ಸಿಇಟಿ-2020 ಅರ್ಜಿ ಸಲ್ಲಿಸಲು ಅಂತಿಮ ಅವಕಾಶ
ಬೆಂಗಳೂರು, ಮೇ 8: ಸಿಇಟಿ-2020ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅನೇಕ ವಿದ್ಯಾರ್ಥಿಗಳು, ಪೋಷಕರು ಅರ್ಜಿ ಸಲ್ಲಿಸಲು ಅವಕಾಶ ನೀಡಲು ಕೋರಿರುವುದರಿಂದ ಕೊನೆಯ ಅವಕಾಶ ನೀಡಲಾಗುವುದು ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.
ಇಲ್ಲಿಯವರೆಗೆ ಸಿಇಟಿ-2020ಕ್ಕೆ ಅರ್ಜಿ ಸಲ್ಲಿಸದೆ ಇರುವ ವಿದ್ಯಾರ್ಥಿಗಳು ಮೇ 8ರ ಸಂಜೆ 6 ರಿಂದ ಮೇ 18ರ ಸಂಜೆ 6ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಶುಲ್ಕವನ್ನು ಪಾವತಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ www.kea.kar.nic.in
ಮಾಹಿತಿ ಬದಲಾವಣೆಗೆ ಸೂಚನೆ: ಸಿಇಟಿ-2020 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಮೇ 20ರಂದು ಸಂಜೆ 6 ರಿಂದ ಮೇ 22ರ ಸಂಜೆ 6ರವರೆಗೆ ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳು ತಾವು ಆನ್ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಅಗತ್ಯವಿದ್ದಲ್ಲಿ ಮಾರ್ಪಡಿಸಿಕೊಳ್ಳಬಹುದಾಗಿದೆ.