ಮೇ 8: ವಿಶ್ವ ರೆಡ್‌ಕ್ರಾಸ್ ದಿನಾಚರಣೆ
ಉಡುಪಿ, ಮೇ 7: ರೆಡ್‌ಕ್ರಾಸ್ ಸಂಸ್ಥೆಯ ಸಂಸ್ಥಾಪಕ ಜೀನ್ ಹೆನ್ರಿ ಡ್ಯುನಾಂಟ್ ಜನ್ಮದಿವನ್ನು ಮೇ 8ರಂದು ವಿಶ್ವ ರೆಡ್‌ಕ್ರಾಸ್ ದಿನವನ್ನಾಗಿ ಆಚರಿಸುತ್ತಿದ್ದು, ಉಡುಪಿಯಲ್ಲಿ ಈ ಸಂಬಂಧ ನಾಳೆ ಬೆಳಗ್ಗೆ 9:45ಕ್ಕೆ ಅಜ್ಜರಕಾಡಿನ ರೆಡ್‌ಕ್ರಾಸ್ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಅರ್ಹ ವಿಕಲಚೇತನ ಫಲಾನುಭಗಳಿಗೆ ದಿನಸಿ ಸಾಮಗ್ರಿಗಳ ಕಿಟ್ ಮತ್ತು ಕ್ಯಾನ್ಸರ್ ಹಾಗೂ ಇತರೆ ರೋಗಿಗಳಿಗೆ ಫ್ಯಾಮಿಲಿ ಪ್ಲಾನಿಂಗ್ ಆಫ್ ಇಂಡಿಯಾ ಮೂಲಕ ಔಷಧ ವಿತರಣೆ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಲಿದ್ದು, ಉಡುಪಿಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ರೆಡ್‌ಕ್ರಾಸ್‌ನ ಪ್ರಕಟಣೆ ತಿಳಿಸಿದೆ.
Next Story





