Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ...

ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ: ಜಗದೀಶ್ ಶೆಟ್ಟರ್

ಧಾರವಾಡ: ಕೊರೋನ ನಿಯಂತ್ರಣ ಮತ್ತು ಲಾಕ್ ಡೌನ್ ಸಡಿಲಿಕೆ ಕುರಿತ ಸಭೆ

ವಾರ್ತಾಭಾರತಿವಾರ್ತಾಭಾರತಿ9 May 2020 9:52 PM IST
share
ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ: ಜಗದೀಶ್ ಶೆಟ್ಟರ್

ಧಾರವಾಡ, ಮೇ 9: ಕೊರೋನ ನಿಯಂತ್ರಣಕ್ಕಾಗಿ ಜಾರಿಯಾಗಿರುವ ಲಾಕ್‍ಡೌನ್‍ನಿಂದ ಹುಬ್ಬಳ್ಳಿ ನಗರ ಹೊರತುಪಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿವೆ. ಮೇ 11 ರಿಂದ ಹುಬ್ಬಳ್ಳಿಯ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ವಾಣಿಜ್ಯ, ವಹಿವಾಟುಗಳನ್ನು ನಡೆಸಲು ಅವಕಾಶ ಕಲ್ಪಿಸಲು ಆದೇಶ ಹೊರಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೋನ ನಿಯಂತ್ರಣ ಮತ್ತು ಲಾಕ್ ಡೌನ್ ಸಡಿಲಿಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಗಡಿ ಮತ್ತು ಮುಂಗಟ್ಟುಗಳ ಕಾಯ್ದೆ ಪ್ರಕಾರ ಸ್ಥಾಪನೆಯಾಗಿರುವ ಎಲ್ಲ ಅಗತ್ಯ ವಸ್ತುಗಳ ಪೂರೈಕೆಯ ವಾಣಿಜ್ಯ, ವಹಿವಾಟುಗಳು ಈಗಾಗಲೆ ಜಿಲ್ಲೆಯ ಧಾರವಾಡ, ಕಲಘಟಗಿ, ಅಳ್ನಾವರ, ಕುಂದಗೋಳ, ಅಣ್ಣಿಗೇರಿ ಹಾಗೂ ನವಲಗುಂದ ತಾಲೂಕುಗಳಲ್ಲಿ ಪುನರಾರಂಭವಾಗಿವೆ ಎಂದರು.

ಮೇ 11 ರಿಂದ ಹುಬ್ಬಳ್ಳಿಯ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದ ಎಲ್ಲ ಕಡೆಗಳಲ್ಲೂ ಕಿರಾಣಿ ಅಂಗಡಿ, ಹೊಟೇಲ್‍ಗಳಲ್ಲಿ ಪಾರ್ಸೆಲ್ ಸೇರಿದಂತೆ ವಿವಿಧ ವ್ಯಾಪಾರ ಚಟುವಟಿಕೆಗಳ ಪ್ರಾರಂಭಕ್ಕೆ ವಾರದ ಎಲ್ಲ ದಿನಗಳಲ್ಲಿಯೂ ಅವಕಾಶ ಕಲ್ಪಿಸಿ ಸಮರ್ಪಕ ಆದೇಶ ಹೊರಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಅವರು ಸೂಚಿಸಿದರು.

