ಮೇ 13ರಿಂದ ಉಡುಪಿ ಜಿಲ್ಲೆಯಲ್ಲಿ ಖಾಸಗಿ, ಸರಕಾರಿ ಬಸ್ ಸಂಚಾರ ಆರಂಭ: ಡಿಸಿ ಜಗದೀಶ್
ಉಡುಪಿ, ಮೇ 12: ಜನಸಾಮಾನ್ಯರ ಬೇಡಿಕೆಯಂತೆ ಉಡುಪಿ ಜಿಲ್ಲೆಯಲ್ಲಿ ಮೇ 13ರ ಬೆಳಗ್ಗೆಯಿಂದ ಬಸ್ ಸಂಚಾರವನ್ನು ಆರಂಭಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅದರಂತೆ ನಾಳೆಯಿಂದ ಕೆಲವೊಂದು ಖಾಸಗಿ ಮತ್ತು ಕೆಎಸ್ಆರ್ಟಿಸಿ ಬಸ್ಗಳು ಓಡಾಟ ನಡೆಸಲಿವೆ. ಮುಖ್ಯವಾಗಿ ಯಾವುದೇ ಕಾರಣಕ್ಕೂ ಒಂದು ಬಸ್ಸಿನಲ್ಲಿ ಶೇ.50ಕ್ಕಿಂತ ಹೆಚ್ಚು ಸೀಟು ಗಳನ್ನು ತುಂಬಿಸಿಕೊಳ್ಳಬಾರದು. ಅಂತಹ ಬಸ್ಗಳ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ. ಅದೇ ರೀತಿ ಸಾರ್ವಜನಿಕರು ಸುರಕ್ಷಿತ ಅಂತರವನ್ನು ಕಾಪಾಡಬೇಕು ಮತ್ತು ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಹಾಕದಿದ್ದವರ ವಿರುದ್ಧ ಗಂಭೀರವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಆದುದರಿಂದ ಎಲ್ಲರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
Next Story