Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನಾ ವೈರಸ್: ಕೇವಲ ತೀವ್ರತರ...

ಕೊರೋನಾ ವೈರಸ್: ಕೇವಲ ತೀವ್ರತರ ಪ್ರಕರಣಗಳನ್ನಷ್ಟೇ ಬಿಡುಗಡೆಗೆ ಮುನ್ನ ಪರೀಕ್ಷಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 May 2020 11:10 PM IST
share
ಕೊರೋನಾ ವೈರಸ್: ಕೇವಲ ತೀವ್ರತರ ಪ್ರಕರಣಗಳನ್ನಷ್ಟೇ ಬಿಡುಗಡೆಗೆ ಮುನ್ನ ಪರೀಕ್ಷಿಸಲು ಸೂಚನೆ

ಹೊಸದಿಲ್ಲಿ: ಕೋವಿಡ್-19 ರೋಗಿಗಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ಪರಿಷ್ಕರಿಸಿದೆ. ಇದರ ಪ್ರಕಾರ ಗಂಭೀರ ಪ್ರಕರಣಗಳನ್ನಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೆ ಮುನ್ನ ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ.

ಎರಡು ಪುಟಗಳ ಪರಿಷ್ಕೃತ ಮಾರ್ಗಸೂಚಿ ತಕ್ಷಣದಿಂದ ಜಾರಿಗೆ ಬಂದಿದೆ. ಈವರೆಗೆ ಇದ್ದ ಮಾರ್ಗಸೂಚಿಯ ಪ್ರಕಾರ, ಸೋಂಕಿತರನ್ನು 14 ಮತ್ತು 21 ದಿನಗಳಲ್ಲಿ ಎರಡು ಬಾರಿ ಪರೀಕ್ಷೆಗೆ ಗುರಿಪಡಿಸಿ, ವರದಿ ನೆಗೆಟಿವ್ ಬಂದಲ್ಲಿ ಮಾತ್ರ ಅವರನ್ನು ಬಿಡುಗಡೆ ಮಾಡಲು ಅವಕಾಶವಿತ್ತು.

ಹೊಸ ಮಾರ್ಗಸೂಚಿಯಲ್ಲಿ ತೀರಾ ಅಲ್ಪ ಪ್ರಮಾಣದ ಸೋಂಕು, ಅಲ್ಪ ಪ್ರಮಾಣದ ಸೋಂಕು, ರೋಗಲಕ್ಷಣ ಪೂರ್ವ ಹಾಗೂ ಮಂದ ಪ್ರಮಾಣದ ಪ್ರಕರಣಗಳಲ್ಲಿ ರೋಗಿಗಳ ಬಿಡುಗಡೆಗೆ ಮುನ್ನ ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲ. ರೋಗಲಕ್ಷಣ ಕಂಡುಬಂದ ಸೋಂಕಿತರಲ್ಲಿ ಮೂರು ದಿನಗಳ ಕಾಲ ಜ್ವರ ಇಲ್ಲದಿದ್ದಲ್ಲಿ 10 ದಿನಗಳ ಬಳಿಕ ಅವರನ್ನು ಬಿಡುಗಡೆ ಮಾಡಬಹುದಾಗಿದೆ ಎಂದು ಗೃಹ ಸಚಿವಾಲಯದ ಹೇಳಿಕೆ ಸ್ಪಷ್ಟಪಡಿಸಿದೆ.

ಆದಾಗ್ಯೂ ಬಿಡುಗಡೆ ಹೊಂದಿದ ರೋಗಿಗಳು ಮುಂದೆ ಏಳು ದಿನಗಳ ಕಾಲ ಮನೆಯಲ್ಲೇ ಪ್ರತ್ಯೇಕವಾಗಿ ವಾಸಿಸಬೇಕು. ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಬಳಿಕ ರೋಗಿಗಳಲ್ಲಿ ಜ್ವರ, ಕಫ ಅಥವಾ ಉಸಿರಾಟದ ತೊಂದರೆ ಕಾಣಿಸಿಕೊಂಡಲ್ಲಿ ತಕ್ಷಣ ಕೋವಿಡ್ ಆರೈಕೆ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ಸೂಚಿಸಲಾಗಿದೆ. ಅಂಥವರ ಆರೋಗ್ಯದ ಮೇಲೆ ಟೆಲೆಕಾನ್ಫರೆನ್ಸ್ ಮೂಲಕ ಮತ್ತೆ 14 ದಿನಗಳ ಕಾಲ ನಿಗಾ ಇಡಲಾಗುತ್ತದೆ.

