Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೇ 30ರೊಳಗೆ ಆನ್‍ಲೈನ್‍ನಲ್ಲಿ ಪದವಿ...

ಮೇ 30ರೊಳಗೆ ಆನ್‍ಲೈನ್‍ನಲ್ಲಿ ಪದವಿ ಪಠ್ಯಕ್ರಮ ಪೂರ್ಣಗೊಳಿಸಲು ಡಾ.ಅಶ್ವಥ್ ನಾರಾಯಣ ಸೂಚನೆ

"ಪದವಿ ಪರೀಕ್ಷೆ ಬಗ್ಗೆ ಮೇ 17ರ ನಂತರ ತೀರ್ಮಾನ"

ವಾರ್ತಾಭಾರತಿವಾರ್ತಾಭಾರತಿ9 May 2020 9:34 PM IST
share
ಮೇ 30ರೊಳಗೆ ಆನ್‍ಲೈನ್‍ನಲ್ಲಿ ಪದವಿ ಪಠ್ಯಕ್ರಮ ಪೂರ್ಣಗೊಳಿಸಲು ಡಾ.ಅಶ್ವಥ್ ನಾರಾಯಣ ಸೂಚನೆ

ಬೆಂಗಳೂರು, ಮೇ 9: ಕೊವಿಡ್ ಲಾಕ್‍ಡೌನ್‍ನಿಂದ ಪದವಿ ವಿದ್ಯಾರ್ಥಿಗಳ ಶಿಕ್ಷಣ ಮತ್ತಷ್ಟು ವಿಳಂಬವಾಗದಂತೆ ನೋಡಿಕೊಳ್ಳುವ ಸಲುವಾಗಿ ಪದವಿ ತರಗತಿಗಳ ಪಠ್ಯಕ್ರಮವನ್ನು ಆನ್‍ಲೈನ್‍ನಲ್ಲಿ ಮುಂದುವರಿಸಿ, ಮೇ 30ರೊಳಗೆ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ಡಾ.ಅಶ್ವಥ್ ನಾರಾಯಣ, ಪದವಿ ಪರೀಕ್ಷೆಗಳ ಕುರಿತು ಮೇ 17ರ ನಂತರ ಮತ್ತೊಮ್ಮೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎಲ್ಲ ಪ್ರಾಧ್ಯಾಪಕರು ಕಾಲೇಜಿಗೆ ಬಂದು ಆನ್‍ಲೈನ್ ಮೂಲಕ ಪಾಠ ಪ್ರವಚನ ಮಾಡಬೇಕು. ಸರಕಾರಿ ಕಾಲೇಜಿನ ಪ್ರಾಧ್ಯಾಪಕರು ಕಾಲೇಜಿಗೆ ಬರುತ್ತಿದ್ದು, ಖಾಸಗಿ ಕಾಲೇಜಿನವರೂ ಈ ಕ್ರಮ ಪಾಲಿಸಬೇಕು. ಮೇ 30ರೊಳಗೆ ಪ್ರಥಮ, ದ್ವಿತೀಯ ಹಾಗೂ ಅಂತಿಮ ವರ್ಷದ ಪದವಿ ತರಗತಿಗಳ ಪಠ್ಯಕ್ರಮವನ್ನು ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ಏಕರೂಪ ಪಠ್ಯಕ್ರಮ: ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಜಾರಿಗೊಳಿಸಲು ಉದ್ಧೇಶಿಸಿರುವ ಏಕರೂಪದ ಪಠ್ಯಕ್ರಮದ ಬಗ್ಗೆ 15 ದಿನದೊಳಗೆ ವರದಿ ಸಲ್ಲಿಸುವಂತೆ ಡಾ. ಅಶ್ವಥ್ ನಾರಾಯಣ ಸೂಚಿಸಿದ್ದಾರೆ.

ಏಕರೂಪ ಪಠ್ಯಕ್ರಮದ ಸಂಬಂಧ ಈಗಾಗಲೇ ಐದು ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಯು ಉನ್ನತ ಶಿಕ್ಷಣದ ವಿಷನ್‍ಗ್ರೂಪ್ ಅಡಿ ರಚಿಸಿರುವ ಟಾಸ್ಕ್ ಫೋರ್ಸ್ ಜತೆ ಚರ್ಚಿಸಿ ಅಂತಿಮ ವರದಿ ಸಲ್ಲಿಸಬೇಕು. ಅದನ್ನು ಆಧರಿಸಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಡೀನ್‍ಗಳು, ಸಿಂಡಿಕೇಟ್ ಸದಸ್ಯರು, ವಿಷಯತಜ್ಞರು, ಕೈಗಾರಿಕೋದ್ಯಮಿಗಳು, ಅಗತ್ಯಬಿದ್ದಲ್ಲಿ ವಿದೇಶಿ ತಜ್ಞರೊಡನೆ ಚರ್ಚಿಸಿ 'ಏಕರೂಪ ಪಠ್ಯಕ್ರಮ'ದ ರೂಪುರೇಷೆ ಸಿದ್ಧವಾಗಲಿದೆ. ಈ ಪ್ರಕ್ರಿಯೆ ತ್ವರಿತವಾದರೆ ಮುಂದಿನ ವರ್ಷದಿಂದಲೇ ಏಕರೂಪ ಪಠ್ಯಕ್ರಮ ಜಾರಿಗೊಳಿಸಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‍ಕುಮಾರ್, ಬೆಳಗಾವಿ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರಗೌಡ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹಾಗೂ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನೊಳಗೊಂಡ ಸಮಿತಿಯು ಈ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಲಿದೆ. 

ಮೌಲ್ಯಮಾಪನ ವ್ಯವಸ್ಥೆ ಸುಧಾರಣೆ: ಪದವಿ ಶಿಕ್ಷಣದಲ್ಲಿ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಸಂಬಂಧ ಸೋಮವಾರದೊಳಗೆ ಸಮಿತಿ ರಚಿಸಿ, ಆ ಸಮಿತಿ ಮುಂದಿನ 15 ದಿನದೊಳಗೆ ತನ್ನ ವರದಿ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದರು.

ಖಾಸಗಿ ಸೇರಿದಂತೆ ಎಲ್ಲ ವಿಶ್ವವಿದ್ಯಾಲಯದ ಕುಲಪತಿಗಳು, ಉನ್ನತ ಶಿಕ್ಷಣ ಪರಿಷತ್‍ನ ಕಾರ್ಯನಿರ್ವಾಯಹಕ ನಿರ್ದೇಶಕ ಡಾ.ಎಸ್.ಎ.ಕೋರಿ, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ವೀಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದರು.

ಪದವಿ ಪರೀಕ್ಷೆ: ಮೇ 17ರ ನಂತರ ತೀರ್ಮಾನ

ಕೊರೋನ ಲಾಕ್‍ಡೌನ್‍ನಿಂದ ಪದವಿ ಪರೀಕ್ಷೆ ಕುರಿತ ಗೊಂದಲ ನಿವಾರಣೆ ಆಗಿಲ್ಲ. ಮಹಾರಾಷ್ಟ್ರ ಮಾದರಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಮಾಡಬಹುದು ಎಂಬ ಸಲಹೆ ಕೇಳಿಬಂದಿದೆ. ಆದರೆ, ಈ ಬಗ್ಗೆ ಮೇ 17ರ ನಂತರ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

-ಡಾ. ಅಶ್ವಥ್ ನಾರಾಯಣ, ಉನ್ನತ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X