ಛತ್ತೀಸ್ ಗಢ: ವಿಷಾನಿಲ ಸೇವಿಸಿ 7 ಕಾರ್ಮಿಕರು ಅಸ್ವಸ್ಥ; ಮೂವರ ಸ್ಥಿತಿ ಗಂಭೀರ

ಛತ್ತೀಸ್ ಗಢ: ಪೇಪರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಾನಿಲ ಸೇವಿಸಿದ ಪರಿಣಾಮ ಏಳು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
7 ಕಾರ್ಮಿಕರಲ್ಲಿ ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ರಾಯ್ಪುರಕ್ಕೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
“ನಮಗೆ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಆಸ್ಪತ್ರೆಯಿಂದಲೇ ನಮಗೆ ಈ ವಿಚಾರ ತಿಳಿಯಿತು. ಮಾಲಕನ ವಿರುದ್ಧ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Next Story





