Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಹೊರರಾಜ್ಯದ ಮೀನುಗಾರಿಕಾ...

ಉಡುಪಿ: ಹೊರರಾಜ್ಯದ ಮೀನುಗಾರಿಕಾ ಕಾರ್ಮಿಕರಿಗೆ ಊರಿಗೆ ತೆರಳುವ ಭಾಗ್ಯ

ಜಿಲ್ಲಿಯ ಬಂದರುಗಳಲ್ಲಿ 692 ಕಾರ್ಮಿಕರು: ಜಿಲ್ಲಾಡಳಿತದಿಂದ ಪಾಸ್ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ7 May 2020 5:51 PM IST
share
ಉಡುಪಿ: ಹೊರರಾಜ್ಯದ ಮೀನುಗಾರಿಕಾ ಕಾರ್ಮಿಕರಿಗೆ ಊರಿಗೆ ತೆರಳುವ ಭಾಗ್ಯ

ಉಡುಪಿ, ಮೇ 7: ಲಾಕ್‌ಡೌನ್‌ನಿಂದಾಗಿ ಕಳೆದ 45 ದಿನಗಳಿಂದ ಜಿಲ್ಲೆಯ ಮೂರು ಬಂದರುಗಳಲ್ಲಿ ಬಾಕಿಯಾಗಿ ಉಳಿದುಕೊಂಡಿರುವ ಮೀನುಗಾರಿಕಾ ಬೋಟುಗಳಲ್ಲಿ ದುಡಿಯತ್ತಿರುವ ಹೊರರಾಜ್ಯಗಳ ನೂರಾರು ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸಿಕೊಡಲು ಉಡುಪಿ ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸುತ್ತಿದೆ.

ಮಲ್ಪೆ ಬಂದರಿನಲ್ಲಿ ಆಂದ್ರ ಪ್ರದೇಶದ 194, ಒರಿಸ್ಸಾ-183, ಪಶ್ಚಿಮ ಬಂಗಾಳ-37, ಛತ್ತೀಸ್‌ಗಡ್-107, ಉತ್ತರಪ್ರದೇಶ- 5, ಜಾರ್ಖಂಡ್-77, ಅಸ್ಸಾಂ- 4, ತಮಿಳುನಾಡು- 28, ಮಹಾರಾಷ್ಟ್ರ- 4 ಸೇರಿದಂತೆ ಒಟ್ಟು 639, ಕೋಡಿಬೆಂಗ್ರೆ ಬಂದರಿನಲ್ಲಿ ಒರಿಸ್ಸಾ- 4, ಛತ್ತೀಸ್‌ಗಡ್- 7, ಉತ್ತರ ಪ್ರದೇಶ -4, ಜಾರ್ಖಂಡ್-10 ಸಹಿತ ಒಟ್ಟು 25 ಮತ್ತು ಗಂಗೊಳ್ಳಿ ಬಂದರಿನಲ್ಲಿ ಒರಿಸ್ಸಾ-26, ಪಶ್ಚಿಮ ಬಂಗಾಳ-2 ಸೇರಿದಂತೆ ಒಟ್ಟು 28 ಮಂದಿ ಕಾರ್ಮಿಕರು ಇದ್ದಾರೆ. ಹೀಗೆ ಜಿಲ್ಲೆಯ ಮೂರು ಬಂದರುಗಳಲ್ಲಿ 9 ರಾಜ್ಯಗಳ ಒಟ್ಟು 692 ಮಂದಿ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಹಾತೊರೆಯುತ್ತಿದ್ದಾರೆ. ಲಾಕ್‌ಡೌನ್ ಆರಂಭವಾಗಿ ಮೀನುಗಾರಿಕೆ ಸ್ಥಗಿತಗೊಂಡ ಮಾ.25ರಿಂದ ಇವರೆಲ್ಲ ತಮ್ಮ ಊರುಗಳಿಗೆ ಹೋಗಲು ರೈಲು ಹಾಗೂ ಬಸ್ಸಿನ ವ್ಯವಸ್ಥೆಗಳಿಲ್ಲದೆ ಬಂದರುಗಳಲ್ಲಿಯೇ ಉಳಿದುಕೊಂಡಿದ್ದರು. ಜಿಲ್ಲಾಡಳಿತದ ಸೂಚನೆಯಂತೆ ಇವರಿಗೆ ಬಂದರಿನಲ್ಲಿ ವಸತಿ ವ್ಯವಸ್ಥೆ ಮತ್ತು ಮೀನುಗಾರರ ಸಂಘದಿಂದ ಊಟ ನೀಡಲಾಗುತ್ತಿತ್ತು. ಕೆಲವು ದಿನಗಳಿಂದ ಸಂಘವು ಇವರಿಗೆ ಊಟ ನೀಡುವು ದನ್ನು ಸ್ಥಗಿತಗೊಳಿಸಿರುವುದರಿಂದ ಜಿಲ್ಲಾಡಳಿತವೇ ಇವರಿಗೆ ಊಟ- ಉಹಾರದ ವ್ಯವಸ್ಥೆಯನ್ನು ಮಾಡಿದೆ.

