Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಸೀಲ್ ಡೌನ್ ಸಮಸ್ಯೆಗೆ ಶೀಘ್ರವೇ...

ಭಟ್ಕಳ: ಸೀಲ್ ಡೌನ್ ಸಮಸ್ಯೆಗೆ ಶೀಘ್ರವೇ ಸ್ಪಂದನೆ; ಎಸ್.ಪಿ. ದೇವರಾಜ ಭರವಸೆ

ವಾರ್ತಾಭಾರತಿವಾರ್ತಾಭಾರತಿ11 May 2020 10:19 PM IST
share

ಭಟ್ಕಳ: ಭಟ್ಕಳದಲ್ಲಿ ಸೀಲ್ಡೌನ್ ಆದ ನಂತರ ಜನರು ಔಷಧ ಸೇರಿದಂತೆ ಅತಿ ಅವಶ್ಯಕ ವಸ್ತುಗಳಿಗಾಗಿ ತೊಂದರೆ ಪಡುತ್ತಿರು ವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಆದುದರಿಂದ ಒಂದೆರಡು ದಿನಗಳಲ್ಲಿ ಅವಶ್ಯಕ ವಸ್ತುಗಳನ್ನು ಜನರಿಗೆ ತಲುಪಿಸುವ ಹೊಸ ವ್ಯವಸ್ಥೆಯೊಂದನ್ನು ಜಾರಿ ಮಾಡಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ್ ದೇವರಾಜ್ ತಿಳಿಸಿದರು.

ಅವರು ಸೋಮವಾರ ಸಂಜೆ ಇಲ್ಲಿನ ಪ್ರವಾಸಿ ಬಂಗ್ಲೆಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ಸಿಲ್ಡೌನ್ ಸಮಯದಲ್ಲಿ ಎಲ್ಲ ರೀತಿಯಿಂದಲೂ ಪ್ರತಿಯೊಂದು ರಸ್ತೆಗಳನ್ನು ಬಂದ್ ಮಾಡಿದ್ದು ಮತ್ತು ಯಾರಿಗೂ ಕೂಡ ತಿರುಗಾಡಲು ಅನುಮತಿ ಇರದ ಕಾರಣ ಹಳೆಯ ಪಾಸ್ ವ್ಯವಸ್ಥೆ ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿತ್ತು. ಆದರೆ ಇಂದಿನಿಂದ ಕೇವಲ ಎರಡು ದಿನಗಳಿಗಾಗಿ ಮಾತ್ರ ಅವಶ್ಯಕ ವಸ್ತುಗಳಾದ ತರಕಾರಿ, ಹಾಲು ದಿನಸಿ ವಿತರಣೆ, ಪೆಟ್ರೋಲ್, ವೈದ್ಯಕೀಯ(ಔಷಧ) ಕ್ಕಾಗಿ ಹಳೆಯ ಪಾಸ್ ಗಳನ್ನು ಮಾನ್ಯಮಾಡಲಾಗಿದ್ದು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ನಂತರ ಬುಧವಾರದಿಂದ ಹೊಸ ವೆವಸ್ಥೆಯನ್ನು ಜಾರಿಗೊಳಲಾಗುವುದು. ಇದರೊಂದಿಗೆ ಹೊಂದಿಕೊಳ್ಳಲು ಕೆಲ ಸಮಯ ಹಿಡಿಯುತ್ತದೆ ಎಂದ ಅವರು ನಾವು ಸಾರ್ವಜನಿಕರಿಗೆ ಯಾವುದೇ ತೊಂದರೆಯನ್ನು ಕೊಡಲು ಬಯಸುವುದಿಲ್ಲ. ನೀವು ನಮ್ಮ ಮೇಲೆ ನಂಬಿಕೆ ಇಟ್ಟು ಒಂದಿಷ್ಟು ದಿನ ಸುಮ್ಮನಿರಿ ಆಗ ನಾವು ನಿಮಗಾಗಿ ಏನು ಮಾಡುತ್ತೇವೆ ಎಂಬುದನ್ನು ನಾವು ತೋರಿಸುತ್ತೇವೆ ಎಂದ ಅವರು ಸಹಾಯಕ ಆಯುಕ್ತರು, ಡಿ.ವೈ.ಎಸ್.ಪಿ ಜಿಲ್ಲಾಧಿಕಾರಿಗಳು ಹೀಗೆ ಎಲ್ಲ ಹಂತದ ಅಧಿಕಾರಿಗಳು ಜನರಿಗಾಗಿ ತಮ್ಮ ಕಷ್ಟಗಳನ್ನೂ ಮರೆಯುತ್ತಿದ್ದಾರೆ ಎಂದರು.

ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ: ಸಾಮಾಜಿಕ ಜಾಲಾ ತಾಣಗಳಲ್ಲಿ ಕೆಲವು ಪೊಲೀಸ್ ಇಲಾಖೆ ಮತ್ತು ಕೊರೋನ ಕುರಿತಂತೆ ಸುಳ್ಳು ವದಂತಿಗಳನ್ನು ಹರಿಯಬಿಡುತ್ತಿದ್ದು ನಾವು ಅದನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಸಹನೆ ಯಿಂದಿದ್ದೇವೆ. ನಮ್ಮ ಸಹನೆಯನ್ನು ಪರೀಕ್ಷೆಗೊಳಪಡಿಸಬೇಡಿ. ಒಂದು ವೇಳೆ ನಾವು ಸಹನೆ ಮೀರಿದರೆ ಯಾರ್ಯಾರು ಏನು ಬರೆಯುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಜರಗಿಸುವೇವು ಎಂದ ಅವರು ಈಗಾಗಲೆ ಸಾಮಾಜಿಕ ಜಾಲಾತಾಣಗಳಲ್ಲಿ ಸುಳ್ಳು ಮಾಹಿತಿ ನೀಡಿದ ಘಟನೆಗೆ ಸಂಬಂಧಿಸಿದಂತೆ 4 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ಮಾಧ್ಯಮಗಳು ತಮ್ಮ ಸ್ವಾತಂತ್ರ್ಯವನ್ನು ಬಳಸಿಕೊಂಡು ಪತ್ರಿಕೆಗಳಲ್ಲಿ ಏನು ಬೇಕಾದರೂ ಬರೆಯಬಹುದು. ಆದರೆ ಸಮಾಜಕ್ಕೆ ಹಾನಿಯುಂಟಾಗುವ ಯಾವುದನ್ನು ಬರೆಯಲು ಹೋಗಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಭರತ್ ಎಸ್.,  ಡಿವೈಎಸ್ಪಿ ಗೌತಮ್, ತಹಸಿಲ್ದಾರ್ ರವಿಚಂದ್ರ, ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X