ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
ಕೋಟ, ಮೇ 7: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಫೇವರೆಟ್ ಕಾಂಪ್ಲೆಕ್ಸ್ ಬಳಿ ಮೇ 6ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬೈಕ್ ಸವಾರ ಶ್ರೀಧರ ಬಾಯರಿ ಎಂದು ಗುರುತಿಸಲಾಗಿದೆ. ಕಾಂಪ್ಲೆಕ್ಸ್ ಎದುರಿನಿಂದ ಬಿದ್ಕಲ್ಕಟ್ಟೆ -ಹಾಲಾಡಿ ಮುಖ್ಯ ರಸ್ತೆಗೆ ಬಂದ ಬೈಕ್‌ಗೆ ಬಿದ್ಕಲ್ಕಟ್ಟೆ ಕಡೆಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶ್ರೀಧರ ಬಾಯರಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





