ವಲಸೆ ಕಾರ್ಮಿಕರು ತವರಿಗೆ ಹೋಗಲು ತಡೆ ಹಿಡಿದರೆ ಕ್ರಮ ಕೈಗೊಳ್ಳಿ: ಹೈಕೋರ್ಟ್ ಸೂಚನೆ

ಬೆಂಗಳೂರು, ಮೇ 9: ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಹೋಗದಂತೆ ಗುತ್ತಿಗೆದಾರರು ತಡೆ ಹಿಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ವಲಸೆ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್(ಎಐಸಿಸಿಟಿಯು) ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು.
ವಲಸೆ ಕಾರ್ಮಿಕರ ಸ್ಥಿತಿಗೆ ಕಳವಳ ವ್ಯಕ್ತಪಡಿಸಿ, ವಲಸೆ ಕಾರ್ಮಿಕರಿಗೆ ಕಿರುಕುಳವಾಗದಂತೆ ಎಚ್ಚರ ವಹಿಸುವಂತೆ ರಾಜ್ಯ ಸರಕಾರಕ್ಕೆ ನ್ಯಾಯಪೀಠವು ಸೂಚನೆ ನೀಡಿತು.
ಕಾರ್ಮಿಕರಿಗೂ ಇತರ ನಾಗರಿಕರಂತೆ ಬದುಕುವ ಹಕ್ಕಿದೆ. ಇಂತಹ ಸ್ಥಿತಿ ಮರುಕಳಿಸದಂತೆ ಸರಕಾರ ಕ್ರಮ ಕೈಗೊಳ್ಳಬೇಕು. ವಲಸೆ ಕಾರ್ಮಿಕರನ್ನು ಗುತ್ತಿಗೆದಾರರು ತಡೆ ಹಿಡಿದ ಆರೋಪವಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನ್ಯಾಯಪೀಠವು ಸರಕಾರಕ್ಕೆ ಸೂಚನೆ ನೀಡಿತು.
Next Story





