Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಒಕ್ಕೂಟ ವ್ಯವಸ್ಥೆಯನ್ನು...

ದೇಶದ ಒಕ್ಕೂಟ ವ್ಯವಸ್ಥೆಯನ್ನು ನೆಲಸಮಗೊಳಿಸದಿರಿ: ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ ನಲ್ಲಿ ಮಮತಾ

ವಾರ್ತಾಭಾರತಿವಾರ್ತಾಭಾರತಿ11 May 2020 11:27 PM IST
share
ದೇಶದ ಒಕ್ಕೂಟ ವ್ಯವಸ್ಥೆಯನ್ನು ನೆಲಸಮಗೊಳಿಸದಿರಿ: ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ ನಲ್ಲಿ ಮಮತಾ

ಹೊಸದಿಲ್ಲಿ, ಎ.12:ಕೊರೋನ ವೈರಸ್ ನಿಯಂತ್ರಿಸುವ ನೆಪದಲ್ಲಿ ಕೇಂದ್ರ ಸರಕಾರವು ರಾಜಕೀಯ ಮಾಡುತ್ತಿದೆ ಮತ್ತು ರಾಜ್ಯಗಳ ನಡುವೆ ತಾರತಮ್ಯವೆಸಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಪ್ರಧಾನಿ ಜೊತೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕಿಡಿಕಾರಿದ್ದಾರೆ.

 ‘‘ರಾಜಕೀಯದ ಆಟವಾಡಲು ಇದು ಸಮಯವಲ್ಲ. ನಮ್ಮ (ರಾಜ್ಯಗಳ) ಅಭಿಪ್ರಾಯಗಳನ್ನು ಯಾವತ್ತೂ ಕೇಳಲಾಗುವುದಿಲ್ಲ. ದೇಶದ ಒಕ್ಕೂಟ ವ್ಯವಸ್ಥೆಯನ್ನು ನೆಲಸಮಗೊಳಿಸದಿರಿ’’ ಎಂದು ಸಭೆಯಲ್ಲಿ ಮಮತಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಆನಂತರ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿದ ಮಮತಾ, ಕೇಂದ್ರ ಸರಕಾರವು ಯಾಕೆ ಯಾವತ್ತೂ ಪಶ್ಚಿಮಬಂಗಾಳವನ್ನು ಟೀಕಿಸುತ್ತಲೇ ಇದೆ. ಇಂದಿನ ಸಭೆಯಲ್ಲಿ ಕೊರೋನ ವೈರಸ್‌ನಿರ್ವಹಣೆಯಲ್ಲಿ ಹಣಕಾಸುವ ನೆರವು ನೀಡುವ ಬಗ್ಗೆ ಕೇಂದ್ರ ಸರಕಾರವು ಯಾವುದೇ ಮಾತನ್ನು ಆಡಿಲ್ಲವೆಂದು ಮಮತಾ ಹೇಳಿದರು.

ರಾಜ್ಯದಲ್ಲಿ ಲಾಕ್‌ಡೌನ್ ನಿಯಮಗಳ ಉಲ್ಲಂಘನೆ ಹಾಗೂ ಸೋಂಕಿತರ ಸಂಖ್ಯೆಯನ್ನು ಮರೆಮಾಚಲಾಗುತ್ತಿದೆಯೆಂಬ ವರದಿಗಳ ಬಗ್ಗೆ ತನಿಖೆ ನಡೆಸಲು ಕೇಂದ್ರ ಸರಕಾರವು ಪಶ್ಚಿಮಬಂಗಾಳಕ್ಕೆ ಅಂತರ್ ಸಚಿವಾಂಗ ಕೇಂದ್ರೀಯ ತಂಡವನ್ನು ಕಳುಹಿಸಿದ ಬಳಿಕ ಮೋದಿ ಸರಕಾರ ಹಾಗೂ ಮಮತಾ ಸರಕಾರದ ನಡುವೆ ಕೊರೋನಾ ಬಿಕ್ಕಟ್ಟು ನಿರ್ವಹಣೆಯ ವಿಚಾರವಾಗಿ ಜಟಾಪಟಿಯೇರ್ಪಟ್ಟಿತ್ತು.

ಪಿಎಂ-ಸಿಎಂಗಳ ಸಭೆಯ ಹೈಲೈಟ್ಸ್

ಮಂಗಳವಾರದಿಂದ ರೈಲು ಸೇವೆಗಳ ಪುನಾರಂಭಿಸುವ ಕೇಂದ್ರದ ನಿರ್ಧಾರಕ್ಕೆ ತೆಲಂಗಾಣ, ತಮಿಳ್ನಾಡು, ಚತ್ತೀಸ್‌ಗಢ ಮುಖ್ಯಮಂತ್ರಿಗಳ ವಿರೋಧ.

ರೈಲು ಸಂಚಾರ ಆರಂಭಗೊಂಡಲ್ಲಿ ಕೋವಿಡ್-19 ಪ್ರಕರಣಗಳು ಉಲ್ಬಣಗೊಳ್ಳಲಿದ್ದು, ತಮ್ಮ ರಾಜ್ಯಗಳಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಲಿವೆ ಎಂದು ಅವು ಆತಂಕ ವ್ಯಕ್ತಪಡಿಸಿವೆ. ಕನಿಷ್ಠ ಮೇ 31ರವರೆಗಾದರೂ ರೈಲು ಸಂಚಾರ ಸ್ಥಗಿತಗೊಳಿಸಬೇಕೆಂದು ಅವು ಆಗ್ರಹಿಸಿವೆ.

► ಮೇ 31ರವರೆಗೆ ಲಾಕ್‌ಡೌನ್ ವಿಸ್ತರಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್ ಆಗ್ರಹ.

► ಕಟ್ಟುನಿಟ್ಟಿನ ನಿರ್ಬಂಧಗಳೊಂದಿಗೆ ರಸ್ತೆ,ರೈಲು ಹಾಗೂ ವಾಯುಯಾನಕ್ಕೆ ಅವಕಾಶ ನೀಡಲು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಒಲವು.

► ಲಾಕ್‌ಡೌನ್ ಬಳಿಕ ದುಡಿಮೆಯಿಲ್ಲದೆ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

► ರಾಜಧಾನಿ ದಿಲ್ಲಿಯಲ್ಲಿ ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿ ಉಳಿದೆಡೆ ಅರ್ಥಿಕ ಚಟುವಟಿಕೆಗಳ ಪುನರಾರಂಭಿಸಲು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗ್ರಹ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X