ಅನಿವಾಸಿ ಕನ್ನಡಿಗರ ವಾಪಸ್‌ಗೆ ಕ್ರಮ: ಶ್ಲಾಘನೆ
ಮಂಗಳೂರು, ಮೇ 6: ಕೊರೋನ ವೈರಸ್ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಅತಂತ್ರರಾಗಿದ್ದ ಅನಿವಾಸಿ ಭಾರತೀಯ/ಕನ್ನಡಿಗರನ್ನು ವಾಪಸ್ ಕರೆತರಲು ಕೇಂದ್ರ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ಗೆ ಈ ಹಿಂದೆ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಸಂಸದರು ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಜೊತೆ ದೂರವಾಣಿ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಲಾಗಿದೆ ಎಂದಿದ್ದಾರೆ.
Next Story





