Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಲಸೆ ಕಾರ್ಮಿಕರ ಪ್ರಯಾಣದಲ್ಲಿ ನಿಯಮಗಳ...

ವಲಸೆ ಕಾರ್ಮಿಕರ ಪ್ರಯಾಣದಲ್ಲಿ ನಿಯಮಗಳ ಉಲ್ಲಂಘನೆ : ಡಿವೈಎಫ್‌ಐ ಆರೋಪ

ವಾರ್ತಾಭಾರತಿವಾರ್ತಾಭಾರತಿ10 May 2020 9:54 PM IST
share

ಮಂಗಳೂರು, ಮೇ 10: ವಲಸೆ ಕಾರ್ಮಿಕರನ್ನು ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ತಲುಪಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲಿ ಕಲ್ಪಿಸಲಾದ ಪ್ರಯಾಣ ವ್ಯವಸ್ಥೆಯಲ್ಲಿ ಕೊರೋನ ವೈರಸ್ ತಡೆಯುವ ಸಲುವಾಗಿ ಅಳವಡಿಸಿಕೊಳ್ಳಲಾದ ಸೇವಾ ಸಿಂಧು ನಿಯಮವನ್ನು ಉಲ್ಲಂಘಿಸಲಾಗಿದೆ. ಇದು ಕೊರೋನ ವೈರಸ್ ನಿಯಂತ್ರಣದ ಕ್ರಮಗಳ ಮೇಲೆ ಹಾನಿ ಉಂಟು ಮಾಡುತ್ತದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಹೊರ ರಾಜ್ಯಗಳಿಗೆ ತೆರಳುವ ಕಾರ್ಮಿಕರು ಸೇವಾ ಸಿಂಧುವಿನಲ್ಲಿ ಹೆಸರು ನೊಂದಾಯಿಸಿಕೊಳ್ಳುವುದು ಕಡ್ಡಾಯ. ಇದು ಆಯಾಯ ರಾಜ್ಯ ಗಳನ್ನು ಪ್ರವೇಶಿಸುವ ಕಾರ್ಮಿಕರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಸ್ಥಳೀಯ ಆಡಳಿತಗಳಿಗೆ ನಿಖರವಾದ ಮಾಹಿತಿಯನ್ನು ಒದಗಿಸುತ್ತದೆ. ಈ ರೀತಿ ನೋಂದಣಿಗೊಂಡ ಕಾರ್ಮಿಕರನ್ನು ಆನ್‌ಲೈನ್ ಸರದಿಯಲ್ಲಿ ತವರು ರಾಜ್ಯಗಳಿಗೆ ಕಳುಹಿಸಿ ಕೊಡಲಾಗುತ್ತದೆ. ಆದರೆ ಸತತ 2 ದಿನ ಮಂಗಳೂರಿನಿಂದ ಜಾರ್ಖಂಡ್ ಹಾಗೂ ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಹೊರಟ ರೈಲು ಪ್ರಯಾಣದಲ್ಲಿ ಈ ನಿಯಮಗಳನ್ನು ಪೂರ್ಣವಾಗಿ ಉಲ್ಲಂಘಿಸಲಾಗಿದೆ. ಸೇವಾ ಸಿಂಧುವಿನಲ್ಲಿ ಹೆಸರು ನೊಂದಾಯಿಸಲ್ಪಟ್ಟ ಸರದಿಗಳನ್ನು ಕಡೆಗಣಿಸಿ ಪ್ರದೇಶಗಳಲ್ಲಿ ಇರುವ ಕಾರ್ಮಿಕ ವಸತಿಯ ಗುಂಪುಗಳನ್ನು ಕರೊದೊಯ್ಯಲಾಗಿದೆ ಎಂದು ಆರೋಪಿಸಿದ್ದಾರೆ.

ಬಿಹಾರಕ್ಕೆ ತೆರಳಬೇಕಾದ ನಗರದ ಹಲವು ಕಡೆಗಳ ಕಾರ್ಮಿಕರು ಸೇವಾ ಸಿಂಧುವಿನಲ್ಲಿ ಹೆಸರು ನೋಂದಾಯಿಸಿ ರವಿವಾರ ಹೊರಡಲಿರುವ ರೈಲಿನಲ್ಲಿ ಪ್ರಯಾಣಕ್ಕಾಗಿ ಕಾಯುತ್ತಿದ್ದರು. ಆದರೆ ಜಿಲ್ಲಾಡಳಿತ ಎಂಆರ್‌ಪಿಎಲ್ ಒತ್ತಾಯಕ್ಕೆ ಮಣಿದು ಜೋಕಟ್ಟೆ ಸುತ್ತಮುತ್ತಲಿದ್ದ ಬಿಹಾರ ಮೂಲದ ಕಾರ್ಮಿಕರನ್ನು ಮಾತ್ರ ತಲಾ ಸಾವಿರದ ಮುನ್ನೂರು ರೂ. ಶುಲ್ಕ ಪಡೆದು, ಸುರಕ್ಷಿತ ಅಂತರ ಪಾಲಿಸದೆ ಬಸ್ಸುಗಳಲ್ಲಿ ತುಂಬಿಸಿ ಕೊಂಡು ರೈಲು ನಿಲ್ದಾಣಕ್ಕೆ ಸಾಗಿಸಿದೆ. ಈ ಸಂದರ್ಭ ಸರಿಯಾದ ರೀತಿಯ ಆರೋಗ್ಯ ತಪಾಸಣೆ ನಡೆಸಲಾಗಿಲ್ಲ, ಆಹಾರಗಳನ್ನು ಒದಗಿಸಿಲ್ಲ, ಪೊಲೀಸ್ ಇಲಾಖೆ ಹೊರತುಪಡಿಸಿ ಸಂಬಂಧ ಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿರಲಿಲ್ಲ. ಈ ರೀತಿಯ ಸಾಗಾಟದಿಂದ ಆಯಾಯ ರಾಜ್ಯಗಳಿಗೆ, ರಾಜ್ಯದೊಳಗಡೆ ಪ್ರವೇಶಿಸಿದ ವ್ಯಕ್ತಿಗಳ ನಿಖರ ಮಾಹಿತಿ ದೊರಕದೆ ನಿಗಾ ಇಡುವುದು, ಕ್ವಾರಂಟೈನ್ ಮಾಡುವುದು ಕಷ್ಟಕರವಾಗಲಿದೆ. ಇದು ಕೊರೋನ ಸೋಂಕು ನಿಯಂತ್ರಣ ಕ್ರಮಗಳಿಗೂ ಹಾನಿ ಉಂಟುಮಾಡಲಿದೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ರಾಜ್ಯ ಸರಕಾರ ತಕ್ಷಣ ಇಂತಹ ಲೋಪಗಳತ್ತ ಗಮನ ಹರಿಸಬೇಕು. ಕಾರ್ಮಿಕರಿಂದ ದುಬಾರಿ ಶುಲ್ಕ ಸಂಗ್ರಹ ಮಾಡುವುದನ್ನು ಕೈ ಬಿಟ್ಟು ಕೇಂದ್ರ ಸರಕಾರವೇ ಪ್ರಯಾಣ ವೆಚ್ಚ ಭರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X