ಕೊರೋನ ವೈರಸ್: ದ.ಕ. ಜಿಲ್ಲೆಯಲ್ಲಿ ಗುರುವಾರ 92 ವರದಿ ನೆಗೆಟಿವ್
ಇನ್ನೂ 272 ವರದಿ ಬರಲು ಬಾಕಿ

ಸಾಂದರ್ಭಿಕ ಚಿತ್ರ
ಮಂಗಳೂರು, ಮೇ 7: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಗುರುವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 92 ವರದಿ ನೆಗೆಟಿವ್ ಆಗಿದೆ. ಇನ್ನೂ 272 ಮಂದಿಯ ವರದಿ ಬರಲು ಬಾಕಿ ಇದೆ.
ಗುರುವಾರ 24 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಇದರೊಂದಿಗೆ ಈವರೆಗೆ 40,327 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಸಂಚಾರ ಕ್ಲಿನಿಕ್ನಲ್ಲಿ 14 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಅಲ್ಲದೆ 147 ಮಂದಿಯ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಜ್ವರ ಕ್ಲಿನಿಕ್ಗಳಲ್ಲಿ ಈವರೆಗೆ 2569 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಎನ್ಐಟಿಕೆಯಲ್ಲಿ 39 ಮತ್ತು ಇಎಸ್ಐ ಆಸ್ಪತ್ರೆಯಲ್ಲಿ 40 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಉಳಿದಂತೆ 20 ಮಂದಿು ಮೇಲೆ ವಿಶೇಷ ನಿಗಾ ಇಡಲಾಗಿದೆ.
ಈವರೆಗೆ 4,063 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 3,791 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 3763 ಮಂದಿಯ ವರದಿಯು ನೆಗೆಟಿವ್ ಮತ್ತು 28 ಮಂದಿಯ ವರದಿಯು ಪಾಸಿಟಿವ್ ಬಂದಿದೆ. ಪಾಸಿಟಿವ್ ಪೈಕಿ 22 ದ.ಕ.ಜಿಲ್ಲೆಯ ನಿವಾಸಿಗಳು, ಕೇರಳದ 4, ಉಡುಪಿಯ 1 ಮತ್ತು ಭಟ್ಕಳದ 1 ಪ್ರಕರಣ ಸೇರಿವೆ. ಅಲ್ಲದೆ ಪಾಸಿಟಿವ್ಗಳ ಪೈಕಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಈಗಾಗಲೆ ಬಿಡುಗಡೆಗೊಂಡಿದ್ದರೆ, 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಪೈಕಿ 10 ಮಂದಿಯ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ.
ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ಕುಲಶೇಖರ ಸಮೀಪದ ಶಕ್ತಿನಗರದ 80 ವರ್ಷದ ವೃದ್ದೆಯ ಆರೋಗ್ಯ ಸ್ಥಿತಿ ನಾಜೂಕಾಗಿದೆ. ಮೆದುಳಿನ ಸೋಂಕು ಮತ್ತು ಕ್ಷಯರೋಗದಿಂದ ಬಳಲುತ್ತಿರುವ ಬೋಳೂರಿನ 58 ವರ್ಷ ಪ್ರಾಯದ ಮಹಿಳೆಯು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಸ್ಥಿತಿ ಗಂಭೀರವಾಗಿದೆ.
ಎ.19ರಂದು ಮಹಿಳೆ ಮತ್ತು ಎ.24 ಹಾಗೂ ಎ.30ರಂದು ಇಬ್ಬರು ವೃದ್ಧೆಯರು ಮೃತಪಟ್ಟಿದ್ದಾರೆ.







