ತುಮಕೂರಿನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಚಂದ್ರಿಕಾ ವರ್ಗಾವಣೆ
ತುಮಕೂರು, ಮೇ.9: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಚಂದ್ರಿಕಾ ಅವರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ವೈದ್ಯಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಜಿಲ್ಲೆಯಲ್ಲಿ ಕೊರೋನ ವೈರಸ್ ನಿಯಂತ್ರಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರನ್ನು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ನೇತ್ರ ತಜ್ಞರಾಗಿ ನೇಮಕ ಮಾಡಲಾಗಿದೆ.
ಇನ್ನು ತುಮಕೂರಿನ ಜಿಲ್ಲಾ ಆರೋಗ್ಯ ಅಧಿಕಾರಿಯಾಗಿ ತುಮಕೂರು ಜಿಲ್ಲಾ ಆಸ್ಪತ್ರೆಯ ಹಿರಿಯ ತಜ್ಞರಾದ ಡಾ. ಎಂ ಬಿ ನಾಗೇಂದ್ರಪ್ಪ ಅವರನ್ನು ನೇಮಕ ಮಾಡಿದ್ದು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
Next Story