ಕಾಸರಗೋಡಿನಲ್ಲಿರುವ ದ.ಕ. ಜಿಲ್ಲೆಯ ಕಾರ್ಮಿಕರನ್ನು ಕರೆತರಲು ವ್ಯವಸ್ಥೆ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು, ಮೇ 6: ದ.ಕ. ಜಿಲ್ಲೆಯ ಕೂಲಿ ಕಾರ್ಮಿಕರು ಕಾಸರಗೋಡಿನಲ್ಲಿ ಆತಂಕದಲ್ಲಿದ್ದಾರೆಂಬ ಎಂಬ ಬಗ್ಗೆ ಕೇರಳ ಸರಕಾರ ಹಾಗೂ ಕಾಸರಗೋಡಿನ ಜಿಲ್ಲಾಧಿಕಾರಿ ಜತೆ ಮಾತನಾಡಿ, ಇಲ್ಲಿಗೆ ಕರೆಸಿಕೊಳ್ಳುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡುತ್ತಾ ಈ ವಿಷಯ ತಿಳಿಸಿದ ಅವರು, ರಾಜ್ಯದಲ್ಲಿರುವ ಮುಜರಾಯಿ ದೇವಸ್ಥಾನಗಳಲ್ಲಿ ದೈನಂದಿನ ಪೂಜೆಗಳು ಅರ್ಚಕರ ಸಮಕ್ಷಮದಲ್ಲಿ ಇಂದಿಗೂ ನಡೆಯುತ್ತಿದೆ ಎಂದರು.
ಅರ್ಚಕರ ಸಮಸ್ಯೆಗಳಿಗೆ ಸಂಬಂಧಿಸಿ ಮುಜರಾಯಿ ಇಲಾಖೆಯ ದೇವಸ್ಥಾನಗಳ ವ್ಯಾಪ್ತಿಯಲ್ಲಿ ಅಂದಾಜು 33,000ಕ್ಕೂ ಅಧಿಕ ಆಹಾರದ ಕಿಟ್‌ಗಳನ್ನು ಅರ್ಚಕರಿಗೆ ನೀಡುವ ವ್ಯವಸ್ಥೆ ಆಗಿದೆ. ಧಾರ್ಮಿಕ ದತ್ತಿ ಇಲಾಖೆಯಲ್ಲಿ ಅರ್ಚಕರಿಗೆ ಅಥವಾ ಪೂಜಾ ಕೈಕಂರ್ಯಗಳಿಗೆ ಯಾವುದೇ ತೊಂದರೆ ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇರುವುದರಿಂದ ದೇವಸ್ಥಾನಗಳ ಕುರಿತು ಹಿರಿಯರ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
Next Story





