ಮುಂಬೈಯ ಆರ್ಥರ್ ರೋಡ್ ಜೈಲಿನಲ್ಲಿ 80 ಮಂದಿಗೆ ಕೊರೋನ ವೈರಸ್ ದೃಢ
ಮುಂಬೈ: ಮುಂಬೈಯ ಆರ್ಥರ್ ರೋಡ್ ಸೆಂಟ್ರಲ್ ಜೈಲಿನಲ್ಲಿ 80 ಜನರಲ್ಲಿ ಕೊರೋನ ವೈರಸ್ ದೃಢಪಟ್ಟಿರುವುದು ಹೊಸ ಆತಂಕವನ್ನು ಸೃಷ್ಟಿಸಿದೆ.
ಈಗಾಗಲೇ 144 ಜನರನ್ನು ಪರೀಕ್ಷಿಸಲಾಗಿದ್ದು, 72 ಕೈದಿಗಳು ಮತ್ತು 7 ಸಿಬ್ಬಂದಿಗಳಲ್ಲಿ ಕೊರೋನ ವೈರಸ್ ಇರುವುದು ದೃಢಪಟ್ಟಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಮೇ 8ರಂದು ಬೆಳಗ್ಗೆ ಪರೀಕ್ಷೆಗೊಳಪಟ್ಟ ಎಲ್ಲಾ ವಿಚಾರಣಾಧೀನ ಕೈದಿಗಳನ್ನು ಜಿಟಿ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಹಿರಿಯ ಜೈಲು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Next Story