Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾತೃಪೂರ್ಣ-ಪುಷ್ಠಿ ಯೋಜನೆಗಳಡಿ ಮನೆ...

ಮಾತೃಪೂರ್ಣ-ಪುಷ್ಠಿ ಯೋಜನೆಗಳಡಿ ಮನೆ ಬಾಗಿಲಿಗೆ ಆಹಾರ ಧಾನ್ಯ: 48.29 ಲಕ್ಷ ಫಲಾನುಭವಿಗಳಿಗೆ ಆಹಾರ ಪದಾರ್ಥ ವಿತರಣೆ

ಯುವರಾಜ್ ಮಾಳಗಿಯುವರಾಜ್ ಮಾಳಗಿ9 May 2020 11:45 PM IST
share
ಮಾತೃಪೂರ್ಣ-ಪುಷ್ಠಿ ಯೋಜನೆಗಳಡಿ ಮನೆ ಬಾಗಿಲಿಗೆ ಆಹಾರ ಧಾನ್ಯ: 48.29 ಲಕ್ಷ ಫಲಾನುಭವಿಗಳಿಗೆ ಆಹಾರ ಪದಾರ್ಥ ವಿತರಣೆ

ಬೆಂಗಳೂರು, ಮೇ 9: ಮಾತೃಪೂರ್ಣ, ಪುಷ್ಠಿ ಸೇರಿದಂತೆ ವಿವಿಧ ಯೋಜನೆಗಳಡಿ ರಾಜ್ಯದ 48.29 ಲಕ್ಷ ಫಲಾನುಭವಿಗಳಿಗೆ ಆಹಾರ ಪದಾರ್ಥವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ ಬಾಗಿಲಿಗೆ ತಲುಪಿಸಿದೆ.

ಕೊರೋನ ವೈರಸ್ ಭೀತಿ ಹಿನ್ನೆಲೆ ಲಾಕ್‍ಡೌನ್ ಘೋಷಿಸಲಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಇಲಾಖೆಯಿಂದ ಮನೆ ಬಾಗಿಲಿಗೆ ಆಹಾರ ಪದಾರ್ಥಗಳ ಕಿಟ್‍ಅನ್ನು ವಿತರಿಸಲಾಗಿದೆ.

6 ತಿಂಗಳಿಂದ 3 ವರ್ಷದ 22.59 ಲಕ್ಷ ಮಕ್ಕಳು, 3 ವರ್ಷದಿಂದ 6 ವರ್ಷದ 16.04 ಲಕ್ಷ ಮಕ್ಕಳು, 4.19 ಲಕ್ಷ ಗರ್ಭಿಣಿಯರು, 4.02 ಲಕ್ಷ ಬಾಣಂತಿಯರು, 1.28 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸೇರಿ ಒಟ್ಟಾರೆ 48 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಆಹಾರ ಪದಾರ್ಥ ಒಳಗೊಂಡ ಕಿಟ್ ವಿತರಿಸಲಾಗಿದೆ.

ಕಿಟ್‍ನಲ್ಲಿ ಏನಿರುತ್ತದೆ?: ಅಂಗನವಾಡಿ ಮಕ್ಕಳಿಗೆ 15 ದಿನಕ್ಕೆ ಆಗುವಷ್ಟು ಆಹಾರಧಾನ್ಯ ಇರುವ ಕಿಟ್‍ನಲ್ಲಿ 4 ಮೊಟ್ಟೆ, 150 ಗ್ರಾಂ ಹಾಲಿನ ಪುಡಿ, 1.5 ಕೆ.ಜಿ. ಅಕ್ಕಿ, 600 ಗ್ರಾಂ ಬೇಳೆ, 100 ಗ್ರಾಂ ಪಾಕಿಟ್‍ನ ಹೆಸರುಕಾಳು ಸೇರಿದಂತೆ ವಿವಿಧ ಪೌಷ್ಠಿಕ ಆಹಾರ ಹೊಂದಿರಲಿದೆ. 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳಿಗೂ ಆಹಾರ ಪದಾರ್ಥ ಕಿಟ್ ನೀಡಲಿದ್ದು, ಅದರಲ್ಲಿ ಹಾಲಿನ ಪುಡಿ, ಪೌಷ್ಟಿಕಾಂಶ ಮತ್ತು ಕಬ್ಬಿಣಾಂಶ ಹೊಂದಿರುವ ಕಾಳುಗಳು ಇರಲಿವೆ. ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಅಕ್ಕಿ, ಬೇಳೆ, ಶೇಂಗಾ, ಒಣಮೆಣಸಿನಕಾಯಿ ಪುಡಿ ಸೇರಿ ಇನ್ನಿತರೆ ಪದಾರ್ಥಗಳಿರಲಿವೆ.

