Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊರರಾಜ್ಯದ 2,280 ವಲಸೆ ಕಾರ್ಮಿಕರು...

ಹೊರರಾಜ್ಯದ 2,280 ವಲಸೆ ಕಾರ್ಮಿಕರು ವಿಶೇಷ ರೈಲಿನಲ್ಲಿ ಹುಟ್ಟೂರಿಗೆ ಪ್ರಯಾಣ

ವಾರ್ತಾಭಾರತಿವಾರ್ತಾಭಾರತಿ10 May 2020 9:52 PM IST
share

ಮಂಗಳೂರು, ಮೇ 10: ಕೊರೋನ-ಲಾಕ್‌ಡೌನ್‌ನಿಂದಾಗಿ ಕಳೆದ ಒಂದುವರೆ ತಿಂಗಳಿನಿಂದ ಅತಂತ್ರ ಸ್ಥಿತಿಯಲ್ಲಿ ದ.ಕ.ಜಿಲ್ಲೆಯಲ್ಲೇ ಬಾಕಿಯಾಗಿದ್ದ ವಲಸೆ ಕಾರ್ಮಿಕರನ್ನು ತವರೂರಿಗೆ ಕಳುಹಿಸಿಕೊಡುವ ಪ್ರಕ್ರಿಯೆ ರವಿವಾರವೂ ನಡೆದಿದೆ. ಸೇವಾ ಸಿಂಧು ಆ್ಯಪ್ ಮೂಲಕ ನೋಂದಣಿ ಮಾಡಿಕೊಂಡ 1200ಕ್ಕೂ ಅಧಿಕ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರು ಶನಿವಾರ ಮಂಗಳೂರಿನಿಂದ ಹೊರಟಿದ್ದರೆ, ರವಿವಾರ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಕ್ಕೆ ಸೇರಿದ ತಲಾ 1,140 ಮಂದಿ ವಲಸೆ ಕಾರ್ಮಿಕರು ನಗರದ ಕಂಕನಾಡಿ ಜಂಕ್ಷನ್ ರೈಲ್ವೆ ನಿಲ್ದಾಣದಿಂದ ಎರಡು ವಿಶೇಷ ರೈಲಿನಲ್ಲಿ ಹುಟ್ಟೂರಿಗೆ ಪ್ರಯಾಣ ಬೆಳೆಸಿದರು.

ನಗರದ ವಿವಿಧ ಕಡೆಗಳಿಂದ ರವಿವಾರ ಬೆಳಗ್ಗೆ ವಲಸೆ ಕಾರ್ಮಿಕರು ಗುಂಪಾಗಿ ನಗರದ ಸ್ಟೇಟ್‌ಬ್ಯಾಂಕ್, ಸೆಂಟ್ರಲ್ ರೈಲ್ವೆ ಸ್ಟೇಶನ್, ಹಂಪನಕಟ್ಟೆ ಪ್ರದೇಶಕ್ಕೆ ಆಗಮಿಸಿದರು. ಆದರೆ ಎಲ್ಲಿಂದ, ಎಷ್ಟು ಹೊತ್ತಿಗೆ ರೈಲು ಎಂಬ ಮಾಹಿತಿ ಇರಲಿಲ್ಲ. ತೊಕ್ಕೊಟ್ಟು, ತಲಪಾಡಿ ಹಾಗೂ ಉಳ್ಳಾಲ ಭಾಗದಿಂದಲೂ ವಲಸೆ ಕಾರ್ಮಿಕರು ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ಮಧ್ಯೆ ಸುರಕ್ಷಿತ ಅಂತರ ಕಾಪಾಡದ ಹಿನ್ನೆಲೆಯಲ್ಲಿ ಪೊಲೀಸರು ಕೆಲವು ವಲಸೆ ಕಾರ್ಮಿಕರತ್ತ ಲಾಠಿ ಬೀಸಿದರು ಎಂಬ ದೂರು ಕೇಳಿ ಬಂದಿದೆ.

ಉತ್ತರ ಪ್ರದೇಶದ ಹರ್ದೋಯಿಗೆ ಸೇರಿದ ಈ ವಲಸೆ ಕಾರ್ಮಿಕರು ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ನಗರದಲ್ಲಿ ಜಮಾಯಿಸಿದ್ದರು. ಇವರಲ್ಲಿ ಹೆಚ್ಚಿನವರು ತೊಕ್ಕೊಟ್ಟು ಸಮೀಪದ ಕೆ.ಸಿ.ರೋಡ್, ತಲಪಾಡಿ, ಉಳ್ಳಾಲ ಭಾಗದಿಂದ ಆಟೋ ರಿಕ್ಷಾಕ್ಕೆ 300-400 ರೂ. ಪಾವತಿಸಿ ಬಂದಿದ್ದರು ಎನ್ನಲಾಗಿದೆ. ಈ ವಲಸೆ ಕಾರ್ಮಿಕರಲ್ಲಿ ಶೇ. 10ರಷ್ಟು ಮಹಿಳೆಯರು ಕೂಡ ಇದ್ದರು.

ಉತ್ತರ ಪ್ರದೇಶದ ಕಾರ್ಮಿಕರನ್ನು ಜಿಲ್ಲೆಯ ಬೇರೆ ಬೇರ ಕಡೆಯಿಂದ ರೈಲು ನಿಲ್ದಾಣಕ್ಕೆ ಕರೆತರಲು ಬರಲು 23 ಬಸ್ಸುಗಳ ವ್ಯವಸ್ಥೆ ಮಾಡಲಾ ಗಿತ್ತು. ಪ್ರತೀ ಬಸ್ಸಿಗೆ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯನ್ನು ಮೇಲ್ವಿಚಾರಕರಾಗಿ ನೇಮಿಸಿ, ಅವರಿಗೆ ಒಬ್ಬರು ಗ್ರಾಮಕರಣಿಕರು ಹಾಗೂ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿತ್ತು.

ಬಸ್ಸು ಹತ್ತುವ ಮೊದಲೇ ಅವರ ಎಲ್ಲಾ ವಿವರ ಸಂಗ್ರಹಿಸಿ, ನಂತರ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಇದಕ್ಕಾಗಿ ಸುಸಜ್ಜಿತ ಆರೋಗ್ಯ ತಂಡವನ್ನು ನಿಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಮೇಲ್ವಿಚಾರಣೆಯಲ್ಲಿ ನಡೆದ ಈ ಸಂಚಾರ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳು ರವಿವಾರ ಬೆಳಗ್ಗೆ 7 ಗಂಟೆಯಿಂದಲೇ ಕರ್ತವ್ಯದಲ್ಲಿ ತೊಡಗಿದ್ದರು.

ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಸೇರಿದ ತಲಾ 1,140 ಮಂದಿ ವಲಸೆ ಕಾರ್ಮಿಕರನ್ನು ರವಿವಾರ ಮಂಗಳೂರು (ಕಂಕನಾಡಿ) ಜಂಕ್ಷನ್ ರೈಲ್ವೆ ನಿಲ್ದಾಣದಿಂದ ವಿಶೇಷ ರೈಲಿನಲ್ಲಿ ಕಳುಹಿಸಿ ಕೊಡಲಾಗಿದೆ ಎಂದು ಕಾರ್ಮಿಕ ಇಲಾಖೆಯ ಆಯುಕ್ತ ನಾಗರಾಜ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X