Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಕಂಟೈನ್ಮೆಂಟ್ ಝೋನ್ ಹೊರತು...

ತುಮಕೂರು: ಕಂಟೈನ್ಮೆಂಟ್ ಝೋನ್ ಹೊರತು ಪಡಿಸಿ ಉಳಿದೆಡೆ ವೈನ್ ಶಾಪ್, ಅಂಗಡಿ ತೆರೆಯಲು ಅನುಮತಿ

ಮೇ 17ರವರೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ

ವಾರ್ತಾಭಾರತಿವಾರ್ತಾಭಾರತಿ7 May 2020 6:17 PM IST
share
ತುಮಕೂರು: ಕಂಟೈನ್ಮೆಂಟ್ ಝೋನ್ ಹೊರತು ಪಡಿಸಿ ಉಳಿದೆಡೆ ವೈನ್ ಶಾಪ್, ಅಂಗಡಿ ತೆರೆಯಲು ಅನುಮತಿ

ತುಮಕೂರು, ಮೇ.7: ತುಮಕೂರು ನಗರದ ಕಂಟೈನ್ಮೆಂಟ್ ವಲಯ ಹೊರತುಪಡಿಸಿ ತುಮಕೂರು ನಗರದಲ್ಲಿ ವೈನ್ ಶಾಪ್ ಸೇರಿದಂತೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ತುಮಕೂರು ನಗರದಲ್ಲಿ ಕೋವಿಡ್-19 ವೈರಾಣು ನಿಯಂತ್ರಣ ಮತ್ತು ಸಡಿಲಿಕೆ ಕುರಿತು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರದ ಶಾಸಕರಾದ ಜ್ಯೋತಿಗಣೇಶ್ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಡಿಲಿಕೆ ಕುರಿತು ಸಮಗ್ರ ಮಾಹಿತಿ ಪಡೆದು ಮಾತನಾಡಿದರು. "ಸುರಕ್ಷಿತ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಜನಜಂಗುಳಿ ನಿಯಂತ್ರಣದೊಂದಿಗೆ ಅಂಗಡಿಗಳ ಮಾಲಕರು ಮತ್ತು ವರ್ತಕರು ತಮ್ಮ ಸ್ವಯಂ ಜವಾಬ್ದಾರಿಯಿಂದ ಅಂಗಡಿಗಳನ್ನು ತೆರೆಯಲು ಅವರು ಸೂಚನೆ ನೀಡಿದರು. 

ತುಮಕೂರು ನಗರದಲ್ಲಿ ವೈನ್‍ಶಾಪ್‍ಗಳು ಹಾಗೂ ಎಂಎಸ್‍ಐಎಲ್ ಅಂಗಡಿಗಳು ಬೆಳಿಗ್ಗೆ 9 ಗಂಟೆಯಿಂದ ಸಂಜೆ 7ರವರೆಗೆ ತೆರೆಯಲು ಅನುಮತಿ ನೀಡಿದ್ದು, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಹಾಗೂ ಸಿಸಿ ಟಿವಿ ಅಳವಡಿಸಬೇಕು. ಈ ಬಗ್ಗೆ ಕ್ರಮ ವಹಿಸುವಂತೆ ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದರು. 

ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಅಂಗಡಿಗಳನ್ನು ಬೆಳಗ್ಗೆ 10 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ. ತುಮಕೂರು ನಗರಕ್ಕೆ ನೇರವಾಗಿ ಸಂಪರ್ಕಿಸುವ ರಸ್ತೆಗಳ ಮೂಲಕ ಬರುವ ಎಲ್ಲಾ ವಾಹನಗಳನ್ನು ತಪಾಸಣೆಗೊಳಪಡಿಸಲು ಅಗತ್ಯವಿರುವ ಕಡೆ ಚೆಕ್‍ಪೋಸ್ಟ್ ಗಳನ್ನು ಕೂಡಲೇ ಸ್ಥಾಪಿಸಿ ನಗರಕ್ಕೆ ಬರುವ ಜನರನ್ನು ತಪಾಸಣೆಗೊಳಪಡಿಸುವಂತೆ ಸಚಿವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು. 

ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯವಾಗಿದೆ, ಸ್ಯಾನಿಟೈಸರ್ ಇಡುವುದು, ಬ್ಲೀಚಿಂಗ್ ಪೌಡರ್ ಮತ್ತು ಲೈಜಾಲ್ ಬಳಸಿ ಶೌಚಾಲಯವನ್ನು ಸ್ವಚ್ಛವಾಗಿಡುವುದು, ಸಿಬ್ಬಂದಿ ವರ್ಗದವರು, ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಮುಂಜಾಗ್ರತಾ ಕ್ರಮ ವಹಿಸಬೇಕು ಮತ್ತು ಗ್ರಾಹಕರ ಮಾಹಿತಿಯನ್ನು ಪಡೆಯಬೇಕು ಎಂದು ಸಚಿವರು ವರ್ತಕರಿಗೆ ಸೂಚನೆ ನೀಡಿದರು. 

ಜಿಮ್, ಶಾಪಿಂಗ್ ಕಾಂಪ್ಲೆಕ್ಸ್, ಸ್ವಿಮ್ಮಿಂಗ್ ಫೂಲ್ ಹಾಗೂ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅವಕಾಶವಿಲ್ಲ. ಸರಕಾರದ ಆದೇಶ ಮತ್ತು ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ವರ್ತಕರು ಪಾಲಿಸಬೇಕು. ಅಂಗಡಿಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಕಾನೂನು ಪಾಲಿಸದೇ ಇರುವ ಅಂಗಡಿಗಳ ಮೇಲೆ ನಿಗಾವಹಿಸಲು 6 ಮೊಬೈಲ್ ಸ್ವ್ಕಾಡ್‍ಗಳನ್ನು ರಚಿಸಲಾಗಿದ್ದು, ಅವು ಗಸ್ತಿನಲ್ಲಿರುತ್ತವೆ. ಸೂಚನೆ ಉಲ್ಲಂಘನೆ ಕಂಡುಬಂದ ಅಂಗಡಿಗಳ ಮಾಲಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಹಾಗೂ ಅಂತಹ ವ್ಯಾಪಾರ ಮಳಿಗೆಗಳನ್ನು ಮುಚ್ಚಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು. 

ಕೇಂದ್ರ ಸರಕಾರದ ಆದೇಶದಂತೆ ಕೋವಿಡ್-19 ನಿಯಂತ್ರಣಕ್ಕಾಗಿ ಮೇ 17ರವರೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೊನ ವಂಶಿಕೃಷ್ಣ, ಜಿ.ಪಂ. ಸಿಇಓ ಶುಭಾ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಡಿ.ಹೆಚ್.ಓ. ಡಾ.ಚಂದ್ರಿಕಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ, ಛೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ಚಂದ್ರಶೇಖರ್, ಅಂಗಡಿಗಳ ಮಾಲಕರು, ವರ್ತಕರ ಸಂಘದ ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X