Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಚಿವರಿಗೆ ವಿಶಾಲ ಮನೋಭಾವ ಇಲ್ಲದಿರುವುದು...

ಸಚಿವರಿಗೆ ವಿಶಾಲ ಮನೋಭಾವ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ8 May 2020 10:25 PM IST
share
ಸಚಿವರಿಗೆ ವಿಶಾಲ ಮನೋಭಾವ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ 8: ನಾವು ನೀಡುವ ಉತ್ತಮ ಸಲಹೆಗಳನ್ನು ಸ್ವೀಕರಿಸುವ ಬದಲು, ತಮ್ಮ ವಿರುದ್ಧವೇ ದಾಳಿ ನಡೆಸುತ್ತಿರುವ ಸಚಿವರಿಗೆ ವಿಶಾಲ ಮನೋಭಾವ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಶುಕ್ರವಾರ ಲಾಕ್‍ಡೌನ್ ಹಿನ್ನೆಲೆಯಲ್ಲಿ ವೃತ್ತಿ ಆಧಾರಿತ ಸಮುದಾಯಗಳು, ರೈತರು, ಕಾರ್ಮಿಕರು, ಉದ್ದಿಮೆದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆದಿದ್ದ ಕಾಂಗ್ರೆಸ್ ಸೇರಿ ನಾನಾ ಪಕ್ಷಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿದ್ದ ಡಿಕೆಶಿ ಅವರು, ಪ್ರತಿಪಕ್ಷವಾಗಿ ನಾವು ನಮ್ಮ ಕರ್ತವ್ಯ ಮಾಡಬಾರದೆ, ಸರಕಾರದ ಅನ್ಯಾಯ, ಅಕ್ರಮಗಳನ್ನು ನೋಡಿಕೊಂಡು ಸುಮ್ಮನಿರಬೇಕೆ ಎಂದು ಪ್ರಶ್ನಿಸಿದರು.

ನೀವು ಕೂಡ ಪ್ರತಿಪಕ್ಷದಲ್ಲಿ ಇದ್ದಾಗ ಸರಕಾರದ ತಪ್ಪುಗಳನ್ನು ಎತ್ತಿ ಹಿಡಿಯುತ್ತಿದ್ದೀರಿ. ಪ್ರತಿಭಟನೆಯನ್ನೂ ಮಾಡುತ್ತಿದ್ದೀರಿ. ಆದರೆ, ಈಗ ನಾವು ಅದೇ ಕೆಲಸವನ್ನು ಮಾಡಿದರೆ ನಿಮ್ಮ ಸಚಿವರು ನಮ್ಮ ವಿರುದ್ಧವೇ ಮಾತನಾಡುತ್ತಾರೆ. ವಿಶಾಲ ಮನೋಭಾವ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ಅಕ್ಷಯ ಫೌಂಡೇಷನ್ ನೀಡಿದ ಆಹಾರ ಪದಾರ್ಥಗಳ ಮೇಲೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ತಮ್ಮ ಹೆಸರು ಹಾಕಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ. ಬಡವರಿಗೆ ಮತ್ತು ಬಾಣಂತಿಯರಿಗೆ ಸೇರಬೇಕಿದ್ದ ಸಕ್ಕರೆ ಇತರೆ ವಸ್ತುಗಳನ್ನು ಮರು ಪ್ಯಾಕಿಂಗ್ ಮಾಡಿದ ಫೋಟೋ ಇನ್ನಿತರ ದಾಖಲೆಗಳನ್ನು ಡಿಕೆಶಿ ಅವರು ಸಭೆಯಲ್ಲಿ ತೋರಿಸಿ, ಇದನ್ನು ಪ್ರಶ್ನೆ ಮಾಡಬಾರದೆ ಎಂದು ಮುಖ್ಯಮಂತ್ರಿಗಳಿಗೆ ಖಾರವಾಗಿ ಕೇಳಿದರು. ಅಲ್ಲದೆ, ನಮ್ಮ ಸಹಕಾರವನ್ನು ನೀವು ದೌರ್ಬಲ್ಯ ಎಂದು ತಿಳಿದುಕೊಳ್ಳಬೇಡಿ ಎಂದು ತಿಳಿಸಿದರು.

ಹೊಸಕೋಟೆಯಲ್ಲಿ ಮಾಜಿ ಸಚಿವರು ಅಧಿಕಾರಿಗಳನ್ನಿಟ್ಟುಕೊಂಡು ಸಭೆ ನಡೆಸಿದ್ದರೂ ಅವರ ವಿರುದ್ಧ ಯಾವುದೇ ಕಾನೂನಿನ ಕ್ರಮ ಕೈಗೊಳ್ಳದ ಬಗ್ಗೆ ಸಿಎಂ ಅವರ ಗಮನಕ್ಕೆ ತಂದಿದ್ದೇವೆ. ನರೇಗಾ ಕಾರ್ಮಿಕರಿಗೆ ಒಂದು ತಿಂಗಳ ವೇತನ ಉಚಿತವಾಗಿ ನೀಡಲು ಕಾನೂನಿನಲ್ಲಿ ಅವಕಾಶವಿದೆ. ಅಲ್ಲದೆ, ಉದ್ದಿಮೆಗಳ 3 ತಿಂಗಳ ಬಡ್ಡಿ ಮನ್ನಾ ಮಾಡಬೇಕು. ಇದಕ್ಕಾಗಿ 50 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂಬ ಬೇಡಿಕೆ ಇಟ್ಟಿದ್ದೇವೆ.

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X