ಮದ್ಯ ಮಾರಾಟಕ್ಕೆ ಯತ್ನಿಸುತ್ತಿರುವ ತಮಿಳುನಾಡು ಸರಕಾರದ ವಿರುದ್ಧ ರಜನೀಕಾಂತ್ ವಾಗ್ದಾಳಿ

ಚೆನ್ನೈ, ಮೇ 10: ಕೊರೋನ ವೈರಸ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಮದ್ರಾಸ್ ಹೈಕೋರ್ಟ್ ಕೇವಲ ಆನ್‌ಲೈನ್‌ನಲ್ಲಿ ಮಾತ್ರ ಮದ್ಯ ಮಾರಾಟ ಮಾಡಲು ತಮಿಳುನಾಡು ಸರಕಾರಕ್ಕೆ ಅನುವು ಮಾಡಿಕೊಟ್ಟಿತ್ತು. ಹೈಕೋರ್ಟ್ ಆದೇಶಕ್ಕೆ ತಕ್ಷಣವೇ ತಡೆ ಹೇರಬೇಕೆಂದು ಕೋರಿ ರಾಜ್ಯ ಸರಕಾರ ಶನಿವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಎಐಎಡಿಎಂಕೆಯ ಈ ನಡೆಯನ್ನು ಸೂಪರ್‌ಸ್ಟಾರ್ ರಜನೀಕಾಂತ್ ತೀವ್ರವಾಗಿ ಟೀಕಿಸಿ ವಾಗ್ದಾಳಿ ನಡೆಸಿದರು.
ಈ ಸಮಯದಲ್ಲಿ ರಾಜ್ಯ ಸರಕಾರ ಮದ್ಯದ ಅಂಗಡಿಗಳನ್ನು ತೆರೆದರೆ,ಮತ್ತೊಮ್ಮೆ ಅಧಿಕಾರಕ್ಕೆ ಬರುವ ಕನಸನ್ನು ಮರೆಯಬೇಕಾಗುತ್ತದೆ ಎಂದು 69ರ ಹರೆಯದ ರಜನೀಕಾಂತ್ ರವಿವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮದ್ಯದ ಅಂಗಡಿಗಳನ್ನು ತೆರೆಯುವ ರಾಜ್ಯ ಸರಕಾರದ ನಡೆಯನ್ನು ಟೀಕಿಸುತ್ತಿದ್ದ ನಟ-ರಾಜಕಾರಣಿ ಕಮಲಹಾಸನ್ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್‌ರೊಂದಿಗೆ ರಜನಿ ಧ್ವನಿಗೂಡಿಸಿದರು.
Next Story





