತ್ರದಲ್ಲಿ ಉಂಟಾಗುವ ನಷ್ಟವು ಇಡೀ ದೇಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂದೂ ಅವರು ಎಚ್ಚರಿಸಿದ್ದಾರೆ.

“ಭಾರತದ ರಿಟೇಲರ್‍ ಗಳು ಪ್ರತಿದಿನ ಸುಮಾರು 15,000 ಕೋಟಿ ರೂ.ಗಳಷ್ಟು ವ್ಯವಹಾರ ನಡೆಸುತ್ತಾರೆ, ಆದರೆ ಲಾಕ್ ಡೌನ್ ಘೋಷಣೆಯಾದಂದಿನಿಂದ ಅವರಿಗೆ 5.50 ಲಕ್ಷ ಕೋಟಿ ರೂ.ಗೂ ಅಧಿಕ ನಷ್ಟವಾಗಿದೆ ಇದರಿಂದ ಸುಮಾರು 1.5 ಕೋಟಿ ವರ್ತಕರು ಬಾಗಿಲು ಮುಚ್ಚುವ ಅನಿವಾರ್ಯತೆ ಎದುರಾಗಬಹುದು. ಇದು ಅವರ ಮೇಲೆ ಅವಲಂಬಿತ ಇನ್ನೂ 75 ಲಕ್ಷ ವರ್ತಕರನ್ನು ಬಾಧಿಸಬಹುದು'' ಎಂದು ಅವರು ಹೇಳಿದ್ದಾರೆ.

ಭಾರತದ ಕನಿಷ್ಠ 2.5 ಕೋಟಿ ವರ್ತಕರು ಸಣ್ಣ ಮತ್ತು ಅತಿ ಸಣ್ಣ ವರ್ತಕರಾಗಿದ್ದಾರೆ, ಉದ್ಯೋಗಿಗಳ ವೇತನ, ಅಂಗಡಿ ಬಾಡಿಗೆ ಮತ್ತಿತರ ಮಾಸಿಕ ವೆಚ್ಚಗಳಿಂದ ಅವರು ಜರ್ಜರಿತರಾಗಿದ್ದಾರೆ. ಉದ್ಯಮವು ಕನಿಷ್ಠ ಮುಂದಿನ ಆರರಿಂದ ಒಂಬತ್ತು ತಿಂಗಳ ತನಕ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ.

ಸರಕಾರ ಕೂಡಲೇ ಮಧ್ಯಪ್ರವೇಶಿಸಬೇಕು, ಇಲ್ಲದೇ ಹೋದಲ್ಲಿ ದೇಶಕ್ಕೆ ತುಂಬಲಾರದ ನಷ್ಟವುಂಟಾದೀತು ಎಂದು ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಬಿ ಸಿ ಭಾರ್ತಿಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X