ಲಾಕ್ ಡೌನ್ ಉಲ್ಲಂಘನೆ ಆರೋಪ: ಕೆ.ಬಾಡಗ ಗ್ರಾ.ಪಂ ಉಪಾಧ್ಯಕ್ಷ ಪೊಲೀಸ್ ವಶಕ್ಕೆ

ಮಡಿಕೇರಿ, ಮೇ.10: ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಕಾರ್ಮಿಕರನ್ನು ಕುಟ್ಟದ ಹಳೆಯ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಕರೆದೊಯ್ಯಲು ಯತ್ನಿಸಿದ ಕೆ.ಬಾಡಗ ಗ್ರಾ.ಪಂ ಉಪಾಧ್ಯಕ್ಷ ಸಿ.ಡಿ.ಬೋಪಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಮಿಕರನ್ನು ಸಾಗಿಸುತ್ತಿದ್ದ ಕಾರನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸಿ.ಡಿ.ಬೋಪಣ್ಣ ಹಾಗೂ ಕೇರಳದ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿಡಲಾಗಿದೆ. ಪೊಲೀಸ್ ಅಧಿಕಾರಿಗಳ ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Next Story





