Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಲಸೆ ಕಾರ್ಮಿಕರಿಗೆ ಸೂಕ್ತ ಸಾರಿಗೆ...

ವಲಸೆ ಕಾರ್ಮಿಕರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ10 May 2020 8:15 PM IST
share
ವಲಸೆ ಕಾರ್ಮಿಕರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಮೇ 10: ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಅನುಕೂಲವಾಗುವಂತೆ ಸೂಕ್ತ ಬಸ್ ಹಾಗೂ ರೈಲು ವ್ಯವಸ್ಥೆ ಮಾಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಲೌಕ್‍ಡೌನ್ ಜಾರಿಯಾದ ಬಳಿಕ ತಮ್ಮ ಊರುಗಳಿಗೆ ಹೋಗಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರವು ಕಾರ್ಮಿಕರನ್ನು ಮಾನವೀಯವಾಗಿ ನಡೆಸಿಕೊಳ್ಳುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಲಸೆ ಕಾರ್ಮಿಕರು ಅನ್ನ, ಆಹಾರ ಇಲ್ಲದೆ ಹೆಣಗಾಡುತ್ತಿದ್ದಾರೆ. ಸರಕಾರಗಳು ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸದ ಪರಿಣಾಮವಾಗಿ ಊರುಗಳಿಗೆ ನಡೆದು ಹೋಗುವ ಮಾರ್ಗದಲ್ಲಿ ಸುಸ್ತಾಗಿ ರೈಲು ಹಳಿಗಳ ಮೇಲೆ ಮಲಗಿ ಕೆಲವು ಕಾರ್ಮಿಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಹಲವೆಡೆ ಹಸಿವಿನಿಂದ ಸತ್ತಿರುವ ಉದಾಹರಣೆಗಳು ನಮ್ಮ ಕಣ್ಣು ಮುಂದೆ ಇವೆ ಎಂದು ಅವರು ತಿಳಿಸಿದ್ದಾರೆ.

ಪ್ರತಿದಿನ ವಲಸೆ ಕಾರ್ಮಿಕರ ಸಾವು ನೋವುಗಳು ಕಾಣುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮನಸ್ಸು ಕರಗಿದಂತೆ ಕಾಣುತ್ತಿಲ್ಲ. ಹೀಗಾಗಿ ವಿರೋಧ ಪಕ್ಷದ ನಾಯಕನಾಗಿ ನಾನು ಹೇಳುವುದೇನೆಂದರೆ, ಕೂಡಲೇ ರಾಜ್ಯದಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಹಾಗೂ ಹೊರ ರಾಜ್ಯಗಳಲ್ಲಿರುವ ಕನ್ನಡಿಗರನ್ನು ಇಲ್ಲಿಗೆ ಕರೆತರಲು ಸೂಕ್ತವಾದ ಸಾರಿಗೆ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಈಗಾಗಲೇ ಕೇಂದ್ರ ಸರಕಾರ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಶೇ.85ರಷ್ಟು ಭರಿಸುವುದಾಗಿ ಹೇಳಿದೆ. ಉಳಿದ ವೆಚ್ಚವನ್ನು ರಾಜ್ಯ ಸರಕಾರ ಭರಿಸುವ ಮೂಲಕ ಕಾರ್ಮಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು. ಇದಕ್ಕಾಗಿ ಮಾಡುವ ವೆಚ್ಚ ಸರಕಾರಕ್ಕೆ ಹೊರೆಯಾಗುವುದಿಲ್ಲ. ಈ ಸಂಬಂಧ ಬೆಂಗಳೂರಿನಿಂದ ಹೋಗುವ ಕಾರ್ಮಿಕರಿಗೆ ಅಕ್ಕಪಕ್ಕದ ಜಿಲ್ಲೆಗಳ ರೈಲ್ವೆ ನಿಲ್ದಾಣಕ್ಕೆ ಹೋಗಲು ಸೂಕ್ತ ಬಸ್ ವ್ಯವಸ್ಥೆ ಮಾಡಬೇಕು. ಹಾಗೂ ಆ ಕಾರ್ಮಿಕರು ಸುರಕ್ಷಿತವಾಗಿ ತಮ್ಮ ಊರುಗಳಿಗೆ ತಲುಪುವವರೆಗೆ ಊಟದ ವ್ಯವಸ್ಥೆ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಿಂದ ಹೊರ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಿಸಲಿ. ಕಾರ್ಮಿಕರನ್ನು ಸೇವಾಸಿಂಧುಗೆ ಎನ್‍ರೋಲ್ ಮಾಡಿಸುವ ಪಾಲಿಕೆಯ ವಾರ್ಡ್ ಕಚೇರಿ, ಪೊಲೀಸ್ ಠಾಣೆಗಳಲ್ಲಿ ಕೌಂಟರ್ ಗಳನ್ನು ತೆರೆಯಲಿ. ಯಾವ ರಾಜ್ಯಕ್ಕೆ ಹೋಗಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುವ ವ್ಯವಸ್ಥೆಯಾಗಲಿ.

-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X