Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ನಡ ಚಾನೆಲ್ ಗಳ ವಿರುದ್ಧ ಕ್ರಮಕ್ಕೆ...

ಕನ್ನಡ ಚಾನೆಲ್ ಗಳ ವಿರುದ್ಧ ಕ್ರಮಕ್ಕೆ ಮುಂದಾದ ರಾಷ್ಟ್ರೀಯ ಮಹಿಳಾ ಆಯೋಗ

ಮದ್ಯ ಖರೀದಿಸಿದ ಮಹಿಳೆಯರನ್ನು ಅವಮಾನಿಸುವ ರೀತಿಯ ವರದಿ ಪ್ರಕಟಿಸಿದ ಆರೋಪ

ವಾರ್ತಾಭಾರತಿವಾರ್ತಾಭಾರತಿ12 May 2020 5:01 PM IST
share
ಕನ್ನಡ ಚಾನೆಲ್ ಗಳ ವಿರುದ್ಧ ಕ್ರಮಕ್ಕೆ ಮುಂದಾದ ರಾಷ್ಟ್ರೀಯ ಮಹಿಳಾ ಆಯೋಗ

ಬೆಂಗಳೂರು : ಕರ್ನಾಟಕ ಸರಕಾರ ಇತ್ತೀಚೆಗೆ ಲಾಕ್ ಡೌನ್ ನಿರ್ಬಂಧ ಸಡಿಲಿಕೆಗೊಳಿಸಿ ಮದ್ಯ ಮಾರಾಟ ಅಂಗಡಿಗಳಿಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಮದ್ಯದಂಗಡಿಗಳ ಎದುರು ಮದ್ಯ ಖರೀದಿಗಾಗಿ ಗ್ರಾಹಕರ ಉದ್ದುದ್ದ ಸರತಿಯಿತ್ತು. ಈ ಸಾಲಿನಲ್ಲಿ ನಿಂತಿದ್ದ  ಮಹಿಳೆಯರನ್ನು ಅವಹೇಳನಗೈಯ್ಯುವಂತೆ  ಹಾಗೂ ಮಹಿಳೆಯರು ಮದ್ಯ ಖರೀದಿಸುವುದು ಅಪರಾಧವೆಂಬಂತೆ ಬಿಂಬಿಸಲು ಯತ್ನಿಸಿದ ಹಲವು ಕನ್ನಡ ಮಾಧ್ಯಮಗಳ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತಂತೆ ಕೆಲವೊಂದು ಮಾಧ್ಯಮಗಳ ವರದಿಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮ ಮಾತನಾಡಿ, “ಭಾರತದ ಸಂವಿಧಾನ  ಸರ್ವರಿಗೂ ಸಮಾನ ಹಕ್ಕುಗಳನ್ನು ನೀಡಿದೆ ಹಾಗೂ ಮಹಿಳೆಯರು ಎಂಜಾಯ್ ಮಾಡುವ ಹಾಗಿಲ್ಲ ಎನ್ನುವ ರೀತಿಯಲ್ಲಿ ಏನೂ ಇಲ್ಲ'' ಎಂದಿದ್ದಾರೆ.

ಮದ್ಯ ಖರೀದಿಗೆ ಬಂದ ಮಹಿಳೆಯರನ್ನು ಅವಹೇಳನಗೈಯ್ಯುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಿದ ಕೆಲ ಟಿವಿ ವಾಹಿನಿ ವರದಿಗಳ ಕುರಿತಂತೆ ಪರಿಶೀಲಿಸುವುದಾಗಿ ಹಾಗೂ ಯಾರಾದರೂ ನಿಯಮ ಉಲ್ಲಂಘಿಸಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ.

ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಂತ್ರಣ ಕಾಯಿದೆ 1995 ಅನ್ವಯ ಮಹಿಳೆಯರು ಇನ್ನೊಬ್ಬರಿಗೆ ಅಧೀನರಾಗಿ ಇರುವವರು ಹಾಗೂ ಕುಟುಂಬ ಮತ್ತು ಸಮಾಜದಲ್ಲಿ  ಕೆಳಗಿನ ಸ್ತರದ ಅಥವಾ ದ್ವಿತೀಯ ಹಂತದ ಪಾತ್ರ ವಹಿಸುತ್ತಾರೆಂಬ ರೀತಿಯಲ್ಲಿ ಅವರನ್ನು ಬಿಂಬಿಸುವಂತಿಲ್ಲ ಎಂದು ಹೇಳುತ್ತದೆ.

ಟಿವಿ ವಾಹಿನಿಗಳು ಮಹಿಳೆಯೊಬ್ಬಳ ಗುರುತು, ಚಿತ್ರ ಅಥವಾ ವೀಡಿಯೋಗಳನ್ನು ಆಕೆಯ ಅನುಮತಿಯಿಲ್ಲದೆ ತೆಗೆಯುವ ಹಾಗಿಲ್ಲ ಹಾಗೂ ಮಹಿಳೆಯ ಖಾಸಗಿತನವನ್ನು ಗೌರವಿಸಬೇಕು ಎಂದು ಸುದ್ದಿ ಪ್ರಸಾರ ಗುಣಮಟ್ಟ ನಿಯಮಗಳು ತಿಳಿಸುತ್ತವೆ.

ಆದರೆ ಈ ನಿಯಮಗಳ ಹೊರತಾಗಿಯೂ ಹಲವು ಕನ್ನಡ ವಾಹಿನಿಗಳು ಮದ್ಯ ಖರೀದಿಸಲು ಸರತಿ ನಿಂತ ಮಹಿಳೆಯರನ್ನು ತಮ್ಮ ಕಾರ್ಯಕ್ರಮಗಳಲ್ಲಿ ಅವಮಾನಿಸಿವೆ ಎಂದು ಆರೋಪಿಸಲಾಗಿದೆ.

ಕೃಪೆ: newslaundry.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X