Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಟ್ಕಳ: ಲಾಕ್​ಡೌನ್ ನಿಂದ ಸಂಕಷ್ಟದಲ್ಲಿ...

ಭಟ್ಕಳ: ಲಾಕ್​ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿರುವ ಪ.ಬಂಗಾಳದ ನೂರಕ್ಕೂ ಹೆಚ್ಚು ಮೀನುಗಾರರು

ವಾರ್ತಾಭಾರತಿವಾರ್ತಾಭಾರತಿ9 May 2020 5:25 PM IST
share
ಭಟ್ಕಳ: ಲಾಕ್​ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿರುವ ಪ.ಬಂಗಾಳದ ನೂರಕ್ಕೂ ಹೆಚ್ಚು ಮೀನುಗಾರರು

ಕಾರವಾರ, ಮೇ.9: ಕೋವಿಡ್ -19 ವೈರಸ್ ಹರಡದಂತೆ ಮುಂಜಾಗ್ರತೆ ಕ್ರಮವಾಗಿ ಲಾಕ್ ಡೌನ್ ಘೋಷಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಿಂದ ಭಟ್ಕಳಕ್ಕೆ ದುಡಿಯಲು ಬಂದ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆಯಲ್ಲಿರುವ ಮೀನುಗಾರಿಕೆ ಬಂದರಿನಲ್ಲಿ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಸುಮಾರು ನೂರಕ್ಕೂ ಹೆಚ್ಚು ಮೀನುಗಾರರು ಪರ್ಶಿನ್ ಮತ್ತು ಫಿಶಿಂಗ್ ಬೋಟ್‍ಗಳಲ್ಲಿ ದುಡಿಯುತ್ತಿದ್ದಾರೆ. ಆದರೆ ಲಾಕ್ ಡೌನ್‍ನಿಂದಾಗಿ ಕಳೆದ 46 ದಿನಗಳಿಂದ ಭಟ್ಕಳದಲ್ಲಿ ಮೀನುಗಾರಿಕೆ ಸ್ಥಗಿತಗೊಂಡಿದೆ. ಹೀಗಾಗಿ ಕಾರ್ಮಿಕರು ಅತ್ತ ಊರಿಗೂ ಹೋಗಲಾರದೆ ಇತ್ತ ಮನೆಗೂ ಮರಳಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ. 2,500 ಕಿಲೋ ಮೀಟರ್ ದೂರದಲ್ಲಿ ಮನೆಮಂದಿ ದುಡಿಯುತ್ತಿರುವುದರಿಂದ ಅತ್ತ ಕಾರ್ಮಿಕರ ಕುಟುಂಬದವರೂ ಚಿಂತೆಗೀಡಾಗಿದ್ದಾರೆ.

ಕಾರ್ಮಿಕರ ನಿತ್ಯದ ಊಟೋಪಚಾರಕ್ಕಾಗಿ ಬೋಟ್‍ಗಳ ಮಾಲಕರು, ಸ್ಥಳೀಯರು ದಿನಸಿ ವಸ್ತುಗಳನ್ನು ನೀಡಿದ್ದಾರೆ. ಆದರೆ, ಹಣಕಾಸಿನ ಸ್ಥಿತಿ ಅವರನ್ನು ಬಾಧಿಸುತ್ತಿದೆ. ನಿತ್ಯ ಖರ್ಚಿಗೆ ಅವರು ಪರದಾಡುವಂತಾಗಿದೆ. ಮನೆಯ ಚಿಂತೆಯಲ್ಲಿ ಕಾರ್ಮಿಕರು ದಿನ ದೂಡುತ್ತಿದ್ದಾರೆ. ಹೇಗಾದರೂ ಮಾಡಿ ನಮ್ಮನ್ನು ಊರಿಗೆ ಕಳುಹಿಸುವ ವ್ಯವಸ್ಥೆ ಮಾಡಿ ಎಂದು ಬೋಟ್‍ಗಳ ಮಾಲಕರಲ್ಲಿ ಕಾರ್ಮಿಕರು ಮನವಿ ಮಾಡುತ್ತಿದ್ದಾರೆ.

ನಾವು ಪಶ್ಚಿಮ ಬಂಗಾಳದಿಂದ ಇಲ್ಲಿ ದುಡಿಯಲು ಬಂದಿದ್ದೇವೆ. ಲಾಕ್ ಡೌನ್ ನಿಂದಾಗಿ ನಾವು ಊರಿಗೆ ಹೋಗಲಾರದೆ ತೊಂದರೆಗೆ ಸಿಲುಕಿದ್ದೇವೆ. ಹೇಗಾದರೂ ಮಾಡಿ ನಮ್ಮನ್ನು ಊರಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿ ಎಂದು ಕಾರ್ಮಿಕ ಚಿತ್ತರಂಜನ್ ಅಂಗಲಾಚಿಕೊಂಡರು.

ಬೇರೆ ರಾಜ್ಯ, ಜಿಲ್ಲೆಯಿಂದ ನಾವು ದುಡಿಯಲು ಇಲ್ಲಿಗೆ ಬಂದಿದ್ದೇವೆ. ಲಾಕ್ ಡೌನ್‍ನಿಂದಾಗಿ ನಾವು ತೊಂದರೆಗೆ ಸಿಲುಕಿದ್ದೇವೆ. ನಮ್ಮನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿ ಎಂದು ಕಾರ್ಮಿಕ ಅಜಯ್ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮನವಿ ಮಾಡಿದರು.

"ಕೊರೋನ ಕಾರಣದಿಂದಾಗಿ ಮೀನುಗಾರಿಕೆ ಹಂಗಾಮು ಬಹುತೇಕ ಮುಗಿದಂತಾಗಿದೆ. ಲಾಕ್ ಡೌನ್ ಕಾರಣ ಪಶ್ಚಿಮ ಬಂಗಾಳದ ಕಾರ್ಮಿಕರು ತೊಂದರೆಗೆ ಸಿಲುಕಿದ್ದು ಅವರನ್ನು ಊರಿಗೆ ಮರಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಸರ್ಕಾರ ಈ ನಿಟ್ಟಿನಲ್ಲಿ ಶೀಘ್ರ ಕ್ರಮಕೈಗೊಂಡು ಕಾರ್ಮಿಕರು ಊರಿಗೆ ಮರಳಲು ನೆರವಾಗಬೇಕು" ಎಂದು ಮೀನುಗಾರರ ಯುವ ಮುಖಂಡ ಮಹೇಶ್ ಖಾರ್ವಿ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X