ಲಾಕ್‍ಡೌನ್ ಸಡಿಲಿಕೆಯ ಈ ಅವಕಾಶವನ್ನು ಜಿಲ್ಲೆಯ ಜನತೆ ಎಚ್ಚರಿಕೆಯಿಂದ ಬಳಸಿಕೊಳ್ಳಬೇಕು. ದೇಶದ ಹಿತಕ್ಕಾಗಿ ಪ್ರಧಾನ ಮಂತ್ರಿ 41 ದಿನಗಳ ಲಾಕ್‍ಡೌನ್ ಜಾರಿಗೊಳಿಸಿದ್ದಾರೆ, ಕೊರೋನ ನಿಯಂತ್ರಣ ಜೊತೆಗೆ ದೇಶದ ಭವಿಷ್ಯ, ಆರ್ಥಿಕ ಸಮತೋಲನ ಕಾಪಾಡಿಕೊಳ್ಳುವ ಹೊಣೆಗಾರಿಕೆಯೂ ಇರುವುದರಿಂದ ಕೇಂದ್ರ ಸರಕಾರದ ಮಾರ್ಗದರ್ಶನದಂತೆ ಲಾಕ್‍ಡೌನ್ ನಿಂದ ಕೆಲವು ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗುತ್ತಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಈ ವಿನಾಯಿತಿಯನ್ನು ಜನತೆ ಮನಬಂದಂತೆ ಬಳಸಬಾರದು. ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು, ಅನಗತ್ಯ ತಿರುಗಾಟಕ್ಕೆ ಸ್ವಯಂ ನಿರ್ಬಂಧ ಹಾಕಿಕೊಳ್ಳಬೇಕು. ಮಾಸ್ಕ್ ಧರಿಸದೇ ಇದ್ದರೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ವಿಧಿಸುವ ಕಾರ್ಯ ಚುರುಕುಗೊಳಿಸಬೇಕು. ಜನತೆ ಸಹಕರಿಸಿದರೆ ಕೊರೋನ ನಿಯಂತ್ರಣ ಸುಲಭ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ದೇಶದಲ್ಲೆಡೆ ಇರುವಂತೆ ಇಲ್ಲಿಯೂ ಮಾಲ್, ಮಾರುಕಟ್ಟೆ ಸಂಕೀರ್ಣಗಳು, ಬಾರ್, ರೆಸ್ಟೊರೆಂಟ್, ಜಿಮ್, ಧಾರ್ಮಿಕ ಚಟುವಟಿಕೆಗಳು, ಸಭೆ, ಸಮಾರಂಭಗಳ ಮೇಲಿನ ನಿಬರ್ಂಧ ಮುಂದುವರಿಯಲಿದೆ. ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಎಲ್ಲ ಖಾಸಗಿ ಮತ್ತು ಸರಕಾರಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನೂ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಶೇ.25 ರಷ್ಟು ಕೈಗಾರಿಕಾ ಚಟುವಟಿಕೆಗಳು ಪುನರಾರಂಭವಾಗಿವೆ. ಸಂಜೆ 7 ಗಂಟೆ ನಂತರ  ಬೆಳಗಿನ 7 ಗಂಟೆಯವರೆಗೆ ಲಾಕ್ ಡೌನ್ ನಿರ್ಬಂಧ ಜಾರಿಯಾಗುವುದರಿಂದ ಈ ಅವಧಿಯಲ್ಲಿ ಕೈಗಾರಿಕೆಗಳು ರಾತ್ರಿ ಪಾಳಿಯ ಕಾರ್ಮಿಕರ ವಿಶ್ರಾಂತಿಗೆ ತಮ್ಮ ಆವರಣದಲ್ಲಿಯೆ ಅವಕಾಶ ಕಲ್ಪಿಸಿ ಉತ್ಪಾದನೆ ಚಟುವಟಿಕೆಗಳನ್ನು ಮುಂದುವರೆಸಲು ಅವಕಾಶ ನೀಡಲಾಗುವುದು. ವಿವಿಧ ಬಡಾವಣೆಗಳಿಗೆ ತರಕಾರಿ ಪೂರೈಕೆ ಮುಂದುವರೆಯಲಿ ಇದರಿಂದ ಜನಸಂದಣಿ ನಿಯಂತ್ರಣವಾಗುತ್ತದೆ ಎಂದು ಅವರು ಹೇಳಿದರು.

ಖಾಸಗಿ ಆಸ್ಪತ್ರೆಗಳು ಸಮರ್ಪಕವಾಗಿ ಸೇವೆ ನೀಡದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಎಸ್‍ಡಿಎಂ ಸೇವೆ ಪ್ರಾರಂಭಿಸಿದೆ. ಈ ಕುರಿತು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆಯವರೊಂದಿಗೆ ಮಾತನಾಡಿದಾಗ ಅವರು ಸರಕಾರದೊಂದಿಗೆ ಎಲ್ಲ ಸಹಕಾರ ನೀಡಲು ಎಸ್‍ಡಿಎಂ ಆಸ್ಪತ್ರೆಗೆ ನಿರ್ದೇಶನ ನೀಡಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಹೊರರಾಜ್ಯಗಳಿಂದ ಬರುವ ಜನರಿಗೆ ಈಗ ಅವಕಾಶ ದೊರೆತಿದೆ. ಎಲ್ಲರನ್ನೂ ಕೃಷಿ ವಿ.ವಿ.ಆವರಣದಲ್ಲಿ ತಪಾಸಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ್, ತಮಿಳುನಾಡು ಹಾಗೂ ದಿಲ್ಲಿ ರಾಜ್ಯಗಳಿಂದ ಬರುವ ಎಲ್ಲರನ್ನೂ ಸರಕಾರಿ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದರು.

ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಶ್ರೀನಿವಾಸ ಮಾನೆ, ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಕಿಮ್ಸ್ ನ ಡಾ.ಲಕ್ಷ್ಮೀಕಾಂತ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮೋಹನ ಭರಮಕ್ಕನವರ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X