Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ವೈರಸ್: ದ.ಕ. ಜಿಲ್ಲೆಯಲ್ಲಿ 85...

ಕೊರೋನ ವೈರಸ್: ದ.ಕ. ಜಿಲ್ಲೆಯಲ್ಲಿ 85 ವರದಿ ನೆಗೆಟಿವ್; 3 ಪಾಸಿಟಿವ್

ಓರ್ವ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ6 May 2020 8:24 PM IST
share
ಕೊರೋನ ವೈರಸ್: ದ.ಕ. ಜಿಲ್ಲೆಯಲ್ಲಿ 85 ವರದಿ ನೆಗೆಟಿವ್; 3 ಪಾಸಿಟಿವ್

ಮಂಗಳೂರು, ಮೇ 6: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಬುಧವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ ವರದಿಗಳ ಪೈಕಿ 85 ನೆಗೆಟಿವ್ ಮತ್ತು 3 ಪಾಸಿಟಿವ್ ಬಂದಿದೆ. ಇನ್ನೂ 217 ಮಂದಿಯ ವರದಿ ಬರಲು ಬಾಕಿ ಇದೆ.

ಬುಧವಾರ 79 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಇದರೊಂದಿಗೆ ಈವರೆಗೆ 40,303 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಸಂಚಾರ ಕ್ಲಿನಿಕ್‌ನಲ್ಲಿ 50 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ.ಅಲ್ಲದೆ 137 ಮಂದಿಯ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜ್ವರ ಕ್ಲಿನಿಕ್‌ಗಳಲ್ಲಿ ಈವರೆಗೆ 2518 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಎನ್‌ಐಟಿಕೆಯಲ್ಲಿ 28 ಮತ್ತು ಇಎಸ್‌ಐ ಆಸ್ಪತ್ರೆಯಲ್ಲಿ 40 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. ಉಳಿದಂತೆ 27 ಮಂದಿಯ ಮೇಲೆ ವಿಶೇಷ ನಿಗಾ ಇಡಲಾಗಿದೆ.

ಈವರೆಗೆ 3,916 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 3,699 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 3671 ಮಂದಿಯ ವರದಿಯು ನೆಗೆಟಿವ್ ಮತ್ತು 28 ಮಂದಿಯ ವರದಿಯು ಪಾಸಿಟಿವ್ ಬಂದಿದೆ. ಪಾಸಿಟಿವ್ ಪೈಕಿ 22 ದ.ಕ.ಜಿಲ್ಲೆಯ ನಿವಾಸಿಗಳು, ಕೇರಳದ 4, ಉಡುಪಿಯ 1 ಮತ್ತು ಭಟ್ಕಳದ 1 ಪ್ರಕರಣ ಸೇರಿವೆ. ಅಲ್ಲದೆ ಪಾಸಿಟಿವ್‌ಗಳ ಪೈಕಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಈಗಾಗಲೆ ಬಿಡುಗಡೆಗೊಂಡಿದ್ದರೆ, 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಪೈಕಿ 7 ಮಂದಿಯ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ. ಶಕ್ತಿನಗರದ 80 ವರ್ಷದ ವೃದ್ದೆಯು ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಬೋಳೂರಿನ 58 ವರ್ಷ ಪ್ರಾಯದ ಮಹಿಳೆಯು ಮೆದುಳಿನ ಸೋಂಕು ಮತ್ತು ಕ್ಷಯರೋಗದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎ.19ರಂದು ಮಹಿಳೆ ಮತ್ತು ಎ.24 ಹಾಗೂ ಎ.30ರಂದು ಇಬ್ಬರು ವೃದ್ಧೆಯರು ಮೃತಪಟ್ಟಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆ

ಉಪ್ಪಿನಂಗಡಿಯ 39ರ ಹರೆಯದ ವ್ಯಕ್ತಿಗೆ ಎ.17ರಂದು ಕೊರೋನ ಸೋಂಕು ದೃಢಪಟ್ಟಿತ್ತು. ಆ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಗುಣಮುಖರಾಗಿದ್ದು, ಬುಧವಾರ ಅವರನ್ನು ಡಿಸ್‌ಜಾರ್ಜ್ ಮಾಡಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೀಲ್‌ಡೌನ್ ಮುಂದುವರಿಕೆ