ಎಷ್ಟು ದಿನದವರೆಗೆ ಕಿಟ್ ವಿತರಣೆ?: ಲಾಕ್‍ಡೌನ್ ಘೋಷಣೆ ಎಲ್ಲಿಯವರೆಗೆ ಇರಲಿದೆ ಅಲ್ಲಿಯವರೆಗೂ ಆಹಾರ ಪದಾರ್ಥಗಳನ್ನು ನೀಡಲಾಗುತ್ತದೆ. ಪ್ರಸ್ತುತ ಮೇ 17ರವರೆಗೆ ವಿತರಿಸಲಾಗುತ್ತಿದ್ದು, ಒಂದು ವೇಳೆ ಲಾಕ್‍ಡೌನ್ ಮುಂದುವರಿದರೆ ಮುಂದಿನ ದಿನಗಳಲ್ಲಿಯೂ ಯೋಜನೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

60 ದಿನಕ್ಕೆ ಆಗುವಷ್ಟು ಆಹಾರ ಪದಾರ್ಥ ವಿತರಣೆ: ಲಾಕ್‍ಡೌನ್ ಘೋಷಣೆ ಆದ ದಿನದಿಂದ ಇಲ್ಲಿಯವರೆಗೆ ಆಹಾರ ಪದಾರ್ಥ ಕಿಟ್ ವಿತರಿಸಲಾಗಿದೆ. ಈವರಗೆ 40 ದಿನಕ್ಕಾಗುವಷ್ಟು ಆಹಾರಧಾನ್ಯ ವಿತರಿಸಲಾಗಿದ್ದು, ಇನ್ನೂ 20 ದಿನಕ್ಕಾಗುವಷ್ಟು ಪದಾರ್ಥ ವಿತರಿಸಲಿದ್ದಾರೆ. ಒಟ್ಟಾರೆ 60 ದಿನಕ್ಕಾಗುವಷ್ಟು ಪದಾರ್ಥ ವಿತರಣೆಯಾಗಲಿದೆ. ಇದಕ್ಕೂ ಒಂದು ಮಾನದಂಡವಿದೆ. ಪ್ರತಿದಿನ ಬಾಣಂತಿಯರಿಗೆ ಮಾತೃಪೂರ್ಣ ಯೋಜನೆಯಡಿ 21 ರೂ. ಆಹಾರ ವೆಚ್ಚವಾಗಲಿದ್ದು ಈ ಮೊತ್ತದಲ್ಲಿ ಆಹಾರಧಾನ್ಯ ವಿತರಿಸಲಿದ್ದಾರೆ.

ಅಪೌಷ್ಟಿಕತೆ ನಿವಾರಣೆಗಾಗಿ ಮಕ್ಕಳಿಗೆ ಮೊಟ್ಟೆ, ಕಾಳು: ಪ್ರತಿದಿನ ಮಕ್ಕಳನ್ನು ಅಂಗನವಾಡಿಗೆ ಕರೆದುಕೊಂಡು ಬಂದು ಮಕ್ಕಳಿಗೆ ಕಥೆಗಳು ಹೇಳಲಿದ್ದಾರೆ. ಮಧ್ಯಾಹ್ನ ಹಾಲು ಮತ್ತು ಬಿಸಿಯೂಟ ನೀಡುತ್ತಾರೆ. ಆದರೆ, ಲಾಕ್‍ಡೌನ್‍ನಿಂದಾಗಿ ಅಂಗನವಾಡಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಇದೇ ವೆಚ್ಚದಲ್ಲಿ ಮೊಟ್ಟೆ, ಹಾಲಿನ ಪುಡಿ ಸೇರಿದಂತೆ ಇತರೆ ಪದಾರ್ಥ ವಿತರಿಸಲಿದ್ದಾರೆ.

ಎಷ್ಟು ಮತ್ತು ಯಾರು ಫಲಾನುಭವಿಗಳು ?

* 6 ತಿಂಗಳಿಂದ 3 ವರ್ಷದ ಮಕ್ಕಳು- 22.59 ಲಕ್ಷ.

* 3 ವರ್ಷದಿಂದ 6 ವರ್ಷದ ಮಕ್ಕಳು- 16.04 ಲಕ್ಷ.

* ಗರ್ಭಿಣಿಯರು- 4.19 ಲಕ್ಷ.

* ಬಾಣಂತಿಯರು- 4.02 ಲಕ್ಷ.

* ಅಂಗನವಾಡಿಕಾರ್ಯಕರ್ತೆಯರು ಹಾಗೂ ಸಹಾಯಕಿಯರು- 1.28 ಲಕ್ಷ.

* ಇತರೆ- 17 ಸಾವಿರ.

ಮಹಿಳೆಯರು ಮತ್ತು ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಇಲಾಖೆಯು ಫಲಾನುಭವಿಗಳ ಮನೆ ಮನೆಗೆ ಆಹಾರಧಾನ್ಯ ವಿತರಿಸಲು ಆರಂಭಿಸಿದ್ದು, ಸುಮಾರು 48 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಕಿಟ್ ವಿತರಿಸಿದ್ದಾರೆ. ಈ ಮೂಲಕ ಅತ್ಯುತ್ತಮ ಕಾರ್ಯಕ್ಕೆ ಕಾರ್ಯಕರ್ತೆಯರು ಸಾಕ್ಷಿಯಾಗಿದ್ದಾರೆ.

-ಕೆ.ಎ. ದಯಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ನಿರ್ದೇಶಕ

share
ಯುವರಾಜ್ ಮಾಳಗಿ
ಯುವರಾಜ್ ಮಾಳಗಿ
Next Story
X