ಅಂತೆಯೇ ಮಂದ ಪ್ರಕರಣಗಳಲ್ಲಿ, ದೇಹದ ಉಷ್ಣತೆ ಮತ್ತು ಆಮ್ಲಜನಕದ ಶುದ್ಧತ್ವವನ್ನು ಗಮನಿಸಲಾಗುತ್ತದೆ. ಮೂರು ದಿನಗಳ ಒಳಗಾಗಿ ಜ್ವರ ಇಳಿಮುಖವಾದಲ್ಲಿ ಮತ್ತು ರೋಗಿಯಲ್ಲಿ ಆಮ್ಲಜನಕ ಶುದ್ಧತೆ ಪ್ರಮಾಣ ಶೇಕಡ 95 ಇದ್ದಲ್ಲಿ, ಮುಂದಿನ ನಾಲ್ಕು ದಿನಗಳ ಕಾಲ ಕೃತಕ ಉಸಿರಾಟ ಅಗತ್ಯ ಇಲ್ಲ ಎಂದಾದಲ್ಲಿ ರೋಗಲಕ್ಷಣ ಕಾಣಿಸಿಕೊಂಡ 10 ದಿನಗಳ ಬಳಿಕ ಅವರನ್ನು ಬಿಡುಗಡೆ ಮಾಡಬಹುದಾಗಿದೆ. ಆದರೆ ಜ್ವರಕ್ಕೆ ಔಷಧಿ ನೀಡದಿದ್ದರೂ, ಕೊನೆಯ ಮೂರು ದಿನ ಯಾವುದೇ ಜ್ವರ, ಉಸಿರಾಟದ ತೊಂದರೆ ಇರಬಾರದು.

ಪರೀಕ್ಷೆ ಇಲ್ಲದೇ ರೋಗಿಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡುವ ಈ ಪರಿಷ್ಕೃತ ಮಾರ್ಗಸೂಚಿ ಆಪಾಯಕಾರಿ ಎಂದು ಎಐಐಎಂಎಸ್ ಸನಿವಾಸ ವೈದ್ಯರ ಸಂಘದ ಪ್ರಧಾನ ಕಾರ್ಯದಶಿ ಶ್ರೀನಿವಾಸ್ ರಾಜಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇಂಥವರನ್ನು ವಾಪಾಸು ಕಳುಹಿಸುವುದರಿಂದ ಹಲವು ಮಂದಿಗೆ ಆತ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ. ಪರೀಕ್ಷೆಗೆ ಸಾಕಷ್ಟು ಸೌಲಭ್ಯ ಕಲ್ಪಿಸದೇ ಸರ್ಕಾರ 40 ದಿನಗಳಿಂದ ಏನು ಮಾಡುತ್ತಿದೆ? ಪ್ರಸ್ತುತ ಅಂದಾಜಿನಂತೆ ಎರಡು ಲಕ್ಷ ಅಥವಾ ಅಧಿಕ ಮಂದಿಯನ್ನು ಬಲಿಕೊಡಲು ಸರ್ಕಾರ ಸಿದ್ಧವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಏಕ ಪರೀಕ್ಷೆ ಮಾನದಂಡ ತೀವ್ರತರದ ವೈರಸ್ ಸೋಂಕು ಪ್ರಕರಣಗಳಿಗೆ ಮತ್ತು ಪ್ರತಿರೋಧ ಶಕ್ತಿಯ ಸಮಸ್ಯೆ ಇರುವ ಎಚ್‌ಐವಿ ಮತ್ತಿತರ ರೋಗಿಗಳಿಗೂ ಅನ್ವಯಿಸುತ್ತದೆ. ಶನಿವಾರ ಮುಂಜಾನೆ ವೇಳೆಗೆ ದೇಶದ ಒಟ್ಟು ಸೋಂಕಿತರ ಸಂರ್ಖಯೆ 59662 ಆಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X