Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಪ್ಯಾಕೇಜ್ ನಲ್ಲಿ ಕಡಗಣನೆಯ ಆರೋಪ:...

ಕೊರೋನ ಪ್ಯಾಕೇಜ್ ನಲ್ಲಿ ಕಡಗಣನೆಯ ಆರೋಪ: ವಿವಿಧ ಸಮುದಾಯಗಳ ಮುಖಂಡರಿಂದ ಸಿದ್ದರಾಮಯ್ಯರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ7 May 2020 2:30 PM IST
share
ಕೊರೋನ ಪ್ಯಾಕೇಜ್ ನಲ್ಲಿ ಕಡಗಣನೆಯ ಆರೋಪ: ವಿವಿಧ ಸಮುದಾಯಗಳ ಮುಖಂಡರಿಂದ ಸಿದ್ದರಾಮಯ್ಯರಿಗೆ ಮನವಿ

ಬೆಂಗಳೂರು, ಮೇ 7:  ಜೀವನೋಪಾಯಕ್ಕೆ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿರುವ ವಿವಿಧ ಸಮುದಾಯಗಳ ಮುಖಂಡರು ಇಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊರೋನ ಪ್ಯಾಕೇಜ್‍ನಲ್ಲಿ ಸರ್ಕಾರ ತಮ್ಮನ್ನು ಕಡೆಗಣಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ನಿನ್ನೆ ಘೋಷಣೆ ಮಾಡಿರುವ ಪ್ಯಾಕೇಜ್‍ನಲ್ಲಿ ಸವಿತಾ ಸಮಾಜ, ನೇಕಾರರು ಹಾಗೂ ಮಡಿವಾಳ ಸಮುದಾಯದವರಿಗೆ ಮಾತ್ರ ನೆರವು ಘೋಷಣೆ ಮಾಡಿದ್ದಾರೆ. ಆದರೆ, ಆ ವರ್ಗದವರಿಗೂ ನೆರವು ಸೂಕ್ತ ಪ್ರಮಾಣದಲ್ಲಿ ಸಿಕ್ಕಿಲ್ಲ ಎಂದು ಮುಖಂಡರು ದೂರಿದ್ದಾರೆ.

ಅಖಿಲ ಕರ್ನಾಟಕ ಗಾಣಿಗ ಮಹಾಸಭಾ, ಶ್ರೀ ಭಾವಸಾರ ಕ್ಷತ್ರಿಯ ಸಮಾಜ (ದರ್ಜಿಗಳು) ಶ್ರೀ ವಿಶ್ವಕರ್ಮ ಸೇವಾ ಸಮಿತಿ ಶ್ರೀ ಸೋಮವಂಶ ಆರ್ಯ ಕ್ಷತ್ರಿಯ ಸೇವಾ ಸಂಘ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಮಹಾ ಒಕ್ಕೂಟ, ಅಲೆಮಾರಿಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸಿದ್ದರಾಮಯ್ಯರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವಿ ಪತ್ರಗಳನ್ನು ಸಲ್ಲಿಸಿದರು.

ವಿದ್ಯುತ್ ಮಗ್ಗ ನೇಕಾರರು, ಗಾಣಿಗರು, ಕುಂಬಾರ, ಕಮ್ಮಾರ, ಮೇದರು, ದರ್ಜಿಗಳು, ವಿಶ್ವಕರ್ಮ, ಅಲೆಮಾರಿಗಳು, ಬುಡಕಟ್ಟು ಸಮುದಾಯ, ಉಪ್ಪಾರರು, ಅರ್ಚಕರು, ಮಂಗಳವಾದ್ಯ ನುಡಿಸುವವರು, ಕಲಾವಿದರು, ಛಾಯಾಗ್ರಾಹಕರನ್ನು ಕೊರೊನಾ ಪ್ಯಾಕೇಜ್‍ನಲ್ಲಿ ಸೇರಿಸದಿರುವ ಬಗ್ಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ. ಲಕ್ಷ್ಮಿನಾರಾಯಣ ಅವರೂ ಸಿದ್ದರಾಮಯ್ಯರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಧನ್ಯವಾದ ಸಲ್ಲಿಸಿದ ಮುಖಂಡರು:  ಸರ್ಕಾರ ತಮ್ಮ ಸಮುದಾಯದವರಿಗೆ ನೆರವು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸವಿತಾ ಸಮಾಜ, ನೇಕಾರರು ಹಾಗೂ ಮಡಿವಾಳ ಸಮುದಾಯದವರು ಸಿದ್ದರಾಮಯ್ಯರಿಗೆ ಧನ್ಯವಾದ ಸಲ್ಲಿಸಿದರು.

ಸಂಘಟನೆಗಳ ಪ್ರಮುಖ ಬೇಡಿಕೆಗಳು: ಕಬ್ಬಿಣ ಕೆಲಸಗಾರರು, ಕಲ್ಲಿನ ವಿಗ್ರಹ ತಯಾರು ಮಾಡುವವರು, ಚಿನ್ನ, ಬೆಳ್ಳಿ ಕೆಲಸದಲ್ಲಿರುವವರು, ಎರಕದ ಕೆಲಸಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು

ಮರಗೆಲಸ, ಗೊಂಬೆಗಳಿಗೆ ಬಣ್ಣ ಹಚ್ಚುವವರು, ಕರಕುಶಲ ಕೆಲಸದವರಿಗೆ ನೆರವು ನೀಡಬೇಕು

ಲಕ್ಷಾಂತರ ಸಂಖ್ಯೆಯಲ್ಲಿರುವ ಟೈಲರ್‍ಗಳಿಗೆ ಸಹಾಯ ಮಾಡಬೇಕು

ಶುದ್ಧ ಎಣ್ಣೆ ತಯಾರು ಮಾಡುವ ಗಾಣಿಗರಿಗೆ ಆರ್ಥಿಕ ನೆರವು ನೀಡಬೇಕು

ವಿದ್ಯುತ್ ಮಗ್ಗಗಳನ್ನು ಹೊಂದಿರುವ ನೇಕಾರರನ್ನು ಪ್ಯಾಕೇಜ್‍ನಲ್ಲಿ ಸೇರಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X