Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಬ್ರಿ: ಚೆಕ್‌ಪೋಸ್ಟ್‌ನಲ್ಲಿ ನಿಯಮ...

ಹೆಬ್ರಿ: ಚೆಕ್‌ಪೋಸ್ಟ್‌ನಲ್ಲಿ ನಿಯಮ ಉಲ್ಲಂಘಿಸಿದ ಆರೋಪ; ಬಿಜೆಪಿ ರಾಜ್ಯ ಕಾರ್ಯದರ್ಶಿ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ9 May 2020 2:19 PM IST
share
ಹೆಬ್ರಿ: ಚೆಕ್‌ಪೋಸ್ಟ್‌ನಲ್ಲಿ ನಿಯಮ ಉಲ್ಲಂಘಿಸಿದ ಆರೋಪ; ಬಿಜೆಪಿ ರಾಜ್ಯ ಕಾರ್ಯದರ್ಶಿ ವಿರುದ್ಧ ಪ್ರಕರಣ ದಾಖಲು

ಹೆಬ್ರಿ, ಮೇ 9: ಉಡುಪಿ ಜಿಲ್ಲೆಯ ಗಡಿಭಾಗ ಹೆಬ್ರಿಯ ಸೋಮೇಶ್ವರದಲ್ಲಿ ಹಾಕಲಾದ ಅಂತರ್‌ಜಿಲ್ಲಾ ಚೆಕ್‌ಪೋಸ್ಟ್‌ನಲ್ಲಿ ಜಿಲ್ಲಾಡಳಿತದ ಪಾಸ್ ಪಡೆಯದೆ ಒಳಬರಲು ಯತ್ನಿಸುವ ಮೂಲಕ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಯಾನೆ ಡಾ.ಬಿ.ಆರ್.ಶೆಟ್ಟಿ ಎಂಬವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಿವಾಸಿ, ಮೂಲತಃ ಕುಂದಾಪುರ ತಾಲೂಕಿನ ಬೇಳೂರಿನ ಡಾ.ಬಿ.ಆರ್.ಶೆಟ್ಟಿ ಮೇ 7ರಂದು ರಾತ್ರಿ 11 ಗಂಟೆಗೆ ಕಾರಿನಲ್ಲಿ ಚಾಲಕ ಉದಯ ಎಂಬವರೊಂದಿಗೆ ಶಿವಮೊಗ್ಗದಿಂದ ಆಗುಂಬೆ ಮಾರ್ಗವಾಗಿ ಕುಂದಾಪುರಕ್ಕೆ ತೆರಳುತ್ತಿದ್ದರು.ಈ ಮಧ್ಯೆ ಸೋಮೇಶ್ವರ ಚೆಕ್ ಪೋಸ್ಟ್‌ನಲ್ಲಿ ಜಿಲ್ಲಾಡಳಿತದ ಪಾಸ್ ಇಲ್ಲದ ಕಾರಣ ಅಧಿಕಾರಿಗಳು ಜಿಲ್ಲೆಗೆ ಪ್ರವೇಶ ಮಾಡದಂತೆ ಕಾರನ್ನು ತಡೆಹಿಡಿದರೆನ್ನಲಾಗಿದೆ.

ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ಡಾ.ಬಿ.ಆರ್.ಶೆಟ್ಟಿ, ‘ನಾನು ಯಾರೆಂದು ನಿಮಗೆ ಗೊತ್ತಿಲ್ಲ, ಗೊತ್ತಾದರೆ ನೀವೇ ನನ್ನನ್ನು ಕಳುಹಿಸಿಕೊಡುತ್ತೀರಿ’ ಎಂದು ಬೆದರಿಸಿದರೆನ್ನಲಾಗಿದೆ. ಅಲ್ಲದೆ ಅವರು ಸ್ಥಳದಿಂದಲೇ ಡಿಸಿ ಹಾಗೂ ಎಸ್ಪಿಗೂ ಕರೆ ಮಾಡಿದ್ದರೆಂದು ತಿಳಿದುಬಂದಿದೆ. ಆದರೆ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಬಿ.ಆರ್.ಶೆಟ್ಟಿ ಸ್ಥಳದಲ್ಲಿಯೇ ಠಿಕಾಣಿ ಹೂಡಿ ಪ್ರತಿಭಟನೆ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ಪಾಸ್ ಇಲ್ಲದೆ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಖಡಕ್ ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಬಿ.ಆರ್.ಶೆಟ್ಟಿ ಚೆಕ್‌ಪೋಸ್ಟ್ ಬಳಿಯೇ ಮೇ 8ರ ಸಂಜೆ ನಾಲ್ಕು ಗಂಟೆಯವರೆಗೆ ನಿಂತರು. ಬಳಿಕ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ವ್ಯಕ್ತಿಯ ಮನವೊಲಿಸಿದರು. ಅಲ್ಲದೆ ಮೇಲಾಧಿಕಾರಿಗಳ ಸೂಚನೆಯಂತೆ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಿದರು.