ನಾಯ್ಡು ಮನವಿಗೆ ಸಿಎಂ ಸ್ಪಂದನೆ

ಕಾರ್ಮಿಕರಿಗೆ ಜಿಲ್ಲೆಯ ಮೂರು ಮೀನುಗಾರಿಕಾ ಬಂದರುಗಳಲ್ಲಿ ಉಳಿದು ಕೊಳ್ಳಲು ಎಲ್ಲ ವ್ಯವಸ್ಥೆಗಳನ್ನು ಮಾಡಿದರೂ ಇವರೆಲ್ಲ ತಮ್ಮ ತಮ್ಮ ಊರುಗಳಿಗೆ ತೆರಳುವ ಬೇಡಿಕೆ ಮುಂದಿಟ್ಟಿದ್ದಾರೆ.

ಅದೇ ರೀತಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೂಡ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರೊಂದಿಗೆ ಮಾತ ನಾಡಿ, ಆಂದ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಕಾರ್ಮಿಕರನ್ನು ಕಳುಹಿಸಿ ಕೊಡುವಂತೆ ತಿಳಿಸಿದ್ದರು. ಅದಕ್ಕೆ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿ ಕೂಡಲೇ ಸಹಾಯ ಮಾಡುವ ಭರವಸೆ ನೀಡಿದ್ದಾರೆಂದು ಚಂದ್ರಬಾಬು ನಾಯ್ಡು ಮೇ 6ರಂದು ಟ್ವೀಟ್ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಡಳಿತ ಆಂಧ್ರ ಸೇರಿದಂತೆ ಜಿಲ್ಲೆಯ ಮೀನುಗಾರಿಕಾ ಬೋಟುಗಳಲ್ಲಿ ದುಡಿಯುವ ಎಲ್ಲ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ತಯಾರಿ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಮೀನುಗಾರಿಕಾ ಇಲಾಖೆಯು ಈ ಕಾರ್ಮಿಕರಿಗೆ ಸೇವಾಸಿಂಧು ವೆಬ್‌ಸೈಟ್ ಮೂಲಕ ಆನ್ ಲೈನ್‌ನಲ್ಲಿ ನೋಂದಣಿ ಮಾಡಿ ಪಾಸ್ ಒದಗಿಸುವ ಕೆಲಸ ಮಾಡುತ್ತಿದೆ.

ಇವರಲ್ಲಿ ಮೊದಲ ಹಂತದಲ್ಲಿ ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಕಾರ್ಮಿಕರನ್ನು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕಳುಹಿಸಿಕೊಡಲು ಇಲಾಖೆ ಕ್ರಮ ತೆಗೆದುಕೊಂಡಿದೆ. ಮುಂದೆ ದೂರದ ರಾಜ್ಯಗಳ ಕಾರ್ಮಿಕರನ್ನು ರೈಲಿನ ಮೂಲಕ ಕಳುಹಿಸಲು ಇಲಾಖೆ ಚಿಂತನೆ ನಡೆಸುತ್ತಿದೆ.

ಜಿಲ್ಲಾಡಳಿತದ ಸೂಚನೆಯಂತೆ ಬೋಟುಗಳಲ್ಲಿ ದುಡಿಯುವ ಹೊರರಾಜ್ಯದ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳುಹಿಸುವ ಪ್ರಕ್ರಿಯೆ ಆರಂಭ ಗೊಂಡಿದೆ. ಮೊದಲು ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿನ ಕಾರ್ಮಿಕ ರನ್ನು ಕಳುಹಿಸಿ ಕೊಡಲಾಗುವುದು. ಅದಕ್ಕಾಗಿ ಅವರಿಗೆ ಸೇವಾ ಸಿಂಧು ಮೂಲಕ ಪಾಸ್ ಒದಗಿಸುವ ಕಾರ್ಯ ಮಾಡಲಾಗುತ್ತಿದೆ. ಈಗಾಗಲೇ ಸುಮಾರು 202 ಪಾಸ್‌ಗಳು ಮಂಜೂರಾಗಿವೆ. ಇವರನ್ನು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

-ಗಣೇಶ್, ಉಪನಿರ್ದೇಶಕರು, ಮೀನುಗಾರಿಕೆ ಇಲಾಖೆ, ಉಡುಪಿ.

ಶುಕ್ರವಾರ 9 ಬಸ್‌ಗಳಲ್ಲಿ ಪ್ರಯಾಣ
ಜಿಲ್ಲೆಯ 3 ಬಂದರುಗಳಲ್ಲಿರುವ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳ ಮೀನುಗಾರಿಕಾ ಬೋಟುಗಳ ಕಾರ್ಮಿಕರನ್ನು ಜಿಲ್ಲಾಡಳಿತದ ಸೂಚನೆಯಂತೆ ಮೇ 8ರಂದು ಒಟ್ಟು 9 ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕರೆದು ಕೊಂಡು ಹೋಗಲಾಗುವುದು. ಒಂದೊಂದು ಬಸ್‌ಗಳಲ್ಲಿ 30 ಮಂದಿ ಪ್ರಯಾಣ ಮಾಡಲಿದ್ದಾರೆ ಎಂದು ಉಡುಪಿ ಕೆಎಸ್‌ಆರ್‌ಟಿಸಿ ಡಿಪೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X