ಬಜ್ಪೆ: ಬೈಕಿಗೆ ಟಿಪ್ಪರ್ ಢಿಕ್ಕಿ; ಮಹಿಳೆ ಮೃತ್ಯು

ಬಜ್ಪೆ, ಮೇ 7: ಬೈಕಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮಹಿಳೆ ಮೃತಪಟ್ಟ ಘಟನೆ ಬಜ್ಪೆಯ ಪಾಪಿಲಾನ್ ಬಾರ್ ಸಮೀಪ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಜೋಕಟ್ಟೆ ನಿವಾಸಿ ಶಶಿಕಲಾ(45) ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಶಶಿಕಲಾರ ಪತಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಅಪಘಾತಕ್ಕೆ ಕಾರಣವಾದ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Next Story