ಆದರೆ ಬಿ.ಆರ್.ಶೆಟ್ಟಿ ಅಲ್ಲಿಂದ ತೆರಳದೆ ಸ್ಥಳದಲ್ಲಿಯೇ ಉಳಿದುಕೊಂಡರು. ಡಿಸಿ ಮತ್ತು ಎಸ್ಪಿ ಸ್ಥಳಕ್ಕೆ ಬಾರದೆ ನಾನು ತೆರಳುವುದಿಲ್ಲ ಎಂದು ಪಟ್ಟುಹಿಡಿದರು. ಸ್ಥಳದಲ್ಲಿ ಸಾಕಷ್ಟು ಮಂದಿ ಸ್ಥಳೀಯರು ಕೂಡ ಜಮಾಯಿಸಿದ್ದರು. ಬಿ.ಆರ್. ಶೆಟ್ಟಿ ತೆರಳದ ಹಿನ್ನೆಲೆಯಲ್ಲಿ ಸ್ಥಳೀಯರು ಅವರಿಗೆ ೇರಾವ್ ಹಾಕಿದರು. ಸಂಜೆ ಸುಮಾರು ಆರು ಗಂಟೆಗೆ ಬಿ.ಆರ್.ಶೆಟ್ಟಿ ತನ್ನ ಕಾರಿನಲ್ಲಿ ಅಲ್ಲಿಂದ ಬೇಳೂರಿಗೆ ಹೊರಟರು ಎಂದು ತಿಳಿದುಬಂದಿದೆ. ಇವರು ಮೇ 7ರಂದು ಬೆಳಗ್ಗೆ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ ಕಾರಿನ ಹಿಂದೆ ಪಾಸ್ ಇಲ್ಲದೆ ಶಿವಮೊಗ್ಗಕ್ಕೆ ತೆರಳಿದ್ದರೆಂದು ಮೂಲಗಳು ತಿಳಿಸಿವೆ.

ಐಪಿಸಿ 269, 34ರಂತೆ ಮೊಕದ್ದಮೆ
ಬೇಳೂರು ರಾಘವೇಂದ್ರ ಜಿಲ್ಲಾಡಳಿತದ ಪಾಸ್ ಪಡೆಯದೆ ನಿಯಮವನ್ನು ಉಲ್ಲಂಘನೆ ಮಾಡಿ ಸೋಮೇಶ್ವರ ಚೆಕ್‌ಪೋಸ್ಟ್ ಬಳಿ ಮೇ 8ರ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ತಿರುಗಾಡಿಕೊಂಡು ಮಾಸ್ಕ್ ಧರಿಸದೇ ಕಾಲಹರಣ ಮಾಡುತ್ತಿದ್ದರು. ಮಾನವ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕು ಹರಡುವ ಸಾಧ್ಯತೆ ಇದೆ ಎಂದು ತಿಳಿಸಿದರೂ ಸಹ ನಿರ್ಲಕ್ಷತನವನ್ನು ತೋರಿ ಸರಕಾರದ ಅದೇಶವನ್ನು ಉಲ್ಲಂಘಿಸಿದ್ದಾರೆ ಎಂದು ರಾಘವೇಂದ್ರ ವಿರುದ್ಧ ಹೆಬ್ರಿ ಪೊಲೀಸ್‌ಠಾಣೆಯಲ್ಲಿ ಕಲಂ: 269, ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X