ಕೊರೋನ: ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆ

ಮಂಗಳೂರು, ಮೇ 9: ದ.ಕ. ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಕೊರೋನ ವೈರಸ್ ಸೋಂಕು ದೃಢಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ ಒಂದೇ ಕುಟುಂಬದ ಇಬ್ಬರು ಮಹಿಳೆಯರು, ಓರ್ವ ಪುರುಷನಲ್ಲಿ ಇಂದು ಸೋಂಕು ಪತ್ತೆಯಾಗಿದೆ. ಮೇ 1ರಂದು ಕೊರೋನ ಪತ್ತೆಯಾಗಿದ್ದ 69 ವರ್ಷದ 578ನೇ ರೋಗಿಯ ಸಂಪರ್ಕದಿಂದ ಈ ಮೂವರಿಗೆ ಸೋಂಕು ತಗುಲಿರುವುದಾಗಿ ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 15 ಸಕ್ರಿಯ ಸೋಂಕು ಪ್ರಕರಣಗಳಿವೆ.
ದ.ಕ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 31 ಕೊರೋನ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆದರೆ ಈ ಪೈಕಿ 25 ಮಂದಿ ಮಾತ್ರ ದ.ಕ. ಜಿಲ್ಲೆಯ ನಿವಾಸಿಗಳು. ಉಳಿದ ಆರು ಮಂದಿಯಲ್ಲಿ ಕೇರಳದ ನಾಲ್ವರು, ಉಡುಪಿ, ಭಟ್ಕಳದ ತಲಾ ಒಬ್ಬರು ಸೇರಿದ್ದಾರೆ.
Next Story





