ಕಂಟೈನರ್ ಲಾರಿ ಢಿಕ್ಕಿ : ದ್ವಿಚಕ್ರ ವಾಹನ ಸವಾರರಿಗೆ ಗಾಯ

ಬಂಟ್ವಾಳ, ಮೇ 6: ದ್ವಿಚಕ್ರ ವಾಹನಕ್ಕೆ ಕಂಟೈನರ್ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಗೆ ಗಾಯ ಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿಯಲ್ಲಿ ಬುಧವಾರ ನಡೆದಿದೆ.
ಮಾಣಿ ಸಮೀಪದ ಸೇರಾ ನಿವಾಸಿ ಬಾಲಕೃಷ್ಣ ಪೂಜಾರಿ ಹಾಗೂ ಶೀನಪ್ಪ ಪೂಜಾರಿ ಗಾಯಗೊಂಡವರು.
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಕಂಟೈನರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿಯಾಗಿ ದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಇಬ್ಬರ ಕಾಲಿಗೆ ಗಾಯಗಳಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