ಬಂಟ್ವಾಳದ ಕಸಬಾ ಮತ್ತು ಬೋಳೂರಿನಲ್ಲಿ ಕೊರೋನ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎರಡೂ ಪ್ರದೇಶಗಳಲ್ಲಿ ಸೀಲ್‌ಡೌನ್‌ನ್ನು ಮುಂದುವರಿಸಲಾಗಿದೆ. ಬಂಟ್ವಾಳ ಸೀಲ್‌ಡೌನ್ ಪ್ರದೇಶಕ್ಕೆ ಬಂಟ್ವಾಳ ತಾಲೂಕು ತಹಶೀಲ್ದಾರ್/ ಮ್ಯಾಜಿಸ್ಟ್ರೇಟ್‌ರನ್ನು ಹಾಗೂ ಬೋಳೂರು ಸೀಲ್‌ಡೌನ್ ಪ್ರದೇಶಕ್ಕೆ ಸ್ಮಾರ್ಟ್‌ಸಿಟಿಯ ಕಾರ್ಯಕಾರಿ ಅಭಿಯಂತರರನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಕ ಮಾಡಲಾಗಿದೆ.

ಪರೀಕ್ಷೆ ಕ್ರಮಬದ್ಧವಾಗಿದೆ: ವೈದ್ಯಾಧಿಕಾರಿ

ವೆನ್ಲಾಕ್ ಜಿಲ್ಲಾ ಕೋವಿಡ್ ಆಸ್ಪತ್ರೆಯ ವೈರಾಲಜಿ ಲ್ಯಾಬ್ ಮೂರು ಶೆಟ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರಬರಾಜಾದ ಪರೀಕ್ಷಾ ಕಿಟ್‌ಗಳು ಸಮರ್ಪಕವಾಗಿದ್ದು, ವರದಿಗಳು ಸರಿಯಾಗಿಯೇ ಬರುತ್ತಿವೆ. ಪರೀಕ್ಷಾ ಕಿಟ್‌ಗಳು ಸರಿ ಇಲ್ಲದ ಕಾರಣ ವರದಿ ಬರುತ್ತಿಲ್ಲ ಎಂಬುದು ಸತ್ಯಕ್ಕೆ ದೂರವಾದುದು ಎಂದು ವೆನ್ಲಾಕ್ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.

ವೈರಾಲಜಿ ಲ್ಯಾಬ್ ಪರೀಕ್ಷೆಗಳು ಐಸಿಎಂಆರ್ ಹಾಗೂ ರಾಜ್ಯ ಸರಕಾರದಿಂದ ಅನುಮೋದನೆಗೊಂಡಿರುತ್ತವೆ. ಎಲ್ಲಾ ಪಾಸಿಟಿವ್ ಪ್ರಕರಣಗಳ ಪರೀಕ್ಷಾ ವರದಿಗಳು ಐಸಿಎಂಆರ್‌ನಿಂದ ದೃಢೀಕರಿಸಲ್ಪಡುತ್ತವೆ. ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಂದ ಗಂಟಲು ದ್ರವ ಮಾದರಿಗಳು ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಯ ವೈರಾಲಜಿ ಲ್ಯಾಬ್‌ಗೆ ಬರುತ್ತಿವೆ. ಕಳೆದ ಮೂರು ದಿನಗಳಲ್ಲಿ ಗಂಟಲು ದ್ರವ ಮಾದರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ವರದಿಗಳು ತಡವಾಗಿರುತ್ತದೆ. ಮೂರು ದಿನಗಳಲ್ಲಿ ಒಟ್ಟು 669 ಮಾದರಿಗಳ ಪರೀಕ್ಷೆಗಳು ಆಗಿ 669 ವರದಿಗಳನ್ನೂ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X