Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶಾಖಪಟ್ಟಣ ಅನಿಲ ದುರಂತ: ಎಲ್‌ಜಿ...

ವಿಶಾಖಪಟ್ಟಣ ಅನಿಲ ದುರಂತ: ಎಲ್‌ಜಿ ಪಾಲಿಮರ್ಸ್ ಇಂಡಿಯಾಕ್ಕೆ 50 ಕೋ.ರೂ.ದಂಡ ವಿಧಿಸಿದ ಎನ್‌ಜಿಟಿ

ವಾರ್ತಾಭಾರತಿವಾರ್ತಾಭಾರತಿ8 May 2020 11:32 PM IST
share
ವಿಶಾಖಪಟ್ಟಣ ಅನಿಲ ದುರಂತ: ಎಲ್‌ಜಿ ಪಾಲಿಮರ್ಸ್ ಇಂಡಿಯಾಕ್ಕೆ 50 ಕೋ.ರೂ.ದಂಡ ವಿಧಿಸಿದ ಎನ್‌ಜಿಟಿ

ಹೊಸದಿಲ್ಲಿ, ಮೇ 8: ಆಂಧ್ರಪ್ರದೇಶದ ವಿಶಾಖಪಟ್ಟಣ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಅನಿಲ ದುರಂತಕ್ಕೆ ಸಂಬಂಧಿಸಿದಂತೆ ಎಲ್‌ಜಿ ಪಾಲಿಮರ್ಸ್ ಇಂಡಿಯಾಕ್ಕೆ 50 ಕೋ.ರೂ.ಗಳ ಆರಂಭಿಕ ದಂಡವನ್ನು ವಿಧಿಸಿರುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ)ವು ಕಂಪನಿಯ ಜೊತೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ,ಆಂಧ್ರಪ್ರದೇಶ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ,ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ವಿಶಾಖಪಟ್ಟಣ ಜಿಲ್ಲಾಧಿಕಾರಿಗೆ ನೋಟಿಸ್‌ಗಳನ್ನು ಹೊರಡಿಸಿದ್ದು,ಮುಂದಿನ ವಿಚಾರಣಾ ದಿನಾಂಕವಾದ ಮೇ 18ರೊಳಗೆ ಉತ್ತರಿಸುವಂತೆ ನಿರ್ದೇಶ ನೀಡಿದೆ.

ಎಲ್‌ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ತಲಾ 5,000 ಟನ್ ಸಾಮರ್ಥ್ಯದ ಎರಡು ಟ್ಯಾಂಕ್‌ಗಳಲ್ಲಿದ್ದ ಸೈರಿನ್ ಅನಿಲ ಸೋರಿಕೆಗೊಂಡು 11 ಜನರು ಮೃತಪಟ್ಟು,ಸಾವಿರಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದರು.

ಮಾಧ್ಯಮ ವರದಿಗಳ ಆಧಾರದಲ್ಲಿ ಸ್ವಯಂಪ್ರೇರಿತವಾಗಿ ವಿಷಯವನ್ನು ಕೈಗೆತ್ತಿಕೊಂಡಿರುವ ಎನ್‌ಜಿಟಿ ಅಧ್ಯಕ್ಷ ಆದರ್ಶ ಕುಮಾರ ಗೋಯೆಲ್ ನೇತೃತ್ವದ ಪೀಠವು ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ಘಟನೆಯ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದೆ.

ಆಂಧ್ರಪ್ರದೇಶ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ನ್ಯಾ.ಬಿ.ಶೇಷಶಯನ ರೆಡ್ಡಿ, ಆಂಧ್ರ ವಿವಿಯ ಮಾಜಿ ಕುಲಪತಿ ವಿ.ರಾಮಚಂದ್ರ ಮೂರ್ತಿ,ಆಂಧ್ರ ವಿವಿಯ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಪುಲಿಪಾಟಿ ಕಿಂಗ್, ಸಿಪಿಸಿಬಿಯ ಸದಸ್ಯ ಕಾರ್ಯದರ್ಶಿ,ಸಿಎಸ್‌ಐಆರ್-ಐಐಸಿಟಿಯ ನಿರ್ದೇಶಕ ಸಮಿತಿಯ ಸದಸ್ಯರಾಗಿದ್ದಾರೆ. ಮೇ 18ರೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಎನ್‌ಜಿಟಿ ಸಮಿತಿಗೆ ಸೂಚಿಸಿದೆ.

ಮೇಲ್ನೋಟಕ್ಕೆ ಗೋಚರಿಸಿರುವ ಜೀವಹಾನಿ,ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ಆಗಿರುವ ಹಾನಿಯನ್ನು ಪರಿಗಣಿಸಿ ಆರಂಭಿಕ ದಂಡವಾಗಿ 50 ಕೋ.ರೂ.ಗಳನ್ನು ವಿಶಾಖ ಪಟ್ಟಣ ಜಿಲ್ಲಾಧಿಕಾರಿಗಳ ಬಳಿ ಠೇವಣಿಯಿರಿಸುವಂತೆ ಎನ್‌ಜಿಟಿಯು ಎಲ್‌ಜಿ ಪಾಲಿಮರ್ಸ್ ಇಂಡಿಯಾಕ್ಕೆ ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X